1
|
ಕೇಳಿ! ಜ್ಞಾನವೆಂಬಾಕೆಯೂ ವಿವೇಕವೆಂಬಾಕೆಯೂ “ಕಿವಿಗೊಡಿರಿ” ಎಂದು ನಿಮ್ಮನ್ನು ಕೂಗಿ ಕರೆಯುತ್ತಿದ್ದಾಳೆ. |
2
|
ರಸ್ತೆಗಳ ಚೌಕಗಳ ಬಳಿಯಿರುವ ಗುಡ್ಡದ ಮೇಲ್ಭಾಗದಲ್ಲಿ ಆಕೆಯು ನಿಂತುಕೊಂಡಿದ್ದಾಳೆ. |
3
|
ಪಟ್ಟಣದ ಹೆಬ್ಬಾಗಿಲುಗಳ ಬಳಿಯಿಂದಲೂ ತೆರೆದ ಬಾಗಿಲುಗಳ ಬಳಿಯಿಂದಲೂ ಕರೆಯುತ್ತಿದ್ದಾಳೆ. |
4
|
“ಮನುಷ್ಯರೇ, ನಿಮ್ಮನ್ನೇ ಕರೆಯುತ್ತೇನೆ; ಎಲ್ಲಾ ಜನರನ್ನು ಕರೆಯುತ್ತೇನೆ. |
5
|
ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ; ಜ್ಞಾನಹೀನರೇ ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ. |
6
|
ಕೇಳಿರಿ! ಶ್ರೇಷ್ಠವಾದವುಗಳನ್ನೂ ಯಥಾರ್ಥವಾದುವುಗಳನ್ನೂ ನಿಮಗೆ ತಿಳಿಸುವೆನು. |
7
|
ನನ್ನ ಮಾತುಗಳು ಸತ್ಯ. ನನ್ನ ತುಟಿಗಳಿಗೆ ದುಷ್ಟತನ ಅಸಹ್ಯ. |
8
|
ನನ್ನ ಮಾತುಗಳು ನೀತಿಯ ಮಾತುಗಳಾಗಿವೆ. ನನ್ನ ಮಾತುಗಳಲ್ಲಿ ತಪ್ಪಾಗಲಿ ಕಪಟವಾಗಲಿ ಇಲ್ಲವೇ ಇಲ್ಲ. |
9
|
ತಿಳುವಳಿಕೆಯುಳ್ಳವನಿಗೆ ನನ್ನ ಮಾತುಗಳು ಸ್ಪಷ್ಟವಾಗಿವೆ; ವಿವೇಕಿಗೆ ಯಥಾರ್ಥವಾಗಿವೆ. |
10
|
ನನ್ನ ಉಪದೇಶವನ್ನು ಬೆಳ್ಳಿಗಿಂತಲೂ ನನ್ನ ಜ್ಞಾನೋಪದೇಶವನ್ನು ಶುದ್ಧ ಬಂಗಾರಕ್ಕಿಂತಲೂ ಉತ್ತಮವೆಂದು ಸ್ವೀಕರಿಸಿಕೊಳ್ಳಿ. |
11
|
ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಮನುಷ್ಯನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.” ಜ್ಞಾನವು ಮಾಡುವುದೇನು |
12
|
“ನಾನೇ ಜ್ಞಾನ. ನಾನು ಒಳ್ಳೆಯ ನ್ಯಾಯತೀರ್ಪಿನೊಡನೆ ವಾಸಿಸುವೆ. ನಾನು ವಿವೇಕದೊಡನೆಯೂ ಒಳ್ಳೆಯ ಆಲೋಚನೆಯೊಡನೆಯೂ ಇರುವೆನು. |
13
|
ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ. |
14
|
