Bible Languages

Indian Language Bible Word Collections

Bible Versions

Books

Psalms Chapters

Psalms 112 Verses

Bible Versions

Books

Psalms Chapters

Psalms 112 Verses

1 ಯೆಹೋವನಿಗೆ ಸ್ತೋತ್ರವಾಗಲಿ! ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು.
2 ಅವನ ಸಂತತಿಗಳವರು ಭೂಮಿಯ ಮೇಲೆ ಪ್ರಬಲರಾಗುವರು; ನೀತಿವಂತನ ಸಂತತಿಗಳವರು ಆಶೀರ್ವಾದವನ್ನು ಹೊಂದಿಕೊಳ್ಳುವರು.
3 ಅವನ ಕುಟುಂಬದವರು ಐಶ್ವರ್ಯವಂತರಾಗುವರು. ಅವನ ನೀತಿಯು ಶಾಶ್ವತವಾಗಿರುವುದು.
4 ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. ಆತನು ಒಳ್ಳೆಯವನೂ, ದಯಾಮಯನೂ, ಕೃಪಾಮಯನೂ ಆಗಿದ್ದಾನೆ.
5 ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.
6 ಅವನೆಂದಿಗೂ ಬೀಳುವುದಿಲ್ಲ. ನೀತಿವಂತನನ್ನು ಜನರು ಸದಾಕಾಲ ಜ್ಞಾಪಿಸಿಕೊಳ್ಳುವರು.
7 ಒಳ್ಳೆಯವನು ಕೆಟ್ಟಸುದ್ದಿಗೆ ಭಯಪಡಬೇಕಿಲ್ಲ. ಅವನು ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ ಅವನ ಮನಸ್ಸು ಸ್ಥಿರವಾಗಿರುವುದು.
8 ಅವನ ಮನಸ್ಸು ದೃಢವಾಗಿರುವುದರಿಂದ ಅವನು ಭಯಪಡದೆ, ತನ್ನ ಶತ್ರುಗಳನ್ನು ಸೋಲಿಸುವನು.
9 ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.
10 ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. ಅವರ ದುರಾಶೆಯು ಈಡೇರದು.

Psalms 112:1 Kannada Language Bible Words basic statistical display

COMING SOON ...

×

Alert

×