Bible Languages

Indian Language Bible Word Collections

Bible Versions

Books

Psalms Chapters

Psalms 115 Verses

Bible Versions

Books

Psalms Chapters

Psalms 115 Verses

1 ಯೆಹೋವನೇ, ಘನಮಾನಗಳು ನಮ್ಮವಲ್ಲ! ಅವು ನಿನ್ನವೇ. ನಿನ್ನ ಪ್ರೀತಿಯ ನಿಮಿತ್ತವಾಗಿಯೂ ನಂಬಿಗಸ್ತಿಕೆಯ ನಿಮಿತ್ತವಾಗಿಯೂ ಘನಮಾನಗಳು ನಿನಗೇ ಸಲ್ಲತಕ್ಕದ್ದು.
2 ಅವರ ದೇವರು ಎಲ್ಲಿದ್ದಾನೆಂದು ಜನಾಂಗಗಳು ಯಾಕೆ ಹೇಳಬೇಕು?
3 ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಬಯಸಿದ್ದನ್ನೆಲ್ಲಾ ಮಾಡುತ್ತಾನೆ.
4 ಅನ್ಯಜನಾಂಗಗಳ “ದೇವರುಗಳು” ಬೆಳ್ಳಿಬಂಗಾರಗಳಿಂದ ಮಾಡಿದ ವಿಗ್ರಹಗಳಷ್ಟೇ. ಅವುಗಳನ್ನು ಮಾಡಿದವರು ಮನುಷ್ಯರೇ.
5 ಆ ವಿಗ್ರಹಗಳಿಗೆ ಬಾಯಿಗಳಿವೆ, ಆದರೆ ಮಾತಾಡಲಾರವು. ಕಣ್ಣುಗಳಿವೆ, ಆದರೆ ನೋಡಲಾರವು.
6 ಕಿವಿಗಳಿವೆ, ಆದರೆ ಕೇಳಲಾರವು. ಮೂಗುಗಳಿವೆ, ಆದರೆ ಮೂಸಲಾರವು.
7 ಕೈಗಳಿವೆ, ಆದರೆ ಯಾವುದನ್ನೂ ಮುಟ್ಟಲಾರವು. ಕಾಲುಗಳಿವೆ, ಆದರೆ ನಡೆಯಲಾರವು. ಅವುಗಳ ಗಂಟಲುಗಳಿಂದ ಶಬ್ದವೇ ಹೊರಡದು.
8 ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಟ್ಟಿರುವವರೂ ಅವುಗಳಂತೆಯೇ.
9 ಇಸ್ರೇಲರೇ, ಯೆಹೋವನಲ್ಲಿ ಭರವಸವಿಡಿರಿ. ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ.
10 ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ.
11 ಯೆಹೋವನ ಭಕ್ತರು ಆತನಲ್ಲಿ ಭರವಸವಿಡುವರು, ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ.
12 ಯೆಹೋವನು ನಮ್ಮನ್ನು ಜ್ಞಾಪಕಮಾಡಿಕೊಂಡು ಆಶೀರ್ವದಿಸುವನು. ಆತನು ಇಸ್ರೇಲನ್ನೂ ಆರೋನನ ಮನೆತನವನ್ನೂ ಆಶೀರ್ವದಿಸುವನು.
13 ಆತನು ದೊಡ್ಡವರೂ ಚಿಕ್ಕವರೂ ಎಂದೆನ್ನದೆ ತನ್ನ ಭಕ್ತರನ್ನೆಲ್ಲಾ ಆಶೀರ್ವದಿಸುವನು.
14 ಯೆಹೋವನು ನಿಮ್ಮ ಕುಟುಂಬಗಳನ್ನೂ ನಿಮ್ಮ ಮಕ್ಕಳ ಕುಟುಂಬಗಳನ್ನೂ ಅಭಿವೃದ್ಧಿಪಡಿಸಲಿ.
15 ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಪರಲೋಕವನ್ನೂ ಭೂಲೋಕವನ್ನೂ ಸೃಷ್ಟಿಮಾಡಿದಾತನು ಆತನೇ.
16 ಪರಲೋಕವು ಯೆಹೋವನದು. ಆತನು ಭೂಲೋಕವನ್ನು ಮನುಷ್ಯರಿಗೆ ಕೊಟ್ಟನು.
17 ಸತ್ತುಹೋದವರು ಯೆಹೋವನನ್ನು ಕೊಂಡಾಡುವುದಿಲ್ಲ. ಸಮಾಧಿಯೊಳಗಿರುವವರು ಆತನನ್ನು ಸ್ತುತಿಸುವುದಿಲ್ಲ.
18 ನಾವಾದರೊ ಯೆಹೋವನನ್ನು ಈಗಲೂ ಯಾವಾಗಲೂ ಸ್ತುತಿಸುವೆವು! ಯೆಹೋವನಿಗೆ ಸ್ತೋತ್ರ!

Psalms 115:6 Kannada Language Bible Words basic statistical display

COMING SOON ...

×

Alert

×