1
|
ಯೆಹೋವನು ನನ್ನ ಮೊರೆಯನ್ನು ಕೇಳಿದ್ದರಿಂದ ನಾನು ಆತನನ್ನು ಪ್ರೀತಿಸುತ್ತೇನೆ. |
2
|
ನಾನು ಆತನಿಗೆ ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ. |
3
|
ಮರಣಕರವಾದ ಹಗ್ಗಗಳು ನನ್ನನ್ನು ಸುತ್ತಿಕೊಂಡಿದ್ದವು. ಸಮಾಧಿಯು ನನ್ನನ್ನು ಮುಚ್ಚಿಕೊಳ್ಳುತ್ತಿತ್ತು. ನಾನು ಭಯಗೊಂಡಿದ್ದೆನು; ಚಿಂತೆಗೊಳಗಾಗಿದ್ದೆನು. |
4
|
ಆಗ ನಾನು ಯೆಹೋವನ ಹೆಸರು ಹೇಳಿ, “ಯೆಹೋವನೇ, ನನ್ನನ್ನು ರಕ್ಷಿಸು!” ಎಂದು ಮೊರೆಯಿಟ್ಟೆನು. |
5
|
ಯೆಹೋವನು ಒಳ್ಳೆಯವನೂ ಕೃಪಾಪೂರ್ಣನೂ ಆಗಿದ್ದಾನೆ. ನಮ್ಮ ದೇವರು ಕರುಣಾಮಯನಾಗಿದ್ದಾನೆ. |
6
|
ಯೆಹೋವನು ಅಸಹಾಯಕರನ್ನು ಕಾಪಾಡುವನು. ನಾನು ಅಸಹಾಯಕನಾಗಿದ್ದಾಗ ಯೆಹೋವನು ನನ್ನನ್ನು ರಕ್ಷಿಸಿದನು. |
7
|
ನನ್ನ ಆತ್ಮವೇ, ವಿಶ್ರಮಿಸಿಕೋ! ಯೆಹೋವನು ನಿನ್ನನ್ನು ಕಾಪಾಡುವನು. |
8
|
ಯೆಹೋವನೇ, ನೀನು ನನ್ನ ಆತ್ಮವನ್ನು ಮರಣದಿಂದ ರಕ್ಷಿಸಿದೆ. ನೀನು ನನ್ನ ಕಣ್ಣೀರನ್ನು ನಿಲ್ಲಿಸಿದೆ; ಬೀಳದಂತೆ ನನ್ನನ್ನು ಕಾಪಾಡಿದೆ. |
9
|
ಜೀವಿಸುವವರ ನಾಡಿನಲ್ಲಿ ನಾನು ಯೆಹೋವನ ಸೇವೆಯನ್ನು ಮುಂದುವರಿಸುವೆನು. |
10
|
“ನಾಶವಾದೆನು!” ಎಂದು ನಾನು ಹೇಳಿದಾಗಲೂ ನಂಬಿಕೊಂಡೇ ಇದ್ದೆನು. |
11
|
ನಾನು ಭಯಗೊಂಡು, “ಎಲ್ಲಾ ಮನುಷ್ಯರು ಸುಳ್ಳುಗಾರರಾಗಿದ್ದಾರೆ!” ಎಂದು ಹೇಳಿದಾಗಲೂ ನಂಬಿಕೊಂಡೇ ಇದ್ದೆನು. |
12
|
ಯೆಹೋವನ ಮಹೋಪಕಾರಗಳಿಗೆ ಬದಲೇನು ಕೊಡಲಿ? ನನ್ನಲ್ಲಿರುವುದೆಲ್ಲ ಯೆಹೋವನದೇ. |
13
|
ನನ್ನನ್ನು ರಕ್ಷಿಸಿದ್ದರಿಂದ ಆತನಿಗೆ ಪಾನದ್ರವ್ಯವನ್ನು ಅರ್ಪಿಸುವೆನು. ಆತನ ಹೆಸರಿನಲ್ಲಿ ಪ್ರಾರ್ಥಿಸುವೆನು. |
14
|
ನಾನು ಯೆಹೋವನಿಗೆ ಮಾಡಿದ ಹರಕೆಗಳನ್ನು ಜನರ ಮುಂದೆ ಆತನಿಗೆ ಸಲ್ಲಿಸುವೆನು. |
15
|
ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ. |
16
|
ಯೆಹೋವನೇ, ನಾನು ನಿನ್ನ ಸೇವಕ. ನಿನ್ನ ದಾಸಿಯರಲ್ಲೊಬ್ಬಳ ಮಗ. ನೀನೇ ನನ್ನ ಪ್ರಥಮ ಉಪಾಧ್ಯಾಯ! |
17
|
ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು. ಆತನ ಹೆಸರಿನಲ್ಲಿ ಪ್ರಾರ್ಥಿಸುವೆನು. |
18
|
ನನ್ನ ಹರಕೆಗಳನ್ನು ಯೆಹೋವನಿಗೆ ಜನರ ಮುಂದೆ ಸಲ್ಲಿಸುವೆನು. |
19
|
ಜೆರುಸಲೇಮಿನ ದೇವಾಲಯದ ಅಂಗಳಗಳಲ್ಲಿ ಈ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನಿಗೆ ಸ್ತೋತ್ರವಾಗಲಿ! |
Psalms 116:11 Kannada Language Bible Words basic statistical display
COMING SOON ...