1
|
ಯೆಹೋವನಿಗೆ ಸ್ತೋತ್ರವಾಗಲಿ! ನೀತಿವಂತರ ಸಭೆಯಲ್ಲಿ ನಾನು ಪೂರ್ಣಹೃದಯದಿಂದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು. |
2
|
ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು. ಜನರು ಅವುಗಳಲ್ಲಿ ಸಂತೋಷಿಸುತ್ತಾ ಅವುಗಳನ್ನೇ ಧ್ಯಾನಿಸುವರು. |
3
|
ಆತನು ಮಹತ್ವವಾದ ಮತ್ತು ಅದ್ಭುತವಾದ ಕಾರ್ಯಗಳನ್ನು ಮಾಡುವನು. ಆತನ ನೀತಿಯು ಶಾಶ್ವತವಾದದ್ದು. |
4
|
ದೇವರು ಅಮೋಘವಾದ ಕಾರ್ಯಗಳನ್ನು ಮಾಡುವುದರಿಂದ ಆತನ ದಯೆಯನ್ನೂ ಕೃಪೆಯನ್ನೂ ಜ್ಞಾಪಿಸಿಕೊಳ್ಳುತ್ತೇವೆ. |
5
|
ಆತನು ತನ್ನ ಭಕ್ತರಿಗೆ ಆಹಾರವನ್ನು ಒದಗಿಸುವನು; ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು. |
6
|
ಆತನು ಅನ್ಯಜನಾಂಗಗಳ ದೇಶವನ್ನು ತನ್ನ ಜನರಿಗೆ ಕೊಡುವುದರ ಮೂಲಕ ಪ್ರಬಲವಾದ ಕಾರ್ಯಗಳನ್ನು ಮಾಡಿದ್ದಾನೆ. |
7
|
ಆತನ ಪ್ರತಿಯೊಂದು ಕಾರ್ಯವು ಒಳ್ಳೆಯದೂ ನ್ಯಾಯವಾದದ್ದೂ ಆಗಿದೆ. ಆತನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ. |
8
|
ದೇವರ ಆಜ್ಞೆಗಳು ಶಾಶ್ವತವಾಗಿವೆ. ಅವು ಯಥಾರ್ಥವಾಗಿಯೂ ಮತ್ತು ಶುದ್ಧವಾಗಿಯೂ ಇವೆ. |
9
|
ಆತನು ತನ್ನ ಜನರನ್ನು ರಕ್ಷಿಸಿ ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆ. ಆತನ ಹೆಸರು ಅದ್ಭುತವಾಗಿಯೂ ಪರಿಶುದ್ಧವಾಗಿಯೂ ಇದೆ. |
10
|
ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ. ಆತನಿಗೆ ಸದಾಕಾಲ ಸ್ತೋತ್ರವಾಗಲಿ. |
Psalms 111:9 Kannada Language Bible Words basic statistical display
COMING SOON ...