1
|
ಯೆಹೋವನೇ, ಘನಮಾನಗಳು ನಮ್ಮವಲ್ಲ! ಅವು ನಿನ್ನವೇ. ನಿನ್ನ ಪ್ರೀತಿಯ ನಿಮಿತ್ತವಾಗಿಯೂ ನಂಬಿಗಸ್ತಿಕೆಯ ನಿಮಿತ್ತವಾಗಿಯೂ ಘನಮಾನಗಳು ನಿನಗೇ ಸಲ್ಲತಕ್ಕದ್ದು. |
2
|
ಅವರ ದೇವರು ಎಲ್ಲಿದ್ದಾನೆಂದು ಜನಾಂಗಗಳು ಯಾಕೆ ಹೇಳಬೇಕು? |
3
|
ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಬಯಸಿದ್ದನ್ನೆಲ್ಲಾ ಮಾಡುತ್ತಾನೆ. |
4
|
ಅನ್ಯಜನಾಂಗಗಳ “ದೇವರುಗಳು” ಬೆಳ್ಳಿಬಂಗಾರಗಳಿಂದ ಮಾಡಿದ ವಿಗ್ರಹಗಳಷ್ಟೇ. ಅವುಗಳನ್ನು ಮಾಡಿದವರು ಮನುಷ್ಯರೇ. |
5
|
ಆ ವಿಗ್ರಹಗಳಿಗೆ ಬಾಯಿಗಳಿವೆ, ಆದರೆ ಮಾತಾಡಲಾರವು. ಕಣ್ಣುಗಳಿವೆ, ಆದರೆ ನೋಡಲಾರವು. |
6
|
ಕಿವಿಗಳಿವೆ, ಆದರೆ ಕೇಳಲಾರವು. ಮೂಗುಗಳಿವೆ, ಆದರೆ ಮೂಸಲಾರವು. |
7
|
ಕೈಗಳಿವೆ, ಆದರೆ ಯಾವುದನ್ನೂ ಮುಟ್ಟಲಾರವು. ಕಾಲುಗಳಿವೆ, ಆದರೆ ನಡೆಯಲಾರವು. ಅವುಗಳ ಗಂಟಲುಗಳಿಂದ ಶಬ್ದವೇ ಹೊರಡದು. |
8
|
ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಟ್ಟಿರುವವರೂ ಅವುಗಳಂತೆಯೇ. |
9
|
ಇಸ್ರೇಲರೇ, ಯೆಹೋವನಲ್ಲಿ ಭರವಸವಿಡಿರಿ. ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ. |
10
|
ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ. |
11
|
ಯೆಹೋವನ ಭಕ್ತರು ಆತನಲ್ಲಿ ಭರವಸವಿಡುವರು, ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ. |
12
|
ಯೆಹೋವನು ನಮ್ಮನ್ನು ಜ್ಞಾಪಕಮಾಡಿಕೊಂಡು ಆಶೀರ್ವದಿಸುವನು. ಆತನು ಇಸ್ರೇಲನ್ನೂ ಆರೋನನ ಮನೆತನವನ್ನೂ ಆಶೀರ್ವದಿಸುವನು. |
13
|
ಆತನು ದೊಡ್ಡವರೂ ಚಿಕ್ಕವರೂ ಎಂದೆನ್ನದೆ ತನ್ನ ಭಕ್ತರನ್ನೆಲ್ಲಾ ಆಶೀರ್ವದಿಸುವನು. |
14
|
ಯೆಹೋವನು ನಿಮ್ಮ ಕುಟುಂಬಗಳನ್ನೂ ನಿಮ್ಮ ಮಕ್ಕಳ ಕುಟುಂಬಗಳನ್ನೂ ಅಭಿವೃದ್ಧಿಪಡಿಸಲಿ. |
15
|
ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಪರಲೋಕವನ್ನೂ ಭೂಲೋಕವನ್ನೂ ಸೃಷ್ಟಿಮಾಡಿದಾತನು ಆತನೇ. |
16
|
ಪರಲೋಕವು ಯೆಹೋವನದು. ಆತನು ಭೂಲೋಕವನ್ನು ಮನುಷ್ಯರಿಗೆ ಕೊಟ್ಟನು. |
17
|
ಸತ್ತುಹೋದವರು ಯೆಹೋವನನ್ನು ಕೊಂಡಾಡುವುದಿಲ್ಲ. ಸಮಾಧಿಯೊಳಗಿರುವವರು ಆತನನ್ನು ಸ್ತುತಿಸುವುದಿಲ್ಲ. |
18
|
ನಾವಾದರೊ ಯೆಹೋವನನ್ನು ಈಗಲೂ ಯಾವಾಗಲೂ ಸ್ತುತಿಸುವೆವು! ಯೆಹೋವನಿಗೆ ಸ್ತೋತ್ರ! |
Psalms 115:2 Kannada Language Bible Words basic statistical display
COMING SOON ...