“ಒಳ್ಳೆಯ ಆಲೋಚನೆಗಳೂ ಒಳ್ಳೆಯ ತೀರ್ಪುಗಳೂ ನನ್ನವೇ. ವಿವೇಕವೂ ಸಾಮರ್ಥ್ಯವೂ ನನ್ನಲ್ಲಿವೆ. |
15
|
ನನ್ನ ಸಹಾಯದಿಂದ ರಾಜರುಗಳು ರಾಜ್ಯವಾಳುವರು; ಅಧಿಪತಿಗಳು ನ್ಯಾಯವಾದ ಕಾನೂನುಗಳನ್ನು ಮಾಡುವರು. |
16
|
ನನ್ನ ಸಹಾಯದಿಂದ ಅಧಿಪತಿಗಳು ಆಡಳಿತ ಮಾಡುವರು; ನಾಯಕರು ದೊರೆತನ ಮಾಡುವರು. |
17
|
ನನ್ನನ್ನು ಪ್ರೀತಿಸುವವರನ್ನು ನಾನೂ ಪ್ರೀತಿಸುವೆನು; ಬಹಳವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು. |
18
|
ನನ್ನಲ್ಲಿಯೂ ಸಹ ಕೊಡಲು ಐಶ್ವರ್ಯವಿದೆ ಮತ್ತು ಘನತೆಯಿದೆ. ನಾನು ಶಾಶ್ವತವಾದ ಐಶ್ವರ್ಯವನ್ನೂ ಯಶಸ್ಸನ್ನೂ ಕೊಡುವೆನು. |
19
|
ನಾನು ಕೊಡುವಂಥವುಗಳು ಬಂಗಾರಕ್ಕಿಂತಲೂ ಶ್ರೇಷ್ಠ. ನನ್ನ ಉಡುಗೊರೆಗಳು ಅಪ್ಪಟ ಬೆಳ್ಳಿಗಿಂತಲೂ ಉತ್ತಮ. |
20
|
ನಾನು ನೀತಿಮಾರ್ಗದಲ್ಲಿಯೂ ನ್ಯಾಯಮಾರ್ಗದಲ್ಲಿಯೂ ನಡೆಯುತ್ತೇನೆ. |
21
|
ನನ್ನನ್ನು ಪ್ರೀತಿಸುವವರಿಗೆ ನಾನು ಐಶ್ವರ್ಯವನ್ನು ಕೊಡುವೆನು. ಹೌದು, ಅವರ ಉಗ್ರಾಣಗಳನ್ನು ತುಂಬಿಸುವೆನು. |
22
|
“ಯೆಹೋವನು “ಜ್ಞಾನ”ವೆಂಬ ನನ್ನನ್ನು ತನ್ನ ಸೃಷ್ಟಿ ಕ್ರಮದಲ್ಲಿ ಮೊದಲು ನಿರ್ಮಿಸಿದನು. |
23
|
ನಾನು ಆದಿಯಲ್ಲಿ ನಿರ್ಮಾಣಗೊಂಡೆನು. ಪ್ರಪಂಚವು ಆರಂಭವಾಗುವುದಕ್ಕಿಂತ ಮೊದಲೇ ನಾನು ನಿರ್ಮಿತನಾದೆನು. |
24
|
ನಾನು ಸಾಗರಗಳಿಗಿಂತ ಮೊದಲೇ ಜನಿಸಿದೆನು; ಬುಗ್ಗೆಗಳ ನೀರು ಉಂಟಾಗುವುದಕ್ಕಿಂತ ಮೊದಲೇ ಜನಿಸಿದೆನು. |
25
|
ನಾನು ಪರ್ವತಗಳಿಗಿಂತ ಮೊದಲೇ ಜನಿಸಿದೆನು; ಬೆಟ್ಟಗಳಿಗಿಂತ ಮೊದಲೇ ಹುಟ್ಟಿದೆನು. |
26
|
ಯೆಹೋವನು ಭೂಮಿಯನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಜ್ಞಾನವೆಂಬ ನಾನು ಹುಟ್ಟಿದೆನು. ನಾನು ಬಯಲುಗಳಿಗಿಂತ ಮೊದಲೇ ಹುಟ್ಟಿದೆನು. ಆತನು ಭೂಮಿಯ ಮೊದಲನೆ ಧೂಳಿನ ಕಣವನ್ನು ಉಂಟುಮಾಡುವುದಕ್ಕಿಂತ ಮೊದಲೇ ನಾನು ಹುಟ್ಟಿದೆನು. |
