1
|
ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು! ಆತನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಪ್ರೀತಿಯು ಶಾಶ್ವತವಾದದ್ದು! |
2
|
ಯೆಹೋವನ ಮಹತ್ವವನ್ನು ಸಂಪೂರ್ಣವಾಗಿ ವರ್ಣಿಸಲು ಯಾರಿಗೂ ಆಗದು; ಆತನನ್ನು ಸಂಪೂರ್ಣವಾಗಿ ಸ್ತುತಿಸುವುದಕ್ಕೂ ಯಾರಿಗೂ ಸಾಧ್ಯವಿಲ್ಲ. |
3
|
ದೇವರ ಆಜ್ಞೆಗಳಿಗೆ ವಿಧೇಯರಾಗಿರುವವರು ಭಾಗ್ಯವಂತರೇ ಸರಿ! ಅವರು ಸತ್ಕಾರ್ಯಗಳನ್ನು ಯಾವಾಗಲೂ ಮಾಡುತ್ತಿರುವರು. |
4
|
ಯೆಹೋವನೇ, ನಿನ್ನ ಜನರಿಗೆ ದಯೆತೋರುವಾಗ ನನ್ನನ್ನು ಜ್ಞಾಪಿಸಿಕೊಂಡು ದಯೆತೋರು. ನಿನ್ನ ಜನರನ್ನು ರಕ್ಷಿಸುವಾಗ ನನ್ನನ್ನು ನೆನಪು ಮಾಡಿಕೊಂಡು ರಕ್ಷಿಸು. |
5
|
ಯೆಹೋವನೇ, ನಿನ್ನ ಜನರಿಗೋಸ್ಕರ ನೀನು ಮಾಡುವ ಒಳ್ಳೆಯವುಗಳಲ್ಲಿ ನನಗೂ ಪಾಲು ದೊರೆಯಲಿ. ನಿನ್ನ ಜನರೊಂದಿಗೆ ನಾನೂ ಸಂತೋಷಪಡುವಂತೆ ಮಾಡು. ನಿನ್ನ ಜನರೊಂದಿಗೆ ನಾನೂ ನಿನ್ನ ಬಗ್ಗೆ ಹೆಮ್ಮೆಪಡುವಂತಾಗಲಿ. |
6
|
ನಮ್ಮ ಪೂರ್ವಿಕರು ಪಾಪಮಾಡಿದಂತೆಯೇ ನಾವು ಪಾಪ ಮಾಡಿದೆವು. ನಾವು ಆಪರಾಧಿಗಳಾಗಿದ್ದೆವು; ದುಷ್ಕೃತ್ಯಗಳನ್ನು ಮಾಡಿದೆವು! |
7
|
ನೀನು ಈಜಿಪ್ಟಿನಲ್ಲಿ ಮಾಡಿದ ಮಹತ್ಕಾರ್ಯಗಳಿಂದ ನಮ್ಮ ಪೂರ್ವಿಕರು ಏನೂ ಕಲಿತುಕೊಳ್ಳಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ತಿರುಗಿದರು. |
8
|
ಆದರೆ ಆತನು ತನ್ನ ಹೆಸರಿನ ನಿಮಿತ್ತವಾಗಿ ನಮ್ಮ ಪೂರ್ವಿಕರನ್ನು ರಕ್ಷಿಸಿದನು; ತನ್ನ ಮಹಾಶಕ್ತಿಯನ್ನು ತೋರಿಸುವುದಕ್ಕಾಗಿ ಅವರನ್ನು ರಕ್ಷಿಸಿದನು. |
9
|
ಆತನು ಆಜ್ಞಾಪಿಸಲು ಕೆಂಪು ಸಮುದ್ರವು ಒಣಗಿಹೋಯಿತು. ಆತನು ಆಳವಾದ ಸಮುದ್ರವನ್ನು ಇಬ್ಭಾಗ ಮಾಡಿ ಮರಳುಗಾಡಿನಂತೆ ಒಣಗಿಹೋಗಿದ್ದ ಭೂಮಿಯ ಮೇಲೆ ನಮ್ಮ ಪೂರ್ವಿಕರನ್ನು ನಡೆಸಿದನು. |
10
|
ನಮ್ಮ ಪೂರ್ವಿಕರನ್ನು ಅವರ ಶತ್ರುಗಳಿಂದ ರಕ್ಷಿಸಿದನು! ವೈರಿಗಳಿಂದ ಪಾರುಮಾಡಿದನು! |
11
|
ಅವರ ಶತ್ರುಗಳನ್ನು ಸಮುದ್ರದಲ್ಲಿ ಮುಳುಗಿಸಿಬಿಟ್ಟನು. ಅವರ ಶತ್ರುಗಳಲ್ಲಿ ಒಬ್ಬರೂ ತಪ್ಪಿಸಿಕೊಳ್ಳಲಾಗಲಿಲ್ಲ! |
