1
|
ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನು ಒಳ್ಳೆಯವನು! ಆತನ ಪ್ರೀತಿ ಶಾಶ್ವತವಾದದ್ದು! |
2
|
ಯೆಹೋವನಿಂದ ರಕ್ಷಿಸಲ್ಪಟ್ಟ ಪ್ರತಿಯೊಬ್ಬರೂ ಆತನಿಗೆ ಕೃತಜ್ಞತಾಸ್ತುತಿ ಮಾಡಲಿ. ಯೆಹೋವನು ಅವರನ್ನು ವೈರಿಗಳಿಂದ ಬಿಡಿಸಿದನು. |
3
|
ಯೆಹೋವನು ತನ್ನ ಜನರನ್ನು ಅನೇಕ ದೇಶಗಳಿಂದ ಒಟ್ಟುಗೂಡಿಸಿದನು; ಪೂರ್ವಪಶ್ಚಿಮಗಳಿಂದಲೂ ಉತ್ತರ ದಕ್ಷಿಣಗಳಿಂದಲೂ ಬರಮಾಡಿದನು. |
4
|
ಅವರಲ್ಲಿ ಕೆಲವರು ಮರುಭೂಮಿಯಲ್ಲಿ ಅಲೆದಾಡಿದರು. ತಾವು ನೆಲೆಸತಕ್ಕ ಪಟ್ಟಣಕ್ಕಾಗಿ ಅವರು ಹುಡುಕಿದರೂ ಅದು ಅವರಿಗೆ ಕಾಣಲಿಲ್ಲ. |
5
|
ಅವರು ಹಸಿವೆಯಿಂದಲೂ ಬಾಯಾರಿಕೆಯಿಂದಲೂ ಬಲಹೀನರಾಗತೊಡಗಿದರು. |
6
|
ಆಗ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಎಲ್ಲಾ ಆಪತ್ತುಗಳಿಂದ ರಕ್ಷಿಸಿದನು. |
7
|
ಅವರು ನೆಲಸತಕ್ಕ ಪಟ್ಟಣಕ್ಕೆ ದೇವರು ಅವರನ್ನು ನೇರವಾಗಿ ನಡೆಸಿದನು. |
8
|
ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ. |
9
|
ಆತನು ಬಾಯರಿದವರನ್ನು ನೀರಿನಿಂದಲೂ ಹಸಿದವರನ್ನು ಮೃಷ್ಟಾನ್ನದಿಂದಲೂ ತೃಪ್ತಿಗೊಳಿಸುವನು. |
10
|
ದೇವಜನರಲ್ಲಿ ಕೆಲವರು ಸೆರೆಯಾಳುಗಳಾಗಿದ್ದರು; ಕಾರ್ಗತ್ತಲೆಯ ಸೆರೆಮನೆಗಳಲ್ಲಿ ಬಂಧಿತರಾಗಿದ್ದರು. |
11
|
ಯಾಕಂದರೆ ಅವರು ಯೆಹೋವನ ಆಜ್ಞೆಗಳಿಗೆ ವಿರೋಧವಾಗಿ ದಂಗೆ ಎದ್ದರು. ಮಹೋನ್ನತನಾದ ದೇವರ ಉಪದೇಶವನ್ನು ತಿರಸ್ಕರಿಸಿದರು. |
12
|
ಅವರ ಕಾರ್ಯಗಳ ನಿಮಿತ್ತವೇ ದೇವರು ಅವರ ಜೀವನವನ್ನು ಸಂಕಷ್ಟಕ್ಕೆ ಒಳಪಡಿಸಿದನು. ಅವರು ಎಡವಿಬಿದ್ದರು, ಅವರಿಗೆ ಸಹಾಯಮಾಡಲು ಯಾರೂ ಇರಲಲ್ಲ. |
13
|
ಅವರು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟರು. ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು. |
14
|
ಆತನು ಅವರನ್ನು ಕಾರ್ಗತ್ತಲೆಯ ಸೆರೆಮನೆಗಳಿಂದ ಹೊರತಂದನು; ಕಟ್ಟಿದ ಹಗ್ಗಗಳನ್ನು ಕಿತ್ತುಹಾಕಿದನು. |
