1
|
ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಹೆಸರನ್ನು ಆರಾಧಿಸಿರಿ. ಆತನ ಅದ್ಭುತಕಾರ್ಯಗಳ ಕುರಿತು ಜನಾಂಗಗಳಿಗೆ ಸಾರಿ ಹೇಳಿರಿ. |
2
|
ಯೆಹೋವನಿಗೆ ಗಾನಮಾಡಿರಿ; ಆತನನ್ನು ಸಂಕೀರ್ತಿಸಿರಿ. ಆತನ ಮಹತ್ಕಾರ್ಯಗಳ ಕುರಿತು ಕೊಂಡಾಡಿರಿ. |
3
|
ಆತನ ಪವಿತ್ರ ನಾಮದಲ್ಲಿ ಹೆಮ್ಮೆಪಡಿರಿ. ಯೆಹೋವನ ಆರಾಧಕರೇ, ಸಂತೋಷಪಡಿರಿ. |
4
|
ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿಕೊಳ್ಳಿರಿ; ಸಹಾಯಕ್ಕಾಗಿ ಆತನ ಬಳಿಗೇ ಹೋಗಿರಿ. |
5
|
ಆತನ ಅದ್ಭುತಕಾರ್ಯಗಳನ್ನು ಜ್ಞಾಪಿಸಿಕೊಳ್ಳಿರಿ ಆತನ ಮಹತ್ಕಾರ್ಯಗಳನ್ನೂ ವಿವೇಕದ ನಿರ್ಧಾರಗಳನ್ನೂ ಜ್ಞಾಪಿಸಿಕೊಳ್ಳಿರಿ. |
6
|
ನೀವು ಆತನ ಸೇವಕನಾದ ಅಬ್ರಹಾಮನ ಸಂತತಿಯವರಾಗಿದ್ದೀರಿ; ಆತನು ಆರಿಸಿಕೊಂಡ ಯಾಕೋಬನ ಸಂತತಿಯವರಾಗಿದ್ದೀರಿ. |
7
|
ಯೆಹೋವನೇ ನಮ್ಮ ದೇವರು. ಆತನು ಇಡೀ ಪ್ರಪಂಚವನ್ನು ಆಳುವನು. |
8
|
ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು. ಆತನು ತನ್ನ ಆಜ್ಞೆಗಳನ್ನು ಸಾವಿರ ತಲೆಮಾರುಗಳವರೆಗೂ ಜ್ಞಾಪಿಸಿಕೊಳ್ಳುವನು. |
9
|
ಆತನು ಅಬ್ರಹಾಮನೊಡನೆ ಒಡಂಬಡಿಕೆ ಮಾಡಿಕೊಂಡನು. ಆತನು ಇಸಾಕನಿಗೆ ವಾಗ್ದಾನ ಮಾಡಿದನು. |
10
|
ಆತನು ಅದನ್ನು ಯಾಕೋಬನಿಗೆ ಕಟ್ಟಳೆಯನ್ನಾಗಿ ಮಾಡಿದನು. ದೇವರು ಇಸ್ರೇಲನೊಂದಿಗೆ ತನ್ನ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. |
11
|
“ನಾನು ನಿನಗೆ ಕಾನಾನ್ ದೇಶವನ್ನು ಕೊಡುವೆನು. ಆ ದೇಶವು ನಿನ್ನದಾಗಿರುತ್ತದೆ” ಎಂದು ಆತನು ಹೇಳಿದನು. |
12
|