12
|
ನಮ್ಮ ಪೂರ್ವಿಕರು ಆತನ ಆಜ್ಞೆಗಳನ್ನು ನಂಬಿ ಆತನನ್ನು ಸಂಕೀರ್ತಿಸಿದರು. |
13
|
ಆದರೆ ಆತನ ಕಾರ್ಯಗಳನ್ನು ಅವರು ಬೇಗನೆ ಮರೆತುಬಿಟ್ಟರು; ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ. |
14
|
ನಮ್ಮ ಪೂರ್ವಿಕರು ಮರಳುಗಾಡಿನಲ್ಲಿ ಆಶಾತುರರಾಗಿ ಆತನನ್ನು ಪರೀಕ್ಷಿಸಿದರು. |
15
|
ಆತನು ಅವರ ಆಸೆಯನ್ನು ಪೂರೈಸಿದರೂ ಅವರಿಗೆ ಭಯಂಕರವಾದ ರೋಗವನ್ನು ಬರಮಾಡಿದನು. |
16
|
ಅವರು ಮೋಶೆಯ ಮೇಲೆಯೂ ಯೆಹೋವನ ಪವಿತ್ರ ಯಾಜಕನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು. |
17
|
ಭೂಮಿಯು ಬಾಯ್ದೆರೆದು ಹೊಟ್ಟೇಕಿಚ್ಚುಪಟ್ಟ ದಾತಾನನ್ನೂ ಅಬಿರಾಮನ ಪಂಗಡದವರನ್ನೂ ನುಂಗಿಬಿಟ್ಟಿತು. |
18
|
ಬಳಿಕ ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಆಗ್ನಿ ಜ್ವಾಲೆಯು ಆ ದುಷ್ಟರನ್ನು ದಹಿಸಿಬಿಟ್ಟಿತು. |
19
|
ಹೋರೇಬ್ ಬೆಟ್ಟದ ಬಳಿಯಲ್ಲಿ ಅವರು ಚಿನ್ನದ ಬಸವನನ್ನು ಮಾಡಿ ಅಡ್ಡಬಿದ್ದರು. |
20
|
ಹುಲ್ಲುತ್ತಿನ್ನುವ ಹೋರಿಯ ಮೂರ್ತಿಗಾಗಿ ಅವರು ಮಹಿಮಾಸ್ವರೂಪನಾದ ದೇವರನೇ ಮಾರಿಬಿಟ್ಟರು! |
21
|
ಆತನು ನಮ್ಮ ಪೂರ್ವಿಕರನ್ನು ರಕ್ಷಿಸಿದರೂ ಅವರು ಆತನನ್ನು ಮರೆತುಬಿಟ್ಟರು! ಈಜಿಪ್ಟಿನಲ್ಲಿ ಮಹತ್ಕಾರ್ಯಗಳನ್ನು ಮಾಡಿದ ದೇವರನ್ನು ಅವರು ಮರೆತುಬಿಟ್ಟರು. |
22
|
ಆತನು ಹಾಮನ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದನು. ಆತನು ಕೆಂಪು ಸಮುದ್ರದ ಸಮೀಪದಲ್ಲಿ ಭಯಂಕರವಾದ ಕಾರ್ಯಗಳನ್ನು ಮಾಡಿದನು! |
23
|
ಆತನು ಅವರನ್ನು ನಾಶಮಾಡಬೇಕೆಂದಿದ್ದನು. ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮಧ್ಯಸ್ಥನಾಗಿ ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು. |
24
|
ಬಳಿಕ ಅವರು ರಮಣೀಯವಾದ ಕಾನಾನ್ ದೇಶಕ್ಕೆ ಹೋಗಲು ಒಪ್ಪಲಿಲ್ಲ. ಅಲ್ಲಿಯ ನಿವಾಸಿಗಳನ್ನು ಸೋಲಿಸಲು ಆತನು ತಮಗೆ ಸಹಾಯ ಮಾಡುತ್ತಾನೆಂಬ ನಂಬಿಕೆ ಅವರಲ್ಲಿರಲಿಲ್ಲ. |
