1
|
ಸ್ತುತಿಗೀತೆ. ರಚನೆಗಾರ : ದಾವೀದ. ನಾನು ಸ್ತುತಿಸುವ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡದಿರಬೇಡ |
2
|
ದುಷ್ಟರು ನನ್ನ ವಿಷಯವಾಗಿ ಸುಳ್ಳಾಡುತ್ತಿದ್ದಾರೆ. ಅವರು ಅಸತ್ಯವಾದವುಗಳನ್ನು ಹೇಳುತ್ತಿದ್ದಾರೆ. |
3
|
ಅವರು ನನ್ನನ್ನು ದ್ವೇಷಿಸುತ್ತಾರೆ; ನಿಷ್ಕಾರಣವಾಗಿ ನನಗೆ ಎದುರಾಗಿದ್ದಾರೆ. |
4
|
ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು. ನಾನಾದರೋ ನಿನಗೆ ಪ್ರಾರ್ಥಿಸುತ್ತಿದ್ದೇನೆ. |
5
|
ನಾನು ಉಪಕಾರವನ್ನು ಮಾಡಿದ್ದರೂ ಅವರು ನನಗೆ ಅಪಕಾರವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು. |
6
|
ನನ್ನ ವೈರಿಯನ್ನು ಅವನ ದುಷ್ಕೃತ್ಯಗಳಿಗೆ ತಕ್ಕಂತೆ ದಂಡಿಸು. ಅವನ ಮೇಲೆ ತಪ್ಪು ಹೊರಿಸಲು ದೂಷಕನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು. |
7
|
ನ್ಯಾಯವಿಚಾರಣೆಯಲ್ಲಿ ನ್ಯಾಯಧೀಶನು ಅವನನ್ನು ಅಪರಾಧಿಯೆಂದು ನಿರ್ಣಯಿಸಲಿ. ನನ್ನ ಶತ್ರುವಿನ ಪ್ರತಿವಾದವು ಅವನಿಗೆ ಮತ್ತಷ್ಟು ಕೇಡು ಮಾಡಲಿ. |
8
|
ನನ್ನ ಶತ್ರುವು ಬೇಗನೆ ಸಾಯಲಿ. ಅವನ ಉದ್ಯೋಗವು ಮತ್ತೊಬ್ಬನಿಗೆ ದೊರೆಯಲಿ. |
9
|
ಅವನ ಮಕ್ಕಳನ್ನು ಅನಾಥರನ್ನಾಗಿಯೂ ಅವನ ಹೆಂಡತಿಯನ್ನು ವಿಧವೆಯನ್ನಾಗಿಯೂ ಮಾಡು. |
10
|
ಅವರ ಮಕ್ಕಳು ತಮ್ಮ ಮನೆಯನ್ನು ಕಳೆದುಕೊಂಡು ತಿರುಕರಂತೆ ಅಲೆಯುತ್ತಾ ಭಿಕ್ಷುಕರಾಗಲಿ. |
11
|
ಅವನಿಗೆ ಸಾಲಕೊಟ್ಟವರು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ. ಅವನು ದುಡಿದು ಸಂಪಾದಿಸಿದ್ದೆಲ್ಲವನ್ನು ಪರರು ಸುಲಿದುಕೊಳ್ಳಲಿ. |
12
|
ಅವನಿಗೆ ಯಾರು ಕೃಪೆತೋರದಿರಲಿ; ಅವನ ಮಕ್ಕಳಿಗೂ ಯಾರೂ ಕರುಣೆತೋರದಿರಲಿ. |
13
|
ಅವನನ್ನು ಸಂಪೂರ್ಣವಾಗಿ ನಾಶಮಾಡು. ಮುಂದಿನ ತಲೆಮಾರಿನಲ್ಲಿಯೇ ಅವನ ಹೆಸರು ಇಲ್ಲವಾಗಲಿ. |
14
|
ಯೆಹೋವನು ನನ್ನ ಶತ್ರುವಿನ ತಂದೆಯ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ. |
15
|
ಆ ಪಾಪಗಳನ್ನು ಯೆಹೋವನು ಯಾವಾಗಲೂ ಜ್ಞಾಪಕಮಾಡಿಕೊಳ್ಳಲಿ; ಭೂಮಿಯ ಮೇಲೆ ಅವರ ನೆನಪೇ ಉಳಿಯದಂತೆ ಯೆಹೋವನು ಮಾಡಲಿ. |
16
|
ಯಾಕಂದರೆ, ಆ ದುಷ್ಟನು ಯಾವ ಒಳ್ಳೆಯದನ್ನೂ ಮಾಡಲಿಲ್ಲ; ಯಾರನ್ನೂ ಪ್ರೀತಿಸಲಿಲ್ಲ. ಅವನು ಬಡಜನರಿಗೂ ಮತ್ತು ಅಸಹಾಯಕರಿಗೂ ಜೀವನವನ್ನು ಕಷ್ಟಕರವನ್ನಾಗಿ ಮಾಡಿದನು. |