ಅಬ್ರಹಾಮನ ಕುಟುಂಬವು ಚಿಕ್ಕದಾಗಿದ್ದಾಗ ಅವರು ಪ್ರಯಾಣಿಕರಂತೆ ಕಾನಾನಿನಲ್ಲಿ ವಾಸವಾಗಿದ್ದಾಗ, ಆತನು ಅವರಿಗೆ ಈ ವಾಗ್ದಾನವನ್ನು ಮಾಡಿದನು. |
13
|
ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಪ್ರಯಾಣಮಾಡಿದರು. |
14
|
ಆದರೆ ಅವರಿಗೆ ಯಾರಿಂದಲೂ ಅನ್ಯಾಯವಾಗದಂತೆ ನೋಡಿಕೊಂಡನು. ಅವರನ್ನು ನೋಯಿಸಕೂಡದೆಂದು ಆತನು ರಾಜರುಗಳಿಗೆ ಎಚ್ಚರಿಕೆ ನೀಡಿದನು. |
15
|
“ನಾನು ಆರಿಸಿಕೊಂಡಿರುವ ಜನರಿಗೆ ಕೇಡು ಮಾಡಬೇಡಿ. ನನ್ನ ಪ್ರವಾದಿಗಳಿಗೆ ಯಾವ ಕೆಟ್ಟದ್ದನ್ನೂ ಮಾಡಬೇಡಿ” ಎಂದು ಆತನು ಹೇಳಿದನು. |
16
|
ದೇವರು ಆ ದೇಶಕ್ಕೆ ಬರಗಾಲವನ್ನು ಬರಮಾಡಿದನು. ಜನರಿಗೆ ತಿನ್ನುವುದಕ್ಕೂ ಸಾಕಷ್ಟು ಆಹಾರವಿರಲಿಲ್ಲ. |
17
|
ಆದರೆ ದೇವರು ಒಬ್ಬನನ್ನು ಅವರಿಗಿಂತ ಮುಂಚಿತವಾಗಿ ಕಳುಹಿಸಿಕೊಟ್ಟನು. ಗುಲಾಮತನಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು. |
18
|
ಅವರು ಯೋಸೇಫನ ಕಾಲುಗಳನ್ನು ಹಗ್ಗಗಳಿಂದ ಕಟ್ಟಿದರು; ಅವನ ಕೊರಳಿಗೆ ಕಬ್ಬಿಣದ ಬೇಡಿಯನ್ನು ಹಾಕಿದರು. |
19
|
ಅವನ ಪ್ರಾವಾದನೆಯು ನೆರವೇರುವವರೆಗೆ ಅವನು ಗುಲಾಮನಾಗಿದ್ದನು. ಯೋಸೇಫನು ಸತ್ಯವಂತನೆಂದು ಯೆಹೋವನ ಸಂದೇಶವು ನಿರೂಪಿಸಿತು. |
20
|
ಆದ್ದರಿಂದ ಈಜಿಪ್ಟಿನ ರಾಜನು ಅವನನ್ನು ಬಿಡುಗಡೆ ಮಾಡಿದನು. ಆ ದೇಶದ ರಾಜನು ಅವನನ್ನು ಸೆರೆಮನೆಯಿಂದ ಬಿಡಿಸಿದನು. |
21
|
ಅರಮನೆಯ ಮೇಲ್ವಿಚಾರಕನನ್ನಾಗಿ ನೇಮಿಸಿದನು. ರಾಜನ ಆಸ್ತಿಯನ್ನೆಲ್ಲಾ ಯೋಸೇಫನು ನೋಡಿಕೊಂಡನು. |
22
|
ಯೋಸೇಫನು ಇತರ ನಾಯಕರುಗಳಿಗೆ ಸಲಹೆಗಳನ್ನು ಕೊಟ್ಟನು; ಹಿರಿಯರಿಗೆ ಉಪದೇಶಿಸಿದನು. |
23
|
ಬಳಿಕ ಇಸ್ರೇಲನು ಈಜಿಪ್ಟಿಗೆ ಬಂದನು. ಯಾಕೋಬನು ಹಾಮನ ದೇಶದಲ್ಲಿ ವಾಸಿಸಿದನು. |
24
|
