1
|
ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ನನ್ನ ಸರ್ವಾಂಗಗಳೇ, ಆತನ ಪವಿತ್ರ ಹೆಸರನ್ನು ಕೊಂಡಾಡಿರಿ! |
2
|
ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡಿ. |
3
|
ಆತನು ನಮ್ಮೆಲ್ಲರ ಪಾಪಗಳನ್ನು ಕ್ಷಮಿಸುವನು; ನಮ್ಮ ಕಾಯಿಲೆಗಳನ್ನೆಲ್ಲಾ ವಾಸಿಮಾಡುವನು. |
4
|
ಆತನು ನಮ್ಮಜೀವವನ್ನು ನಾಶನದಿಂದ ರಕ್ಷಿಸಿ ನಮಗೆ ಪ್ರೀತಿಯನ್ನೂ ಕನಿಕರವನ್ನೂ ತೋರುವನು. |
5
|
ಆತನು ನಮಗೆ ಸುವರಗಳನ್ನು ಹೇರಳವಾಗಿ ದಯಪಾಲಿಸುವನು. ಹದ್ದಿಗೆ ಬರುವಂತೆಯೇ ನಮಗೆ ಯೌವನವನ್ನು ಬರಮಾಡುತ್ತಾನೆ. |
6
|
ಯೆಹೋವನು ನೀತಿವಂತನಾಗಿದ್ದಾನೆ. ಕುಗ್ಗಿಹೋದವರಿಗೆ ಆತನು ನ್ಯಾಯ ದೊರಕಿಸುವನು. |
7
|
ಆತನು ತನ್ನ ಕಟ್ಟಳೆಗಳನ್ನು ಮೋಶೆಗೆ ಉಪದೇಶಿಸಿದನು; ತನ್ನ ಮಹತ್ಕಾರ್ಯಗಳನ್ನು ಇಸ್ರೇಲರಿಗೆ ತೋರಿಸಿದನು. |
8
|
ಯೆಹೋವನು ಕನಿಕರವುಳ್ಳವನೂ ಕೃಪಾಪೂರ್ಣನೂ ತಾಳ್ಮೆಯುಳ್ಳವನೂ ಪ್ರೀತಿಪೂರ್ಣನೂ ಆಗಿದ್ದಾನೆ. |
9
|
ಆತನು ಯಾವಾಗಲೂ ಟೀಕಿಸುವವನಲ್ಲ. ಆತನು ನಮ್ಮ ಮೇಲೆ ನಿತ್ಯವೂ ಕೋಪವಾಗಿರುವವನಲ್ಲ. |
10
|
ನಾವು ದೇವರಿಗೆ ವಿರೋಧವಾಗಿ ಪಾಪಮಾಡಿದೆವು. ಆದರೂ ತಕ್ಕ ದಂಡನೆಯನ್ನು ಆತನು ನಮಗೆ ಕೊಡಲಿಲ್ಲ. |
11
|
ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವಾಗಿದೆಯೋ ಆತನ ಮಹಾಪ್ರೀತಿಯು ಆತನ ಭಕ್ತರ ಮೇಲೆ ಅಷ್ಟೇ ಅಪಾರವಾಗಿದೆ. |
12
|
ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟೋ ದೂರವಿರುವಂತೆ ನಮ್ಮ ಪಾಪಗಳನ್ನು ನಮ್ಮಿಂದ ತೆಗೆದು ದೂರ ಮಾಡಿದ್ದಾನೆ. |
13
|
ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನ ಭಕ್ತರನ್ನು ಕನಿಕರಿಸುವನು. |
14
|
ಆತನು ನಮ್ಮನ್ನು ಸಂಪೂರ್ಣವಾಗಿ ಬಲ್ಲನು. ನಾವು ಮಣ್ಣಿನಿಂದ ನಿರ್ಮಾಣಗೊಂಡದ್ದೂ ಆತನಿಗೆ ತಿಳಿದಿದೆ. |
15
|
ನಮ್ಮ ಜೀವಮಾನಗಳು ಕೊಂಚವೆಂಬುದು ಆತನಿಗೆ ಗೊತ್ತಿದೆ. ನಮ್ಮ ಜೀವಮಾನಗಳು ಹುಲ್ಲಿನಂತಿವೆ ಎಂಬುದೂ ಆತನಿಗೆ ತಿಳಿದಿದೆ. |
16
|
ನಾವು ಅಡವಿಯ ಚಿಕ್ಕ ಹೂವಿನಂತಿದ್ದೇವೆ ಎಂಬುದು ಆತನಿಗೆ ಗೊತ್ತಿದೆ. ನಮ್ಮ ಹೂವು ಬೇಗನೆ ಬೆಳೆದರೂ ಬಿಸಿಗಾಳಿ ಬೀಸಿದಾಗ ಒಣಗಿ ಹೋಗುವುದು. ಬಳಿಕ, ಅದು ಬೆಳೆದ ಸ್ಥಳವನ್ನೂ ಗುರುತಿಸಲಾಗದು. |
17
|
ಆದರೆ ಯೆಹೋವನು ತನ್ನ ಭಕ್ತರನ್ನು ಪ್ರೀತಿಸುತ್ತಲೇ ಬಂದನು. ಇನ್ನು ಮುಂದೆಯೂ ಪ್ರೀತಿಸುತ್ತಲೇ ಇರುವನು. ಆತನು ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಒಳ್ಳೆಯವನಾಗಿರುವನು. |
18
|
ಆತನ ಒಡಂಬಡಿಕೆಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ. ಆತನ ಆಜ್ಞೆಗಳಿಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ. |
19
|
ಯೆಹೋವನ ಸಿಂಹಾಸನವು ಪರಲೋಕದಲ್ಲಿದೆ. ಆತನು ಸಮಸ್ತವನ್ನು ಆಳುವನು. |
20
|
ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ. |
21
|
ಆತನ ಸೈನ್ಯಗಳೇ, ಚಿತ್ತವನ್ನು ನೇರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ. |
22
|
ಸರ್ವಸ್ಥಳಗಲ್ಲಿರುವ ಸಮಸ್ತವನ್ನು ಸೃಷ್ಟಿಸಿದಾತನು ಯೆಹೋವನೇ ಸರ್ವಸ್ಥಳಗಳಲ್ಲಿರುವ ಸಮಸ್ತಕ್ಕೂ ದೇವರೇ ಅಧಿಪತಿ. ಅವುಗಳೆಲ್ಲಾ ಆತನನ್ನು ಕೊಂಡಾಡಲಿ! ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! |
Psalms 103:1 Kannada Language Bible Words basic statistical display
COMING SOON ...