27
|
“ಯೆಹೋವನು ಆಕಾಶವನ್ನು ಸೃಷ್ಟಿಸಿದ ಸಮಯದಲ್ಲಿ ಜ್ಞಾನವೆಂಬ ನಾನು ಅಲ್ಲಿದ್ದೆನು. ಆತನು ಸಾಗರದ ಎಲ್ಲೆಗಳನ್ನು ಗೊತ್ತುಪಡಿಸಿದಾಗ ಜ್ಞಾನವೆಂಬ ನಾನು ಅಲ್ಲಿದ್ದೆನು. |
28
|
ಆತನು ಆಕಾಶದಲ್ಲಿ ಮೋಡಗಳನ್ನೂ ಸಾಗರಗಳಲ್ಲಿ ನೀರನ್ನೂ ನೆಲೆಗೊಳಿಸಿದಾಗ ನಾನು ಅಲ್ಲಿದ್ದೆನು. |
29
|
ಆತನು ಸಮುದ್ರಗಳ ನೀರಿಗೆ ಎಲ್ಲೆಕಟ್ಟನ್ನು ಹಾಕಿದಾಗಲೂ ಭೂಮಿಗೆ ಅಸ್ತಿವಾರಗಳನ್ನು ಹಾಕಿದಾಗಲೂ ನಾನು ಅಲ್ಲಿದ್ದೆನು. |
30
|
ನಾನು ಆತನ ಪಕ್ಕದಲ್ಲಿ ನಿಪುಣ ಕೆಲಸಗಾರನಂತಿದ್ದೆನು. ನಾನು ಪ್ರತಿದಿನವೂ ಸಂತೋಷಪಡುತ್ತಾ ಆತನ ಸನ್ನಿಧಿಯಲ್ಲಿ ಯಾವಾಗಲೂ ಉಲ್ಲಾಸಿಸುತ್ತಿದ್ದೆನು. |
31
|
ಆತನು ಸೃಷ್ಟಿಸಿದ ಭೂಲೋಕದ ವಿಷಯದಲ್ಲಿ ಉಲ್ಲಾಸಿಸುತ್ತಾ ಮಾನವ ಸಂತಾನದ ವಿಷಯದಲ್ಲಿ ಹರ್ಷಿಸುತ್ತಾ ಇದ್ದೆನು. |
32
|
“ಆದ್ದರಿಂದ ಮಕ್ಕಳೇ, ನನಗೆ ಕಿವಿಗೊಡಿರಿ! ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರಾಗಿದ್ದಾರೆ. |
33
|
ನನ್ನ ಉಪದೇಶಗಳನ್ನು ಕೇಳಿ ಜ್ಞಾನವಂತರಾಗಿರಿ. ಕಿವಿಗೊಡದಿರಬೇಡಿ! |
34
|
ನನಗೆ ಕಿವಿಗೊಡುವವನು ಧನ್ಯನಾಗಿದ್ದಾನೆ. ಅವನು ಪ್ರತಿದಿನ ನನ್ನ ಮನೆಬಾಗಿಲುಗಳ ಬಳಿಯಲ್ಲೂ ನನ್ನ ಬಾಗಿಲಿನ ನಿಲುವುಗಳ ಬಳಿಯಲ್ಲೂ ಕಾದುಕೊಂಡಿರುತ್ತಾನೆ. |
35
|
ನನ್ನನ್ನು ಕಂಡುಕೊಂಡಂಥ ಜೀವವನ್ನು ಕಂಡುಕೊಳ್ಳುತ್ತಾನೆ. ಅವನಿಗೆ ಯೆಹೋವನ ಕೃಪೆಯು ದೊರೆಯುತ್ತದೆ. |
36
|
ಆದರೆ ನನ್ನನ್ನು ಕಂಡುಕೊಳ್ಳಲಾರದವನು ತನಗೇ ಕೇಡುಮಾಡಿಕೊಳ್ಳುವನು. ನನ್ನನ್ನು ದ್ವೇಷಿಸುವ ಜನರೆಲ್ಲರೂ ಮರಣವನ್ನು ಪ್ರೀತಿಸುವರು.” |
Proverbs 8:1 Kannada Language Bible Words basic statistical display
COMING SOON ...