Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Books

Psalms Chapters

Psalms 118 Verses

1 1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು!
2 ಇಸ್ರೇಲರೇ, “ಆತನ ಪ್ರೀತಿ ಶಾಶ್ವತವಾದದ್ದು” ಎಂದು ಹೇಳಿರಿ.
3 ಯಾಜಕರೇ, “ಆತನ ಪ್ರೀತಿ ಶಾಶ್ವತವಾದದ್ದು!” ಎಂದು ಹೇಳಿರಿ.
4 ಯೆಹೋವನ ಭಕ್ತರೇ, “ಆತನ ಪ್ರೀತಿ ಶಾಶ್ವತವಾದದ್ದು” ಎಂದು ಹೇಳಿರಿ.
5 ನಾನು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿ ನನ್ನನ್ನು ಬಿಡಿಸಿದನು.
6 ಯೆಹೋವನು ನನ್ನೊಂದಿಗಿದ್ದಾನೆ, ಆದ್ದರಿಂದ ನಾನು ಭಯಪಡುವುದಿಲ್ಲ. ಮನುಷ್ಯರು ನನಗೇನು ಮಾಡಬಲ್ಲರು?
7 ಯೆಹೋವನು ನನಗೆ ಸಹಾಯಕನಾಗಿದ್ದಾನೆ. ನನ್ನ ಶತ್ರುಗಳಿಗಾಗುವ ಸೋಲನ್ನು ಕಣ್ಣಾರೆ ಕಾಣುವೆನು.
8 ಜನರಲ್ಲಿ ಭರವಸೆ ಇಡುವುದಕ್ಕಿಂತಲೂ ಯೆಹೋವನಲ್ಲಿ ಭರವಸೆ ಇಡುವುದೇ ಉತ್ತಮ.
9 ನಿಮ್ಮ ನಾಯಕರುಗಳಲ್ಲಿ ಭರವಸೆ ಇಡುವುದಕ್ಕಿಂತಲೂ ಯೆಹೋವನಲ್ಲಿ ಭರವಸೆ ಇಡುವುದೇ ಉತ್ತಮ.
10 ಅನೇಕ ಶತ್ರುಗಳು ನನ್ನನ್ನು ಸುತ್ತುಗಟ್ಟಿದರು. ನಾನು ಅವರನ್ನು ಯೆಹೋವನ ಶಕ್ತಿಯಿಂದ ಸೋಲಿಸಿದೆನು.
11 ಶತ್ರುಗಳು ನನ್ನನ್ನು ಮತ್ತೆಮತ್ತೆ ಸುತ್ತುಗಟ್ಟಿದರು. ನಾನು ಅವರನ್ನು ಯೆಹೋವನ ಶಕ್ತಿಯಿಂದ ಸೋಲಿಸಿದೆನು.
12 ಶತ್ರುಗಳು ಜೇನುನೊಣಗಳ ಹಿಂಡಿನಂತೆ ನನ್ನನ್ನು ಸುತ್ತುಗಟ್ಟಿದರು. ಆದರೆ, ಧಗಧಗನೆ ಉರಿಯುವ ಪೊದೆಯಂತೆ ಅವರು ಕೊನೆಗೊಂಡರು. ನಾನು ಅವರನ್ನು ಯೆಹೋವನ ಶಕ್ತಿಯಿಂದ ಸೋಲಿಸಿದೆನು.
13 ಶತ್ರುಗಳು ನನ್ನ ಮೇಲೆ ಆಕ್ರಮಣಮಾಡಿ ಸಂಪೂರ್ಣವಾಗಿ ನಾಶಮಾಡಲಿದ್ದರು. ಆದರೆ ಯೆಹೋವನು ನನಗೆ ಸಹಾಯ ಮಾಡಿದನು.
14 ನನ್ನ ಬಲವೂ ಜಯಗೀತೆಯೂ ಯೆಹೋವನೇ. ಆತನೇ ನನ್ನನ್ನು ರಕ್ಷಿಸುವನು!
