1
|
ಇಸ್ರೇಲರು ಈಜಿಪ್ಟಿನಿಂದ ಹೊರಟರು. ಯಾಕೋಬ್ಯರು ಪರದೇಶದಿಂದ ಹೊರಟರು. |
2
|
ಆಗ ಯೆಹೂದದ ಜನರು ದೇವರ ವಿಶೇಷ ಪ್ರಜೆಯಾದರು; ಇಸ್ರೇಲ್ ಆತನ ರಾಜ್ಯವಾಯಿತು. |
3
|
ಕೆಂಪು ಸಮುದ್ರವು ಇದನ್ನು ಕಂಡು ಓಡಿಹೋಯಿತು. ಜೋರ್ಡನ್ ನದಿಯು ಹಿಂತಿರುಗಿ ಓಡಿಹೋಯಿತು. |
4
|
ಬೆಟ್ಟಗಳು ಟಗರುಗಳಂತೆಯೂ ಗುಡ್ಡಗಳು ಕುರಿಮರಿಗಳಂತೆಯೂ ನೃತ್ಯಮಾಡಿದವು. |
5
|
ಕೆಂಪು ಸಮುದ್ರವೇ, ನೀನೇಕೆ ಓಡಿಹೋದೆ? ಜೋರ್ಡನ್ ನದಿಯೇ ನೀನೇಕೆ ಹಿಂತಿರುಗಿ ಓಡಿಹೋದೆ? |
6
|
ಬೆಟ್ಟಗಳೇ, ನೀವೇಕೆ ಟಗರುಗಳಂತೆಯೂ ಗುಡ್ಡಗಳೇ, ನೀವೇಕೆ ಕುರಿಮರಿಗಳಂತೆಯೂ ನೃತ್ಯಮಾಡಿದಿರಿ? |
7
|
ಯಾಕೋಬನ ದೇವರೂ ಒಡೆಯನೂ ಆಗಿರುವ ಯೆಹೋವನ ಎದುರಿನಲ್ಲಿ ಭೂಮಿಯು ನಡುಗಿತು. |
8
|
ಬಂಡೆಯೊಳಗಿಂದ ನೀರು ಹರಿದುಬರುವಂತೆ ಮಾಡಿದವನು ಆತನೇ. ಗಟ್ಟಿಯಾದ ಬಂಡೆಯೊಳಗಿಂದ ನೀರಿನ ಒರತೆಯನ್ನು ಬರಮಾಡಿದವನು ಆತನೇ. |
Psalms 114:1 Kannada Language Bible Words basic statistical display
COMING SOON ...