1
|
ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಯೆಹೋವನೇ, ನನ್ನ ದೇವರೇ, ನೀನು ಬಹಳ ದೊಡ್ಡವನು! ನೀನು ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಂಡಿರುವೆ. |
2
|
ನೀನು ಬೆಳಕನ್ನು ನಿಲುವಂಗಿಯಂತೆ ಧರಿಸಿಕೊಂಡಿರುವೆ ನೀನು ಆಕಾಶಮಂಡಲವನ್ನು ಪರದೆಯಂತೆ ಹರಡಿರುವೆ. |
3
|
ನಿನ್ನ ಮನೆಯನ್ನು ಅವುಗಳ ಮೇಲೆ ಕಟ್ಟಿರುವೆ. ದಟ್ಟವಾದ ಮೋಡಗಳನ್ನು ರಥಗಳನ್ನಾಗಿ ಮಾಡಿಕೊಂಡು ಗಾಳಿಯ ರೆಕ್ಕೆಗಳ ಮೇಲೆ ಆಕಾಶದಲ್ಲಿ ಸಂಚರಿಸುವೆ. |
4
|
ಗಾಳಿಯನ್ನು ನಿನ್ನ ದೂತರನ್ನಾಗಿಯೂ ಬೆಂಕಿಯನ್ನು ನಿನ್ನ ಸೇವಕರನ್ನಾಗಿಯೂ ಮಾಡಿರುವೆ. |
5
|
ಭೂಮಿಯನ್ನು ನೀನು ಅಸ್ತಿವಾರದ ಮೇಲೆ ಕಟ್ಟಿರುವುದರಿಂದ ಅದೆಂದಿಗೂ ನಾಶವಾಗದು. |
6
|
ನೀನು ಭೂಮಿಗೆ ನೀರನ್ನು ಕಂಬಳಿಯಂತೆ ಹೊದಿಸಿರುವೆ. ಅದು ಬೆಟ್ಟಗಳನ್ನು ಮುಚ್ಚಿಕೊಂಡಿತು. |
7
|
ನೀನು ಆಜ್ಞಾಪಿಸಲು ಅದು ಓಡಿಹೋಯಿತು. ದೇವರೇ, ನೀನು ನೀರಿನತ್ತ ಘರ್ಜಿಸಲು ಅದು ಓಡಿಹೋಯಿತು. |
8
|
ಜಲರಾಶಿಗಳು ಬೆಟ್ಟಗಳಿಂದ ಇಳಿದು ಕಣಿವೆಗಳಿಗೂ ನೀನು ಗೊತ್ತುಪಡಿಸಿದ ಸ್ಥಳಗಳಿಗೂ ಹರಿದುಹೋದವು. |
9
|
ನೀನು ಸಮುದ್ರಗಳಿಗೆ ಮೇರೆಗಳನ್ನು ಗೊತ್ತುಪಡಿಸಿರುವುದರಿಂದ ನೀರಿನಿಂದ ಭೂಮಿಯು ಮತ್ತೆಂದಿಗೂ ಆವೃತವಾಗದು. |
10
|
ನೀನು ನೀರನ್ನು ಬುಗ್ಗೆಗಳಿಂದ ತೊರೆಗಳಿಗೆ ಹರಿಯಮಾಡುವೆ. ಬೆಟ್ಟದ ತೊರೆಗಳ ಮೂಲಕ ನೀರು ಹರಿದು ಹೋಗುವುದು. |
11
|
ತೊರೆಗಳು ಎಲ್ಲಾ ಕಾಡುಪ್ರಾಣಿಗಳಿಗೆ ನೀರನ್ನು ಕೊಡುತ್ತವೆ. ಕಾಡುಕತ್ತೆಗಳು ಸಹ ನೀರಿಗಾಗಿ ಅಲ್ಲಿಗೆ ಬರುತ್ತವೆ. |
12
|
ಕಾಡುಪಕ್ಷಿಗಳು ಬಂದು ನೀರಿನ ಹಳ್ಳಗಳ ಬಳಿಯಲ್ಲಿ ವಾಸಿಸುತ್ತವೆ. ಸಮೀಪದ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ. |
13
|
