Bible Languages

Indian Language Bible Word Collections

Bible Versions

Books

Psalms Chapters

Psalms 102 Verses

Bible Versions

Books

Psalms Chapters

Psalms 102 Verses

1 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ಸಹಾಯಕ್ಕಾಗಿ ನಾನಿಡುವ ಮೊರೆಯನ್ನು ಲಾಲಿಸು.
2 ಯೆಹೋವನೇ, ನಾನು ಆಪತ್ತುಗಳಲ್ಲಿರುವಾಗ ನನಗೆ ವಿಮುಖನಾಗಬೇಡ, ನನಗೆ ಕಿವಿಗೊಡು. ಸಹಾಯಕ್ಕಾಗಿ ಮೊರೆಯಿಡುವಾಗ ಬೇಗನೆ ಸದುತ್ತರವನ್ನು ದಯಪಾಲಿಸು.
3 ನನ್ನ ಜೀವಮಾನವು ಹೊಗೆಯಂತೆ ಕಣ್ಮರೆಯಾಗುತ್ತಿದೆ. ನನ್ನ ಎಲುಬುಗಳು ಬೆಂಕಿಯಂತೆ ಸುಟ್ಟುಹೋಗುತ್ತಿದೆ.
4 ನಾನು ನಿರ್ಬಲನಾಗಿ ಒಣಗಿ ಹೋಗುತ್ತಿರುವ ಹುಲ್ಲಿನಂತಿದ್ದೇನೆ. ನಾನು ಊಟವನ್ನೂ ಮರೆತು ಬಿಡುವೆನು.
5 ದೀರ್ಘ ದುಃಖದಿಂದಾಗಿ ನನ್ನ ಎಲುಬುಗಳು ಚರ್ಮಕ್ಕೆ ಅಂಟಿಕೊಂಡಿವೆ.
6 ಅರಣ್ಯದಲ್ಲಿರುವ ಗೂಬೆಯಂತೆ ಒಬ್ಬಂಟಿಗನಾಗಿದ್ದೇನೆ. ಪಾಳುಬಿದ್ದ ಕಟ್ಟಡಗಳಲ್ಲಿರುವ ಗೂಬೆಯಂತೆ ನಾನು ಒಬ್ಬಂಟಿಗನಾಗಿದ್ದೇನೆ.
7 ನನಗೆ ನಿದ್ರೆಯೂ ಬಾರದು. ಮೇಲ್ಛಾವಣಿಗೆಯ ಮೇಲಿರುವ ಏಕಾಂಗಿಯಾದ ಪಕ್ಷಿಯಂತೆ ನಾನಿದ್ದೇನೆ.
8 ನನ್ನ ವೈರಿಗಳು ನನಗೆ ಅವಮಾನ ಮಾಡುತ್ತಲೇ ಇರುವರು. ಅವರು ನನ್ನನ್ನು ದೃಷ್ಟಾಂತಮಾಡಿ ಶಪಿಸುವರು.
9 ನನ್ನ ದುಃಖವೇ ನನಗೆ ಆಹಾರವಾಯಿತು. ಕಣ್ಣೀರು ನನ್ನ ಪಾನೀಯದೊಳಗೆ ತೊಟ್ಟಿಕ್ಕುತ್ತಿದೆ.
10 ನೀನು ನನ್ನ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ನೀನು ನನ್ನನ್ನು ಮೇಲೆತ್ತಿ ಎಸೆದು ಬಿಟ್ಟೆಯಲ್ಲಾ!
11 ನನ್ನ ಜೀವಮಾನವು ಸಂಜೆಯ ನೆರಳಿನಂತೆ ಕೊನೆಗೊಂಡಿದೆ. ನಾನು ಒಣಗಿ ಸಾಯುತ್ತಿರುವ ಹುಲ್ಲಿನಂತಿದ್ದೇನೆ.
12 ಯೆಹೋವನೇ, ನೀನಾದರೊ ಎಂದೆಂದಿಗೂ ಜೀವಿಸುವೆ! ನಿನ್ನ ಹೆಸರು ಶಾಶ್ವತವಾದದ್ದು!
13 ನೀನು ಎದ್ದು ಚೀಯೋನನ್ನು ಸಂತೈಸುವೆ. ನೀನು ಚೀಯೋನಿಗೆ ದಯೆತೋರುವ ಕಾಲ ಬರುತ್ತಿದೆ.
14 ನಿನ್ನ ಸೇವಕರು ಆಕೆಯ (ಜೆರುಸಲೇಮಿನ) ಕಲ್ಲುಗಳನ್ನು ಪ್ರೀತಿಸುವರು. ಅವರು ಆ ಪಟ್ಟಣದ ಧೂಳನ್ನು ಇಷ್ಟಪಡುವರು!