15
|
ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ. |
16
|
ನಮ್ಮ ಶತ್ರುಗಳನ್ನು ಸೋಲಿಸಲು ದೇವರು ನಮಗೆ ಸಹಾಯಮಾಡುವನು. ಅವರ ತಾಮ್ರದ ಬಾಗಿಲುಗಳನ್ನು ಆತನು ಮುರಿದುಹಾಕಬಲ್ಲನು. ಅವರ ಬಾಗಿಲುಗಳ ಮೇಲಿರುವ ಕಬ್ಬಿಣದ ಸರಳುಗಳನ್ನು ಆತನು ನುಚ್ಚುನೂರು ಮಾಡಬಲ್ಲನು. |
17
|
ಕೆಲವರು ತಮ್ಮ ಪಾಪಗಳಿಂದಲೂ ದೋಷಗಳಿಂದಲೂ ಮೂಢರಾದರು. |
18
|
ಆ ಜನರು ಊಟವನ್ನು ನಿರಾಕರಿಸಿದ್ದರಿಂದ ಮರಣಾವಸ್ಥೆಗೆ ಬಂದರು. |
19
|
ಅವರು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟರು. ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು. |
20
|
ಆತನು ಆಜ್ಞಾಪಿಸಲು ಜನರು ಗುಣಹೊಂದಿದರು. ಸಮಾಧಿಯಿಂದ ತಪ್ಪಿಸಿಕೊಂಡರು. |
21
|
ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ. |
22
|
ಯೆಹೋವನ ಕಾರ್ಯಗಳಿಗೆ ಕೃತಜ್ಞತಾ ಯಜ್ಞಗಳನ್ನು ಅರ್ಪಿಸಿರಿ. ಆತನ ಕಾರ್ಯಗಳ ಬಗ್ಗೆ ಹರ್ಷದಿಂದ ತಿಳಿಸಿರಿ. |
23
|
ಕೆಲವರು ತಮ್ಮ ಉದ್ಯೋಗಗಳ ನಿಮಿತ್ತ ಸಮುದ್ರಯಾನ ಮಾಡಿದರು. |
24
|
ಯೆಹೋವನು ಮಾಡಬಲ್ಲಕಾರ್ಯಗಳನ್ನು ಅವರು ನೋಡಿದರು. ಆತನು ಸಮುದ್ರದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಅವರು ಕಣ್ಣಾರೆ ಕಂಡರು. |
25
|
ಆತನು ಆಜ್ಞಾಪಿಸಲು ಬಲವಾದ ಗಾಳಿ ಬೀಸತೊಡಗಿತು; ಅಲೆಗಳು ದೊಡ್ಡದಾಗ ತೊಡಗಿದವು. |
26
|
ಅಲೆಗಳು ಆಕಾಶದಷ್ಟು ಎತ್ತರವಾಗಿದ್ದವು. ಭಯಂಕರವಾದ ಬಿರುಗಾಳಿಯಿಂದ ಅವರು ಭಯಗೊಂಡರು. |
27
|
ಅವರು ಅಮಲೇರಿದವರಂತೆ ಎಡವಿ ಬೀಳತೊಡಗಿದರು; ನಾವಿಕರಾಗಿದ್ದ ಅವರ ಕೌಶಲ್ಯವು ನಿಷ್ಪ್ರಯೋಜಕವಾಯಿತು. |
28
|
ಆಗ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು. |
29
|
ಆತನು ಬಿರುಗಾಳಿಯನ್ನು ನಿಲ್ಲಿಸಿ ಅಲೆಗಳನ್ನು ಶಾಂತಗೊಳಿಸಿದನು. |
30
|
