1
|
ಯಾವನು ದುಷ್ಟರ ಸಲಹೆಯನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು. |
2
|
ನೀತಿವಂತನಾದ ಅವನು ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದಿಸುತ್ತಾ ಅದನ್ನೇ ಹಗಲಿರುಳು ಧ್ಯಾನಿಸುವನು. |
3
|
ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು. |
4
|
ದುಷ್ಟರಾದರೊ ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು. |
5
|
ನೀತಿವಂತರು ನ್ಯಾಯನಿರ್ಣಯಿಸುವಾಗ ಪಾಪಿಗಳಿಗೂ ದುಷ್ಟರಿಗೂ ಅಪರಾಧಿಗಳೆಂದು ತೀರ್ಪಾಗುವುದು. |
6
|
ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೊ ನಾಶಪಡಿಸುವನು. |
Psalms 1:4 Kannada Language Bible Words basic statistical display
COMING SOON ...