Bible Languages

Indian Language Bible Word Collections

Bible Versions

Books

Psalms Chapters

Psalms 100 Verses

Bible Versions

Books

Psalms Chapters

Psalms 100 Verses

1 ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಗಾಯನ ಮಾಡಿರಿ!
2 ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ; ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ!
3 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಪ್ರಜೆಯೂ ಮಂದೆಯೂ ಆಗಿದ್ದೇವೆ.
4 ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ.
5 ಯೆಹೋವನು ಒಳ್ಳೆಯವನು! ಆತನ ಪ್ರೀತಿಯು ಶಾಶ್ವತವಾದದ್ದು, ಆತನ ನಂಬಿಗಸ್ತಿಕೆಯು ನಿರಂತರವಾದದ್ದು.

Psalms 100:2 Kannada Language Bible Words basic statistical display

COMING SOON ...

×

Alert

×