ಯಾಕೋಬನ ಕುಟುಂಬ ಬಹು ದೊಡ್ಡದಾಯಿತು. ಅವರು ಈಜಿಪ್ಟಿನವರಿಗಿಂತಲೂ ಬಲಿಷ್ಠರಾದರು. |
25
|
ಆದ್ದರಿಂದ ಈಜಿಪ್ಟಿನವರು ಯಾಕೋಬನ ಕುಟುಂಬವನ್ನು ದ್ವೇಷಿಸತೊಡಗಿದರು. ಅವರು ತಮ್ಮ ಗುಲಾಮರ ವಿರೋಧವಾಗಿ ಸಂಚುಗಳನ್ನು ಮಾಡತೊಡಗಿದರು. |
26
|
ಆದ್ದರಿಂದ ದೇವರು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಯಾಜಕನಾದ ಆರೋನನನ್ನೂ ಕಳುಹಿಸಿದನು. |
27
|
ಹಾಮನ ದೇಶದಲ್ಲಿ ದೇವರು ಅನೇಕ ಮಹತ್ಕಾರ್ಯಗಳನ್ನು ಮೋಶೆ ಆರೋನರ ಮೂಲಕವಾಗಿ ಮಾಡಿದನು. |
28
|
ದೇವರು ಕಾರ್ಗತ್ತಲೆಯನ್ನು ಕಳುಹಿಸಿದನು; ಆದರೂ ಈಜಿಪ್ಟಿನವರು ಆತನಿಗೆ ಕಿವಿಗೊಡಲಿಲ್ಲ. |
29
|
ಆದ್ದರಿಂದ ಆತನು ನೀರನ್ನು ರಕ್ತವನ್ನಾಗಿ ಮಾರ್ಪಡಿಸಿದನು, ಆಗ ಅವರ ಮೀನುಗಳೆಲ್ಲಾ ಸತ್ತುಹೋದವು. |
30
|
ಬಳಿಕ ಈಜಿಪ್ಟಿನವರ ದೇಶವು ಕಪ್ಪೆಗಳಿಂದ ತುಂಬಿಹೋಯಿತು. ರಾಜನು ಮಲಗುವ ಕೋಣೆಯಲ್ಲಿಯೂ ಕಪ್ಪೆಗಳಿದ್ದವು. |
31
|
ಆತನು ಆಜ್ಞಾಪಿಸಲು ವಿಷದ ಹುಳುಗಳೂ ಹೇನುಗಳೂ ಬಂದವು. ಅವು ಎಲ್ಲೆಲ್ಲಿಯೂ ಹರಡಿಕೊಂಡವು. |
32
|
ಆತನು ಮಳೆಯನ್ನು ಕಲ್ಮಳೆಯನ್ನಾಗಿ ಪರಿವರ್ತಿಸಿದನು. ಅವರ ದೇಶದಲ್ಲಿ ಸಿಡಿಲುಗಳು ಹೊಡೆದವು. |
33
|
ದೇವರು ಅವರ ದ್ರಾಕ್ಷಾಲತೆಗಳನ್ನೂ ಅಂಜೂರದ ಮರಗಳನ್ನೂ ನಾಶಮಾಡಿದನು. ಅವರ ದೇಶದ ಪ್ರತಿಯೊಂದು ಮರವನ್ನೂ ಆತನು ನಾಶಮಾಡಿದನು. |
34
|
ಆತನು ಆಜ್ಞಾಪಿಸಲು ಮಿಡತೆಗಳೂ ಜಿಟ್ಟೆಹುಳುಗಳೂ ಅಸಂಖ್ಯಾತವಾಗಿ ಬಂದವು. |
35
|
ಮಿಡತೆಗಳೂ ಜಿಟ್ಟೆಹುಳುಗಳೂ ದೇಶದಲ್ಲಿದ್ದ ಸಸಿಗಳನ್ನೆಲ್ಲಾ ತಿಂದುಬಿಟ್ಟವು. ಭೂಮಿಯ ಮೇಲಿದ್ದ ಬೆಳೆಗಳನ್ನೆಲ್ಲಾ ಅವು ತಿಂದುಬಿಟ್ಟವು. |
36
|
ಬಳಿಕ ದೇವರು ಈಜಿಪ್ಟ್ ದೇಶದ ಎಲ್ಲಾ ಚೊಚ್ಚಲು ಗಂಡು ಮಕ್ಕಳನ್ನು ಕೊಂದುಹಾಕಿದನು. |