17
|
ಜನರನ್ನು ಶಪಿಸುವುದೇ ಅವನಿಗೆ ಇಷ್ಟವಾಗಿತ್ತು. ಆದ್ದರಿಂದ ಆ ಶಾಪಗಳು ಅವನಿಗೇ ಸಂಭವಿಸಲಿ. ಅವನು ಜನರನ್ನು ಆಶೀರ್ವದಿಸಲೇ ಇಲ್ಲ. |
18
|
ಅವನ ವಸ್ತ್ರವೂ ಶಾಪಗಳಾಗಲಿ. ಅವನು ಕುಡಿಯುವ ನೀರೂ ಶಾಪಗಳಾಗಲಿ. ಅವನ ದೇಹದ ಮೇಲಿರುವ ಎಣ್ಣೆಯೂ ಶಾಪಗಳಾಗಲಿ. |
19
|
ಅವನ ಹೊದಿಕೆಯೂ ಶಾಪಗಳಾಗಲಿ. ಅವನ ನಡುಕಟ್ಟೂ ಶಾಪಗಳಾಗಲಿ. |
20
|
ನನ್ನ ಶತ್ರುವಿಗೂ ನನ್ನನ್ನು ಕೊಲ್ಲಬೇಕೆಂದಿರುವವರಿಗೂ ಯೆಹೋವನು ಅವುಗಳನ್ನು ಮಾಡಲಿ. |
21
|
ಯೆಹೋವನೇ, ನೀನೇ ನನ್ನ ಒಡೆಯನು. ಆದ್ದರಿಂದ ನಿನ್ನ ಹೆಸರಿನ ಘನತೆಗಾಗಿ ನನಗೆ ಸಹಾಯಮಾಡು. ನಿನ್ನ ಶಾಶ್ವತವಾದ ಪ್ರೀತಿಯಿಂದ ನನ್ನನ್ನು ರಕ್ಷಿಸು. |
22
|
ನಾನು ಕೇವಲ ಬಡವನೂ ಅಸಹಾಯಕನೂ ಆಗಿರುವೆ. ನನ್ನ ಹೃದಯವು ನೊಂದು ದುಃಖಗೊಂಡಿದೆ. |
23
|
ಸಂಜೆಯ ನೆರಳಿನಂತೆ ನನ್ನ ಜೀವಮಾನವು ಕೊನೆಗೊಳ್ಳುತ್ತಿದೆ; ಗಾಳಿಯು ಬಡಿದುಕೊಂಡು ಹೋಗುವ ಮಿಡತೆಯಂತಾಗಿದ್ದೇನೆ. |
24
|
ಹಸಿವೆಯಿಂದ ನನ್ನ ಮೊಣಕಾಲುಗಳು ಬಲಹೀನವಾಗಿವೆ. ನನ್ನ ತೂಕ ಕಡಿಮೆಯಾಗುತ್ತಿದೆ; ನಾನು ತೆಳ್ಳಗಾಗುತ್ತ್ತಿದ್ದೇನೆ. |
25
|
ಕೆಡುಕರು ನನ್ನನ್ನು ಗೇಲಿಮಾಡುವರು. ಅವರು ನನ್ನನ್ನು ನೋಡಿ ತಲೆಯಾಡಿಸುವರು. |
26
|
ನನ್ನ ದೇವರಾದ ಯೆಹೋವನೇ, ನನಗೆ ಸಹಾಯಮಾಡು! ನಿನ್ನ ಶಾಶ್ವತವಾದ ಪ್ರೀತಿಯಿಂದ ನನ್ನನ್ನು ರಕ್ಷಿಸು. |
27
|
ಯೆಹೋವನೇ, ಆಗ ಅವರು ಅದು ನಿನ್ನ ಕೈಕೆಲಸವೆಂದೂ ಅದನ್ನು ಮಾಡಿದ್ದು ನೀನೇ ಎಂದು ತಿಳಿದುಕೊಳ್ಳುವರು. |
28
|
ಆ ದುಷ್ಟರು ನನ್ನನ್ನು ಶಪಿಸುತ್ತಾರೆ; ಯೆಹೋವನೇ, ನೀನಾದರೊ ನನ್ನನ್ನು ಆಶೀರ್ವದಿಸುವೆ. ನನಗೆ ವಿರೋಧವಾಗಿ ಎದ್ದಿರುವ ಅವರನ್ನು ಸೋಲಿಸು. ಆಗ, ನಿನ್ನ ಸೇವಕನಾದ ನಾನು ಸಂತೋಷವಾಗಿರುವೆನು. |
29
|
ನನ್ನ ಶತ್ರುಗಳಿಗೆ ಅವಮಾನವೇ ವಸ್ತ್ರವಾಗಲಿ! ನಾಚಿಕೆಯೇ ಅವರ ಮೇಲಂಗಿಯಾಗಲಿ. |
30
|
ನಾನು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು. ಜನಸಮೂಹದಲ್ಲಿ ಆತನನ್ನು ಕೊಂಡಾಡುವೆನು. |
31
|
ಯಾಕಂದರೆ, ಆತನು ಅಸಹಾಯಕರ ಬಲಗಡೆಯಲ್ಲಿ ನಿಂತುಕೊಳ್ಳುವನು; ಮರಣದಂಡನೆ ವಿಧಿಸಬೇಕೆಂದಿರುವ ಜನರಿಂದ ಅವರನ್ನು ರಕ್ಷಿಸುವನು. |
Psalms 109:6 Kannada Language Bible Words basic statistical display
COMING SOON ...