25
|
ನಮ್ಮ ಪೂರ್ವಿಕರು ತಮ್ಮತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ದೇವರ ಮಾತಿಗೆ ವಿಧೇಯರಾಗಲಿಲ್ಲ. |
26
|
ಆದ್ದರಿಂದ ಅವರು ಅರಣ್ಯದಲ್ಲಿ ಸಾಯುವುದಾಗಿ ದೇವರು ಪ್ರಮಾಣ ಮಾಡಿದನು. |
27
|
ಅವರ ಸಂತತಿಗಳವರು ಬೇರೆಯವರಿಂದ ಸೋಲಿಸಲ್ಪಡುವುದಾಗಿ ಆತನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರನ್ನು ಜನಾಂಗಗಳ ಮಧ್ಯೆ ಚದರಿಸುವುದಾಗಿ ಆತನು ಪ್ರಮಾಣ ಮಾಡಿದನು. |
28
|
ಬಳಿಕ ಬಾಳ್ ಪೆಗೋರಿನಲ್ಲಿ ದೇವಜನರು ಬಾಳನನ್ನು ಪೂಜಿಸಲು ಸೇರಿಕೊಂಡರು. ಜೀವವಿಲ್ಲದ ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ದೇವಜನರು ತಿಂದರು. |
29
|
ಯೆಹೋವನು ತನ್ನ ಜನರ ಮೇಲೆ ಬಹು ಕೋಪಗೊಂಡು ಅವರಿಗೆ ಭಯಂಕರವಾದ ಕಾಯಿಲೆಯನ್ನು ಬರಮಾಡಿದನು. |
30
|
ಆದರೆ ಫೀನೆಹಾಸನು ಎದ್ದು ಅವರನ್ನು ದಂಡಿಸಲು ಆತನು (ಯೆಹೋವನು) ಆ ಕಾಯಿಲೆಯನ್ನು ನಿಲ್ಲಿಸಿದನು. |
31
|
ಫೀನೆಹಾಸನ ಈ ಕಾರ್ಯವು ಅವನನ್ನು ತಲೆತಲೆಮಾರುಗಳವರೆಗೂ ನೀತಿವಂತನನ್ನಾಗಿ ಮಾಡಿತು. |
32
|
ಮೆರೀಬಾದಲ್ಲಿ ಜನರು ಮತ್ತೆ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡಾಯಿತು. |
33
|
ಅವರು ಆತನಿಗೆ (ದೇವಾರಾತ್ಮನಿಗೆ) ವಿರೋಧವಾಗಿ ನಿಂತರು. ಇದರಿಂದ ಬೇಸರಗೊಂಡಿದ್ದ ಮೋಶೆಯು ದುಡುಕಿ ಮಾತಾಡಿದನು. |
34
|
ಕಾನಾನಿನಲ್ಲಿ ವಾಸವಾಗಿದ್ದ ಅನ್ಯ ಜನಾಂಗಗಳನ್ನು ನಾಶಮಾಡಲು ಯೆಹೋವನು ಅವರಿಗೆ ಹೇಳಿದನು. ಆದರೆ ಇಸ್ರೇಲರು ದೇವರಿಗೆ ವಿಧೇಯರಾಗಲಿಲ್ಲ. |
35
|
ಅವರು ಬೇರೆಯವರೊಂದಿಗೆ ಸೇರಿಕೊಂಡು ಅವರ ದುರಾಚಾರಗಳನ್ನೇ ಮಾಡಿದರು. |
36
|
ಅವರು ದೇವಜನರಿಗೆ ಉರುಲಿನಂತಾದರು. ಅವರ ದೇವರುಗಳನ್ನು ದೇವಜನರು ಪೂಜಿಸತೊಡಗಿದರು. |
37
|
ದೇವಜನರು ತಮ್ಮ ಸ್ವಂತ ಮಕ್ಕಳನ್ನೂ ಆ ದೆವ್ವಗಳಿಗೆ ಅರ್ಪಿಸಿದರು. |
38
|
