1
|
ಯೆಹೋವನಿಗೆ ಸ್ತೋತ್ರವಾಗಲಿ! ಯೆಹೋವನ ಸೇವಕರೇ, ಆತನಿಗೆ ಸ್ತೋತ್ರಮಾಡಿರಿ! ಆತನ ಹೆಸರನ್ನು ಕೊಂಡಾಡಿರಿ. |
2
|
ಯೆಹೋವನ ಹೆಸರು ಇಂದಿಗೂ ಎಂದೆಂದಿಗೂ ಸ್ತುತಿಸಲ್ಪಡಲಿ. |
3
|
ಪೂರ್ವದಿಂದಿಡಿದು ಪಶ್ಚಿಮದವರೆಗೂ ಯೆಹೋವನ ಹೆಸರು ಸ್ತುತಿಸಲ್ಪಡಲಿ. |
4
|
ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನಾಗಿದ್ದಾನೆ; ಆತನ ಪ್ರಭಾವವು ಪರಲೋಕದಲ್ಲಿ ಮೆರೆಯಲಿ. |
5
|
ನಮ್ಮ ದೇವರಾದ ಯೆಹೋವನಿಗೆ ಸಮಾನರು ಇಲ್ಲವೇ ಇಲ್ಲ. ಆತನು ಉನ್ನತ ಲೋಕದಲ್ಲಿ ಸಿಂಹಾಸನಾರೂಢನಾಗಿದ್ದಾನೆ. |
6
|
ಆತನು ಆಕಾಶವನ್ನೂ ಭೂಮಿಯನ್ನೂ ಬಾಗಿ ನೋಡುವನು. |
7
|
ಆತನು ಬಡವರನ್ನು ಧೂಳಿನಿಂದ ಎಬ್ಬಿಸುವನು; ಭಿಕ್ಷುಕರನ್ನು ತಿಪ್ಪೆಯಿಂದ ಎತ್ತುವನು. |
8
|
ಆತನು ಅವರನ್ನು ಪ್ರಮುಖರನ್ನಾಗಿಯೂ ನಾಯಕರುಗಳನ್ನಾಗಿಯೂ ಮಾಡುವನು. |
9
|
ಆತನು ಬಂಜೆಗೆ ಮಕ್ಕಳನ್ನು ಅನುಗ್ರಹಿಸಿ ಸಂತೋಷಪಡಿಸುವನು. ಯೆಹೋವನಿಗೆ ಸ್ತೋತ್ರವಾಗಲಿ! |
Psalms 113:2 Kannada Language Bible Words basic statistical display
COMING SOON ...