ಆತನು ಬೆಟ್ಟಗಳ ಮೇಲೆ ಮಳೆಯನ್ನು ಸುರಿಸುವನು. ಆತನ ಸೃಷ್ಟಿಗಳು ಭೂಮಿಗೆ ಅಗತ್ಯವಾದ ಪ್ರತಿಯೊಂದನ್ನೂ ಒದಗಿಸುತ್ತವೆ. |
14
|
ನೀನು ಪಶುಗಳಿಗೋಸ್ಕರ ಹುಲ್ಲನ್ನು ಬೆಳೆಯ ಮಾಡುವೆ. ನಾವು ದುಡಿದು ಬೆಳೆಸುವುದಕ್ಕಾಗಿ ಸಸಿಗಳನ್ನು ಕೊಟ್ಟಿರುವೆ. ಅವು ಬೆಳೆದು ನಮಗೆ ಆಹಾರವನ್ನು ಒದಗಿಸುತ್ತವೆ. |
15
|
ನಮ್ಮನ್ನು ಸಂತೋಷಪಡಿಸುವ ದ್ರಾಕ್ಷಾರಸವನ್ನೂ ನಮ್ಮ ಚರ್ಮವನ್ನು ಮೃದುಗೊಳಿಸುವ ಎಣ್ಣೆಯನ್ನೂ ನಮ್ಮನ್ನು ಬಲಗೊಳಿಸುವ ಆಹಾರವನ್ನೂ ನಮಗೆ ದೇವರು ಕೊಡುತ್ತಾನೆ. |
16
|
ಲೆಬನೋನಿನ ದೇವದಾರು ವೃಕ್ಷಗಳು ಯೆಹೋವನವೇ, ಅವುಗಳನ್ನು ನೆಟ್ಟಾತನು ಯೆಹೋವನೇ. ಆತನೇ ಅವುಗಳಿಗೆ ಬೇಕಾದ ನೀರನ್ನು ಒದಗಿಸುವನು. |
17
|
ಪಕ್ಷಿಗಳು ಗೂಡುಗಳನ್ನು ಆ ಮರಗಳಲ್ಲಿ ಕಟ್ಟಿಕೊಳ್ಳುತ್ತವೆ. ದೊಡ್ಡ ಕೊಕ್ಕರೆಗಳು ತುರಾಯಿ ಮರಗಳಲ್ಲಿ ಜೀವಿಸುತ್ತವೆ. |
18
|
ಎತ್ತರವಾದ ಬೆಟ್ಟಗಳು ಜಿಂಕೆಗಳಿಗೆ ವಾಸಸ್ಥಳವಾಗಿವೆ. ದೂಡ್ಡ ಬಂಡೆಗಳು ಬೆಟ್ಟದ ಮೊಲಗಳಿಗೆ ಆಶ್ರಯ ಸ್ಥಾನಗಳಾಗಿವೆ. |
19
|
ವಿಶೇಷಕಾಲಗಳ ಸೂಚನೆಗಾಗಿ ನೀನು ನಮಗೆ ಚಂದ್ರನನ್ನು ಕೊಟ್ಟಿರುವೆ. ಸೂರ್ಯನಿಗೆ ತಾನು ಮುಳುಗತಕ್ಕ ಸಮಯವು ಯಾವಾಗಲೂ ತಿಳಿದಿದೆ. |
20
|
ನೀನು ಕತ್ತಲೆಯನ್ನು ರಾತ್ರಿಯನ್ನಾಗಿ ಮಾಡಿದೆ. ಕಾಡುಪ್ರಾಣಿಗಳು ರಾತ್ರಿಯಲ್ಲಿ ಹೊರಬಂದು ಸುತ್ತಮುತ್ತ ಓಡಾಡುತ್ತವೆ. |
21
|
ಸಿಂಹಗಳು ಬೇಟೆಯಾಡುವಾಗ ಆಹಾರಕ್ಕಾಗಿ ದೇವರನ್ನು ಕೇಳಿಕೊಳ್ಳುತ್ತಿವೆಯೊ ಎಂಬಂತೆ ಘರ್ಜಿಸುತ್ತವೆ. |
22
|
ಸೂರ್ಯನು ಮೇಲೇರುವಾಗ, ಪ್ರಾಣಿಗಳು ತಮ್ಮ ಗುಹೆಗಳಿಗೆ ಹೋಗಿ ವಿಶ್ರಮಿಸಿಕೊಳ್ಳುತ್ತವೆ. |
23
|
ಬಳಿಕ ಜನರು ಕೆಲಸ ಕಾರ್ಯಗಳಿಗಾಗಿ ಹೊರಟು ಸಾಯಂಕಾಲದವರೆಗೂ ದುಡಿಯುವರು. |
24
|
ಯೆಹೋವನೇ, ನೀನು ಅನೇಕ ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ನೀನು ಸೃಷ್ಟಿಸಿದ ವಸ್ತುಗಳಿಂದ ಭೂಮಿಯು ತುಂಬಿಹೋಗಿದೆ. ನಿನ್ನ ಪ್ರತಿಯೊಂದು ಕಾರ್ಯದಲ್ಲೂ ನಿನ್ನ ಜ್ಞಾನವನ್ನು ಕಾಣಬಲ್ಲವು. |