15 ಜನರು ಯೆಹೋವನ ಹೆಸರನ್ನು ಆರಾಧಿಸುತ್ತಾರೆ. ದೇವರೇ, ಭೂರಾಜರುಗಳೆಲ್ಲಾ ನಿನ್ನನ್ನು ಸನ್ಮಾನಿಸುವರು.
16 ಯಾಕಂದರೆ, ಯೆಹೋವನು ಚೀಯೋನನ್ನು ಮತ್ತೆ ಕಟ್ಟುವನು. ಜನಾಂಗಗಳು ಆಕೆಯ (ಜೆರುಸಲೇಮಿನ) ವೈಭವವನ್ನು ಮತ್ತೆ ನೋಡುವರು.
17 ಆತನು ನಿರ್ಗತಿಕರ ಪ್ರಾರ್ಥನೆಗಳಿಗೆ ಉತ್ತರ ಕೊಡುವನು. ಅವರ ಮೊರೆಗಳನ್ನು ಆತನು ತಿರಸ್ಕರಿಸುವುದಿಲ್ಲ.
18 ಮುಂದಿನ ತಲೆಮಾರುಗಳವರಿಗಾಗಿ ಇವುಗಳನ್ನು ಬರೆದಿಡಿ. ಮುಂದಿನ ಕಾಲದಲ್ಲಿ ಅವರು ಯೆಹೋವನನ್ನು ಸ್ತುತಿಸುತ್ತಾರೆ.
19 ಯೆಹೋವನು ಉನ್ನತದಲ್ಲಿರುವ ತನ್ನ ಪರಿಶುದ್ಧ ಸ್ಥಳದಿಂದ ಕೆಳಗೆ ನೋಡುತ್ತಾನೆ. ಆತನು ಪರಲೋಕದಿಂದ ಭೂಮಿಯನ್ನು ನೋಡುತ್ತಾನೆ.
20 ಆತನು ಸೆರೆಯಾಳುಗಳ ಪ್ರಾರ್ಥನೆಗಳನ್ನು ಕೇಳುತ್ತಾನೆ. ಮರಣದಂಡನೆಗೆ ಒಳಗಾದವರನ್ನು ಆತನು ಬಿಡಿಸುತ್ತಾನೆ.
21 ಆಗ ಚೀಯೋನಿನಲ್ಲಿರುವ ಜನರು ಯೆಹೋವನ ಕುರಿತು ಪ್ರಕಟಿಸುವರು: ಅವರು ಆತನ ಹೆಸರನ್ನು ಜೆರುಸಲೇಮಿನಲ್ಲಿ ಸ್ತುತಿಸುವರು.
22 ಜನಾಂಗಗಳು ಒಟ್ಟುಗೂಡಿ ಬರುವವು. ರಾಜ್ಯಗಳು ಯೆಹೋವನ ಸೇವೆಮಾಡಲು ಬರುವವು.
23 ನನ್ನ ಬಲವು ಕುಂದಿಹೋಯಿತು. ನನ್ನ ಆಯುಷ್ಕಾಲವು ಕಡಿಮೆಯಾಯಿತು.
24 ಆದ್ದರಿಂದ ನಾನು ಇಂತೆಂದೆನು: “ಯೌವನಸ್ಥನಾಗಿರುವಾಗಲೇ ನನ್ನನ್ನು ಸಾಯಿಸಬೇಡ. ದೇವರೇ, ನೀನು ಶಾಶ್ವತವಾಗಿ ಜೀವಿಸುವೆ!
25 ಬಹುಕಾಲದ ಹಿಂದೆ, ನೀನು ಪ್ರಪಂಚವನ್ನು ಸೃಷ್ಟಿಮಾಡಿದೆ. ನೀನು ಆಕಾಶವನ್ನು ನಿನ್ನ ಕೈಗಳಿಂದ ನಿರ್ಮಿಸಿದೆ!
26 ಲೋಕವೂ ಆಕಾಶವೂ ಕೊನೆಗೊಳುತ್ತವೆ. ನೀನಾದರೊ ಶಾಶ್ವತವಾಗಿರುವೆ! ಅವು ಬಟ್ಟೆಗಳಂತೆ ಹಳೆಯದಾಗುತ್ತವೆ. ನೀನು ಅವುಗಳನ್ನು ಉಡುಪುಗಳಂತೆ ಬದಲಾಯಿಸುವೆ. ಅವುಗಳೆಲ್ಲಾ ಬದಲಾಗುತ್ತವೆ.
27 ದೇವರೇ, ನೀನಾದರೊ ಎಂದಿಗೂ ಬದಲಾಗುವುದಿಲ್ಲ. ನೀನು ಎಂದೆಂದಿಗೂ ಜೀವಿಸುವೆ!
28 ನಾವು ನಿನ್ನ ಸೇವಕರಾಗಿದ್ದೇವೆ. ಇಲ್ಲಿ ನಮ್ಮ ಮಕ್ಕಳು ವಾಸವಾಗಿರುತ್ತಾರೆ; ಅವರ ಸಂತತಿಗಳವರೂ ನಿನ್ನನ್ನು ಆರಾಧಿಸಲು ಇಲ್ಲಿರುತ್ತಾರೆ.”

Psalms 102:1 Kannada Language Bible Words basic statistical display

COMING SOON ...

×

Alert

×