ದೇವಜನರು ನಿರಪರಾಧಿಗಳಾದ ತಮ್ಮ ಮಕ್ಕಳನ್ನು ಆ ಸುಳ್ಳುದೇವರುಗಳಿಗೆ ಅರ್ಪಿಸಿದರು. |
39
|
ತಮ್ಮ ಪಾಪಕಾರ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯಜನರು ಮಾಡಿದವುಗಳನ್ನು ಮಾಡಿದರು. |
40
|
ಆತನು ತನ್ನ ಜನರ ಮೇಲೆ ಕೋಪಗೊಂಡನು; ಅವರ ವಿಷಯದಲ್ಲಿ ಬೇಸರಗೊಂಡನು! |
41
|
ಆತನು ತನ್ನ ಜನರನ್ನು ಅನ್ಯಜನಾಂಗಗಳಿಗೆ ಒಪ್ಪಿಸಿದನು; ಅವರ ಮೇಲೆ ದೊರೆತನ ಮಾಡುವಂತೆ ವೈರಿಗಳಿಗೆ ಅವರನ್ನು ಬಿಟ್ಟುಕೊಟ್ಟನು. |
42
|
ಶತ್ರುಗಳು ಅವರನ್ನು ತಮ್ಮ ಅಧೀನದಲ್ಲಿಟ್ಟುಕೊಂಡು ಅವರ ಜೀವಿತವನ್ನು ಸಂಕಷ್ಟಕ್ಕೆ ಗುರಿಮಾಡಿದರು. |
43
|
ಆತನು ತನ್ನ ಜನರನ್ನು ಅನೇಕ ಸಲ ರಕ್ಷಿಸಿದರೂ ಅವರು ಆತನಿಗೆ ವಿರೋಧವಾಗಿ ತಿರುಗಿ ತಮ್ಮ ಇಷ್ಟಾನುಸಾರವಾಗಿ ಮಾಡಿದರು. ಅವರು ಅನೇಕ, ಅನೇಕ ಕೆಟ್ಟಕಾರ್ಯಗಳನ್ನು ಮಾಡಿದರು. |
44
|
ಆದರೆ ಅವರು ಆಪತ್ತಿನಲ್ಲಿದ್ದಾಗಲೆಲ್ಲಾ ದೇವರಿಗೆ ಮೊರೆಯಿಟ್ಟರು; ಆತನು ಅವರ ಪ್ರಾರ್ಥನೆಗಳಿಗೆ ಸದುತ್ತರವನ್ನು ದಯಪಾಲಿಸಿದನು. |
45
|
ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಂಡನು. ತನ್ನ ಮಹಾಪ್ರೀತಿಯಿಂದ ಅವರನ್ನು ಸಂತೈಸಿದನು. |
46
|
ಅನ್ಯಜನಾಂಗಗಳು ಆತನ ಜನರನ್ನು ಸೆರೆಯಾಳುಗಳನ್ನಾಗಿ ಎಳೆದೊಯ್ದರು. ಅನ್ಯಜನಾಂಗಗಳು ತನ್ನ ಜನರಿಗೆ ದಯೆತೋರುವಂತೆ ಆತನು ಮಾಡಿದನು. |
47
|
ನಮ್ಮ ದೇವರಾದ ಯೆಹೋವನು ನಮ್ಮನ್ನು ರಕ್ಷಿಸಿದನು! ಅನ್ಯಜನಾಂಗಗಳಿಂದ ನಮ್ಮನ್ನು ಬಿಡಿಸಿಕೊಂಡು ಬಂದನು. ಆಗ ನಾವು ಆತನ ಪವಿತ್ರ ಹೆಸರನ್ನು ಕೊಂಡಾಡುವುದಕ್ಕೂ ಆತನನ್ನು ಸಂಕೀರ್ತಿಸುವುದಕ್ಕೂ ಸಾಧ್ಯವಾಯಿತು. |
48
|
ಇಸ್ರೇಲಿನ ದೇವರಾದ ಯೆಹೋವನನ್ನು ಕೊಂಡಾಡಿರಿ. ಆತನು ಯಾವಾಗಲೂ ಇದ್ದವನೂ ಎಂದೆಂದಿಗೂ ಇರುವಾತನೂ ಆಗಿದ್ದಾನೆ. “ಆಮೆನ್! ಯೆಹೋವನಿಗೆ ಸ್ತೋತ್ರವಾಗಲಿ!” ಎಂದು ಜನರೆಲ್ಲರೂ ಹೇಳಿದರು. |
Psalms 106:1 Kannada Language Bible Words basic statistical display
COMING SOON ...