37
|
ಆತನು ತನ್ನ ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಹೋದನು. ಅವರು ತಮ್ಮೊಂದಿಗೆ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಬಂದರು. ದೇವಜನರಲ್ಲಿ ಯಾರೂ ಎಡವಿಬೀಳಲಿಲ್ಲ. |
38
|
ದೇವಜನರು ಈಜಿಪ್ಟಿನಿಂದ ಹೊರಟಾಗ ಸಂತೋಷಪಟ್ಟರು; ಯಾಕಂದರೆ ಅವರು ದೇವಜನರಿಗೆ ಹೆದರಿಕೊಂಡಿದ್ದರು. |
39
|
ಆತನು ಹಗಲಿನಲ್ಲಿ ನೆರಳಿಗೋಸ್ಕರ ಮೋಡವನ್ನು ಕಂಬಳಿಯಂತೆ ಹರಡಿದನು; ರಾತ್ರಿಯಲ್ಲಿ ಬೆಳಕಿಗಾಗಿ ಆಗ್ನಿಸ್ತಂಭವನ್ನು ದಯಪಾಲಿಸಿದನು. |
40
|
ಜನರು ಮಾಂಸಕ್ಕಾಗಿ ಕೇಳಿಕೊಂಡಾಗ ಆತನು ಅವರಿಗೆ ಲಾವಕ್ಕಿಗಳನ್ನು ಬರಮಾಡಿದನು; ಪರಲೋಕದಿಂದ ಮನ್ನವನ್ನು ದಯಪಾಲಿಸಿದನು. |
41
|
ಆತನು ಬಂಡೆಯನ್ನು ಸೀಳಿದಾಗ ನೀರು ಚಿಮ್ಮುತ್ತಾ ಹೊರಬಂದಿತು; ಅರಣ್ಯದಲ್ಲಿ ನದಿಯು ಹರಿಯ ತೊಡಗಿತು! |
42
|
ಆತನು ತನ್ನ ಸೇವಕನಾದ ಆಬ್ರಹಾಮನಿಗೆ ತಾನು ಮಾಡಿದ ವಾಗ್ದಾನವನ್ನು ಜ್ಞಾಪಿಸಿಕೊಂಡನು. |
43
|
ಆತನು ತನ್ನ ಜನರನ್ನು ಈಜಿಪ್ಟಿನಿಂದ ಹೊರತಂದನು. ಜನರು ಉಲ್ಲಾಸಪಡುತ್ತಾ ಹರ್ಷಗೀತೆಗಳನ್ನು ಹಾಡುತ್ತಾ ಹೊರಬಂದರು! |
44
|
ಅನ್ಯಜನರು ವಾಸವಾಗಿದ್ದ ದೇಶವನ್ನು ದೇವರು ತನ್ನ ಜನರಿಗೆ ಕೊಟ್ಟನು. ಅನ್ಯಜನರು ದುಡಿದು ಸಂಪಾದಿಸಿದ್ದವುಗಳನ್ನು ದೇವಜನರು ಪಡೆದುಕೊಂಡರು. |
45
|
ತನ್ನ ಜನರು ತನ್ನ ಕಟ್ಟಳೆಗಳಿಗೆ ವಿಧೇಯರಾಗಲೆಂದೂ ತನ್ನ ಉಪದೇಶಗಳನ್ನು ಎಚ್ಚರಿಕೆಯಿಂದ ಪಾಲಿಸಲೆಂದೂ ಆತನು ಹೀಗೆ ಮಾಡಿದನು. ಯೆಹೋವನನ್ನು ಕೊಂಡಾಡಿರಿ. |
Psalms 105:30 Kannada Language Bible Words basic statistical display
COMING SOON ...