ಸಮುದ್ರವು ಶಾಂತವಾದದ್ದರಿಂದ ನಾವಿಕರು ಬಹುಸಂತೋಷಪಟ್ಟರು. ಅವರು ತಲುಪಬೇಕಿದ್ದ ಸ್ಥಳಕ್ಕೆ ಆತನು ಅವರನ್ನು ಸುರಕ್ಷಿತವಾಗಿ ನಡೆಸಿದನು. |
31
|
ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ. |
32
|
ಆತನನ್ನು ಮಹಾಸಭೆಯಲ್ಲಿ ಸ್ತುತಿಸಿರಿ. ಹಿರಿಯರ ಸಭೆಯಲ್ಲಿ ಆತನನ್ನು ಕೊಂಡಾಡಿರಿ. |
33
|
ಆತನು ನದಿಗಳನ್ನು ಮರಳುಗಾಡನ್ನಾಗಿ ಮಾರ್ಪಡಿಸಿದನು; ಹರಿಯುವ ಒರತೆಗಳನ್ನು ತಡೆದು ನಿಲ್ಲಿಸಿದನು. |
34
|
ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು. |
35
|
ಆತನು ಮರಳುಗಾಡನ್ನು ಸರೋವರಗಳುಳ್ಳನಾಡನ್ನಾಗಿ ಪರಿವರ್ತಿಸಿದನು; ಒಣನೆಲದಿಂದ ನೀರಿನ ಒರತೆಗಳನ್ನು ಹರಿಯಮಾಡಿದನು. |
36
|
ಆತನು ಹಸಿದವರನ್ನು ಒಳ್ಳೆಯ ನಾಡಿಗೆ ನಡೆಸಿದನು. ಅವರು ಅಲ್ಲಿ ನೆಲೆಸಿ ಪಟ್ಟಣವನ್ನು ಕಟ್ಟಿದರು. |
37
|
ಅವರು ಹೊಲಗಳಲ್ಲಿ ಬೀಜ ಬಿತ್ತಿ ತೋಟಗಳಲ್ಲಿ ದ್ರಾಕ್ಷಾಲತೆಗಳನ್ನು ನೆಟ್ಟು ಒಳ್ಳೆಯ ಸುಗ್ಗಿಗಳನ್ನು ಪಡೆದರು. |
38
|
ಆತನ ಆಶೀರ್ವಾದದಿಂದ ಅವರ ಕುಟುಂಬಗಳು ವೃದ್ಧಿಯಾದವು. ಅವರ ಪಶುಗಳು ಅಸಂಖ್ಯಾತಗೊಂಡವು. |
39
|
ವಿಪತ್ತುಗಳಿಂದಲೂ ತೊಂದರೆಗಳಿಂದಲೂ ಅವರ ಕುಟುಂಬಗಳು ಚಿಕ್ಕದಾಗಿದ್ದವು; ಬಲಹೀನವಾಗಿದ್ದವು. |
40
|
ಆತನು ಅವರ ನಾಯಕರುಗಳಿಗೆ ಅವಮಾನ ಮಾಡಿದನು; ದಾರಿಗಳಿಲ್ಲದ ಅರಣ್ಯದಲ್ಲಿ ಅಲೆದಾಡುವಂತೆ ಅವರನ್ನು ತೊರೆದುಬಿಟ್ಟನು. |
41
|
ಬಳಿಕ ಆತನು ದೀನರನ್ನು ಅವರ ಸಂಕಟದಿಂದ ಬಿಡಿಸಿದನು. ಈಗ ಅವರ ಕುಟುಂಬಗಳು ಕುರಿಮಂದೆಗಳಂತೆ ದೊಡ್ಡದಾದವು. |
42
|
ಒಳ್ಳೆಯವರು ಇದನ್ನು ಕಂಡು ಸಂತೋಷಪಡುವರು. ದುಷ್ಟರು ಇದನ್ನು ಕಂಡು ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. |
43
|
ಜ್ಞಾನಿಯು ಇವುಗಳನ್ನು ನೆನಪು ಮಾಡಿಕೊಂಡು ದೇವರ ನಿಜಪ್ರೀತಿಯನ್ನು ಅರ್ಥಮಾಡಿಕೊಳ್ಳುವನು. |
Psalms 107:14 Kannada Language Bible Words basic statistical display
COMING SOON ...