15 ಜಯೋತ್ಸವವು ನೀತಿವಂತರ ಮನೆಗಳಲ್ಲಿ ಕೇಳಿಬರುತ್ತಿದೆ. ಯೆಹೋವನು ತನ್ನ ಮಹಾಶಕ್ತಿಯನ್ನು ಮತ್ತೆ ತೋರಿಸಿದ್ದಾನೆ.
16 ಯೆಹೋವನ ಬಲಗೈ ಜಯಗಳಿಸಿದೆ. ಯೆಹೋವನು ತನ್ನ ಮಹಾಶಕ್ತಿಯನ್ನು ಮತ್ತೆ ತೋರಿದ್ದಾನೆ.
17 ನಾನು ಸಾಯುವುದಿಲ್ಲ; ನಾನು ಜೀವದಿಂದಿದ್ದು ಯೆಹೋವನ ಕಾರ್ಯಗಳ ಕುರಿತು ಹೇಳುತ್ತೇನೆ.
18 ಯೆಹೋವನು ನನ್ನನ್ನು ಶಿಕ್ಷಿಸಿದರೂ ಸಾವಿಗೀಡುಮಾಡಲಿಲ್ಲ.
19 ನೀತಿಯ ಬಾಗಿಲುಗಳೇ, ನನಗೋಸ್ಕರ ತೆರೆಯಿರಿ, ನಾನು ಒಳಗೆ ಬಂದು ಯೆಹೋವನನ್ನು ಆರಾಧಿಸುತ್ತೇನೆ.
20 ಅವು ಯೆಹೋವನ ಬಾಗಿಲುಗಳು. ನೀತಿವಂತರು ಮಾತ್ರ ಆ ಬಾಗಿಲುಗಳ ಮೂಲಕ ಹೋಗಬಲ್ಲರು.
21 ಯೆಹೋವನೇ, ನನ್ನ ಪ್ರಾರ್ಥನೆಗೆ ನೀನು ಉತ್ತರಿಸಿ ನನ್ನನ್ನು ರಕ್ಷಿಸಿದ್ದಕ್ಕೋಸ್ಕರ ನಿನಗೆ ಕೃತಜ್ಞತಾಸ್ತುತಿ ಮಾಡುವೆನು.
22 ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.
23 ಇದು ಯೆಹೋವನಿಂದಲೇ ಆಯಿತು. ನಮಗಂತೂ ಇದು ಆಶ್ಚರ್ಯಕರವಾಗಿದೆ!
24 ಈ ದಿನವನ್ನು ಮಾಡಿದಾತನು ಯೆಹೋವನೇ. ಇಂದೇ ನಾವು ಉಲ್ಲಾಸದಿಂದ ಆನಂದಿಸೋಣ.
25 “ಯೆಹೋವನಿಗೆ ಸ್ತೋತ್ರವಾಗಲಿ! ಆತನು ನಮ್ಮನ್ನು ರಕ್ಷಿಸಿದ್ದಾನೆ.
26 ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಸುಸ್ವಾಗತ! ಯೆಹೋವನ ಆಲಯದಿಂದ ನಾವು ನಿನ್ನನ್ನು ಆಶೀರ್ವದಿಸುತ್ತೇವೆ!
27 ಯೆಹೋವನೇ ದೇವರು. ಆತನು ನಮ್ಮನ್ನು ಸ್ವೀಕರಿಸಿಕೊಳ್ಳುವನು. ಯಜ್ಞಕ್ಕೋಸ್ಕರ ಕುರಿಮರಿಯನ್ನು ಕಟ್ಟಿ ಯಜ್ಞವೇದಿಕೆಯ ಕೊಂಬುಗಳ ಸಮೀಪಕ್ಕೆ ಹೊತ್ತುಕೊಂಡು ಬನ್ನಿರಿ” ಎಂದು ಯಾಜಕರು ಉತ್ತರಿಸಿದರು.
28 ಯೆಹೋವನೇ, ನೀನೇ ನನ್ನ ದೇವರು; ನಾನು ನಿನಗೆ ಕೃತಜ್ಞತೆ ಸಲ್ಲಿಸುವೆನು. ನಾನು ನಿನ್ನನ್ನು ಘನಪಡಿಸುವೆನು!
29 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು.
×

Alert

×