25
|
ಇಗೋ ವಿಶಾಲವಾದ ಸಮುದ್ರವನ್ನು ನೋಡು. ಅದರೊಳಗೆ ಅನೇಕ ಬಗೆಯ ದೊಡ್ಡಜೀವಿಗಳೂ ನಾನಾ ಬಗೆಯ ಚಿಕ್ಕಜೀವಿಗಳೂ ಅಸಂಖ್ಯಾತವಾಗಿವೆ. |
26
|
ನೀನು ಸೃಷ್ಟಿಸಿದ ಲಿವ್ಯಾತಾನನು ಸಮುದ್ರದಲ್ಲಿ ಆಟವಾಡುತ್ತಿದ್ದರೂ ಹಡಗು ಸಮುದ್ರದ ಮೇಲೆ ಸಂಚರಿಸುವುದು. |
27
|
ಈ ಜೀವಿಗಳೆಲ್ಲಾ ನಿನ್ನನ್ನು ಅವಲಂಭಿಸಿಕೊಂಡಿವೆ. ಅವುಗಳಿಗೆ ಸರಿಸಮಯದಲ್ಲಿ ಆಹಾರವನ್ನು ಕೊಡುವಾತನು ನೀನೇ. |
28
|
ಸರ್ವಜೀವಿಗಳಿಗೆ ಆಹಾರವನ್ನು ಕೊಡುವಾತನು ನೀನೇ. ನೀನು ಕೈತೆರೆದು ಒಳ್ಳೆಯ ಆಹಾರವನ್ನು ಕೊಡಲು ಅವು ತಿಂದು ತೃಪ್ತಿಯಾಗುತ್ತವೆ. |
29
|
ನೀನು ಅವುಗಳಿಗೆ ವಿಮುಖನಾದಾಗ ಅವು ಭಯಗೊಳ್ಳುತ್ತವೆ. ಅವುಗಳ ಶ್ವಾಸವು ಹೋಗಿ ಬಲಹೀನತೆಯಿಂದ ಸತ್ತು ಮತ್ತೆ ಮಣ್ಣಾಗುತ್ತವೆ. |
30
|
ನಿನ್ನ ಜೀವಶ್ವಾಸವನ್ನು ಊದುವಾಗ ಅವು ಸೃಷ್ಟಿಯಾಗುತ್ತವೆ. ನೀನು ಭೂಮಿಯನ್ನು ಮತ್ತೆ ನೂತನ ಪಡಿಸುವೆ. |
31
|
ಯೆಹೋವನ ಮಹಿಮೆಯು ಶಾಶ್ವತವಾಗಿರಲಿ! ಯೆಹೋವನು ತಾನು ಸೃಷ್ಟಿಸಿದವುಗಳಲ್ಲಿ ಆನಂದಿಸಲಿ. |
32
|
ಆತನು ಭೂಮಿಯ ಕಡೆಗೆ ನೋಡಿದರೆ ಸಾಕು, ಭೂಮಿಯು ನಡುಗುವುದು; ಆತನು ಬೆಟ್ಟಗಳನ್ನು ಮುಟ್ಟಿದರೆ ಸಾಕು, ಅವು ಜ್ವಾಲಾಮುಖಿಗಳಾಗುತ್ತವೆ. |
33
|
ನನ್ನ ಜೀವಮಾನವೆಲ್ಲಾ ನಾನು ಯೆಹೋವನಿಗೆ ಗಾನ ಮಾಡುವೆನು. ನಾನು ಬದುಕಿರುವವರೆಗೂ ಆತನನ್ನು ಸಂಕೀರ್ತಿಸುವೆನು. |
34
|
ನಾನು ಹೇಳಿದ ಈ ವಿಷಯಗಳು ಆತನನ್ನು ಸಂತೋಷಗೊಳಿಸಲಿ. ನಾನಾದರೋ ಯೆಹೋವನಲ್ಲಿ ಸಂತೋಷಿಸುವೆನು. |
35
|
ಪಾಪಾತ್ಮರು ಭೂಮಿಯಿಂದ ಕಾಣದೆಹೋಗಲಿ. ದುಷ್ಟರು ಎಂದೆಂದಿಗೂ ನಿರ್ಮೂಲವಾಗಲಿ. ನನ್ನ ಆತ್ಮವೇ, ಯೆಹೋವನನ್ನು ಸ್ತುತಿಸು! ಯೆಹೋವನನ್ನು ಕೊಂಡಾಡು! |
Psalms 104:12 Kannada Language Bible Words basic statistical display
COMING SOON ...