1
|
ರಚನೆಗಾರ : ದಾವೀದ. ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು. |
2
|
ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು. |
3
|
ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿ ಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು. |
4
|
ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕ ನಂತಹ ಯಾಜಕನಾಗಿರುವೆ” ಎಂದು ವಾಗ್ದಾನ ಮಾಡಿದ್ದಾನೆ. ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ. |
5
|
ನನ್ನ ಯೆಹೋವನು ನಿನ್ನ ಬಲಗಡೆಯಲ್ಲಿದ್ದಾನೆ. ಆತನು ಕೋಪಗೊಂಡಾಗ ಇತರ ರಾಜರುಗಳನ್ನು ಸೋಲಿಸಿ ಬಿಡುವನು. |
6
|
ಆತನು ಜನಾಂಗಗಳಿಗೆ ತೀರ್ಪುಮಾಡುವನು. ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. ಬಲಿಷ್ಠರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು. |
7
|
ರಾಜನು ಮಾರ್ಗದಲ್ಲಿ ತೊರೆಯ ನೀರನ್ನು ಕುಡಿದು ಬಲಹೊಂದುವನು. |
Psalms 110:6 Kannada Language Bible Words basic statistical display
COMING SOON ...