Indian Language Bible Word Collections
Proverbs 5
Proverbs Chapters
Proverbs 5 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Proverbs Chapters
Proverbs 5 Verses
1
|
ನನ್ನ ಮಗನೇ, ನನ್ನ ಜ್ಞಾನೋಪದೇಶವನ್ನು ಕೇಳು. ನನ್ನ ವಿವೇಕದ ಮಾತುಗಳಿಗೆ ಗಮನಕೊಡು. |
2
|
ಆಗ ನೀನು ಯೋಗ್ಯವಾಗಿ ನಡೆದುಕೊಳ್ಳುವೆ; ತಿಳುವಳಿಕೆಯಿಂದ ಮಾತಾಡುವೆ. |
3
|
ಮತ್ತೊಬ್ಬನ ಹೆಂಡತಿಯ ಮಾತುಗಳು ಜೇನಿನಂತೆ ಸಿಹಿಯಾಗಿವೆ; ಎಣ್ಣೆಗಿಂತ ನಯವಾಗಿವೆ. |
4
|
ಆದರೆ ಕೊನೆಗೆ ಆಕೆಯು ವಿಷದಂತೆ ಕಹಿಯಾಗುವಳು; ಖಡ್ಗದಂತೆ ತೀಕ್ಷ್ಣವಾಗುವಳು. |
5
|
ಆಕೆಯ ಹೆಜ್ಜೆಗಳು ಮರಣದ ಕಡೆಗೆ ಹೋಗುತ್ತವೆ. ಆಕೆ ನಿನ್ನನ್ನು ನೇರವಾಗಿ ಪಾತಾಳಕ್ಕೆ ನಡೆಸುತ್ತಾಳೆ! |
6
|
ಆಕೆಯನ್ನು ಹಿಂಬಾಲಿಸಬೇಡ! ಆಕೆ ನೀತಿಮಾರ್ಗವನ್ನು ಬಿಟ್ಟುಹೋಗಿದ್ದಾಳೆ; ಅದು ಆಕೆಗೆ ಗೊತ್ತೇ ಇಲ್ಲ. ಎಚ್ಚರಿಕೆಯಿಂದಿರು! ಜೀವ ಮಾರ್ಗವನ್ನು ಹಿಂಬಾಲಿಸು! |
7
|
ಇಂತಿರಲು, ನನ್ನ ಮಗನೇ, ನನಗೆ ಕಿವಿಗೊಡು, ನನ್ನ ಮಾತುಗಳನ್ನು ಮರೆಯಬೇಡ. |
8
|
ವ್ಯಭಿಚಾರಿಣಿಯಿಂದ ದೂರವಾಗಿರು. ಅವಳ ಮನೆಯ ಬಾಗಿಲ ಸಮೀಪಕ್ಕೂ ಹೋಗಬೇಡ. |
9
|
ಒಂದುವೇಳೆ ನೀನು ಹೋದರೆ, ನಿನ್ನ ಮೇಲೆ ಜನರಿಗಿರುವ ಗೌರವವನ್ನು ಕಳೆದುಕೊಳ್ಳುವಿ; ಕ್ರೂರಿಗಳಿಂದ ಯೌವನದಲ್ಲಿಯೇ ಸಾವಿಗೀಡಾಗುವಿ. |
10
|
ನಿನಗೆ ಗೊತ್ತಿಲ್ಲದವರು ನಿನ್ನ ಐಶ್ವರ್ಯವನ್ನೆಲ್ಲಾ ತೆಗೆದುಕೊಳ್ಳುವರು; ನೀನು ದುಡಿದು ಸಂಪಾದಿಸಿದ್ದನ್ನು ಬೇರೆಯವರು ಪಡೆದುಕೊಳ್ಳುವರು. |
11
|
ಕೊನೆಯಲ್ಲಿ, ನಿನ್ನ ಆರೋಗ್ಯವೆಲ್ಲಾ ಕೆಟ್ಟುಹೋಗಿ ನಿನ್ನಲ್ಲಿರುವುದನ್ನೆಲ್ಲಾ ಕಳೆದುಕೊಂಡು ನೀನು ಗೋಳಾಡುವಿ. |
12
|
[This verse may not be a part of this translation] |
13
|
[This verse may not be a part of this translation] |
14
|
ನಾನು ಜನರೆಲ್ಲರ ಎದುರಿನಲ್ಲಿ ನಾಚಿಕೆಗೀಡಾಗಿದ್ದೇನೆ” ಎಂದು ಹೇಳುವಿ. |
15
|
ನಿನ್ನ ಸ್ವಂತ ಹೆಂಡತಿಗೆ ನಂಬಿಗಸ್ತನಾಗಿರು; ನಿನ್ನ ಪ್ರೀತಿಯು ಆಕೆಗೆ ಮಾತ್ರ ಸಲ್ಲಲಿ. |
16
|
ಬೇರೆ ಸ್ತ್ರೀಯರಲ್ಲಿ ನೀನು ಮಕ್ಕಳನ್ನು ಪಡೆಯುವುದು ಒಳ್ಳೆಯದಲ್ಲ. |
17
|
ನಿನ್ನ ಮಕ್ಕಳು ನಿನ್ನವರೇ ಆಗಿರಲಿ; ಪರರು ನಿನ್ನೊಂದಿಗೆ ಪಾಲುಗಾರರಾಗದಿರಲಿ. |
18
|
ಆದ್ದರಿಂದ ಯೌವನಪ್ರಾಯದಲ್ಲಿ ನೀನು ಮದುವೆಮಾಡಿಕೊಂಡ ಸ್ತ್ರೀಯೊಡನೆ ಸಂತೋಷಿಸು. |
19
|
ಆಕೆ ಸುಂದರವಾದ ಜಿಂಕೆಯಂತೆಯೂ ಅಂದವಾದ ಕಾಡುಮೇಕೆಯಂತೆಯೂ ಇದ್ದಾಳೆ. ಆಕೆಯ ಸ್ತನಗಳು ನಿನ್ನನ್ನು ಸಂಪೂರ್ಣವಾಗಿ ತೃಪ್ತಿಪಡಿಸಲಿ. ಆಕೆಯ ಪ್ರೀತಿಯಲ್ಲೇ ಲೀನವಾಗಿರು. |
20
|
ಪರಸ್ತ್ರೀಯಲ್ಲಿ ಮೋಹಗೊಂಡು ಆಕೆಯನ್ನು ಅಪ್ಪಿಕೊಳ್ಳಬೇಡ. |
21
|
ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ; ಯೆಹೋವನು ಅವುಗಳನ್ನು ಪರೀಕ್ಷಿಸುತ್ತಾನೆ. |
22
|
ಕೆಡುಕನ ದುಷ್ಕೃತ್ಯಗಳು ಅವನನ್ನೇ ಹಿಡಿಯುತ್ತವೆ. ಅವನ ಪಾಪಗಳು ಹಗ್ಗದಂತೆ ಅವನನ್ನೇ ಬಂಧಿಸುತ್ತವೆ. |
23
|
ಅವನು ಬುದ್ಧಿವಾದವನ್ನು ತಿರಸ್ಕರಿಸಿದ್ದರಿಂದ ಸಾಯುವನು; ತನ್ನ ಅತಿಮೂರ್ಖತನದಿಂದ ದಾರಿ ತಪ್ಪುವನು. |