Indian Language Bible Word Collections
Psalms 119:39
Psalms Chapters
Psalms 119 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Psalms Chapters
Psalms 119 Verses
1
|
ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸುತ್ತಾ ಪವಿತ್ರರಾಗಿ ಜೀವಿಸುವವರು ಧನ್ಯರಾಗಿದ್ದಾರೆ. |
2
|
ಆತನ ಒಡಂಬಡಿಕೆಗೆ ಸಂಪೂರ್ಣಹೃದಯದಿಂದ ವಿಧೇಯರಾಗುವವರು ಧನ್ಯರು. |
3
|
ಅವರು ಕೆಟ್ಟದ್ದನ್ನು ಮಾಡದೆ ಆತನಿಗೆ ವಿಧೇಯರಾಗಿರುವರು. |
4
|
ಯೆಹೋವನೇ, ನಮಗೆ ಆಜ್ಞೆಗಳನ್ನು ಕೊಟ್ಟವನೂ ನೀನೇ. ಅವುಗಳಿಗೆ ಸಂಪೂರ್ಣವಾಗಿ ವಿಧೇಯರಾಗಬೇಕೆಂದು ನಮಗೆ ಹೇಳಿದವನೂ ನೀನೇ. |
5
|
ನಿನ್ನ ಕಟ್ಟಳೆಗಳಿಗೆ ನಾನು ಯಾವಾಗಲೂ ವಿಧೇಯನಾಗಿದ್ದರೆ, |
6
|
ನಿನ್ನ ಆಜ್ಞೆಗಳನ್ನು ಕಲಿಯುವಾಗ ನನಗೆ ನಾಚಿಕೆಯಾಗದು. |
7
|
ನಾನು ನಿನ್ನ ನ್ಯಾಯವನ್ನೂ ನೀತಿಯನ್ನೂ ಕಲಿತಂತೆಲ್ಲಾ ನಿನ್ನನ್ನು ಕೊಂಡಾಡುವೆನು. |
8
|
ನಾನು ನಿನ್ನ ಕಟ್ಟಳೆಗಳಿಗೆ ವಿಧೇಯನಾಗಿದ್ದೇನೆ. ದಯವಿಟ್ಟು ನನ್ನನ್ನು ಕೈಬಿಡಬೇಡ! |
9
|
ಯೌವನಸ್ಥನು ಪವಿತ್ರನಾಗಿ ಜೀವಿಸುವುದು ಯಾವುದರಿಂದ? ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದರಿಂದಲೇ. |
10
|
ನಾನು ಪೂರ್ಣಹೃದಯದಿಂದ ದೇವರ ಸೇವೆಮಾಡುವೆ; ದೇವರೇ, ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನಗೆ ಸಹಾಯಮಾಡು. |
11
|
ನಾನು ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ಉಪದೇಶಗಳನ್ನು ಹೃದಯದಲ್ಲಿ ಇಟ್ಟುಕೊಂಡಿದ್ದೇನೆ. |
12
|
ಯೆಹೋವನೇ, ನಿನಗೆ ಸ್ತೋತ್ರವಾಗಲಿ. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. |
13
|
ನನ್ನ ತುಟಿಗಳು ನಿನ್ನ ಜ್ಞಾನದ ನಿರ್ಧಾರಗಳ ಕುರಿತು ವರ್ಣಿಸುತ್ತವೆ. |
14
|
ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ನಿನ್ನ ಒಡಂಬಡಿಕೆಯನ್ನು ಅಭ್ಯಾಸ ಮಾಡುವುದರಲ್ಲಿ ಆನಂದಿಸುವೆನು. |
15
|
ನಾನು ನಿನ್ನ ನಿಯಮಗಳನ್ನು ಚರ್ಚಿಸುವೆನು ನಿನ್ನ ಜೀವಮಾರ್ಗವನ್ನು ಅನುಸರಿಸುವೆನು. |
16
|
ನಾನು ನಿನ್ನ ಕಟ್ಟಳೆಗಳಲ್ಲಿ ಆನಂದಿಸುವೆನು, ನಿನ್ನ ಮಾತುಗಳನ್ನು ಮರೆಯುವುದಿಲ್ಲ. |
17
|
ನಿನ್ನ ಸೇವಕನಾದ ನನಗೆ ದಯೆತೋರು. ಆಗ ನಾನು ಜೀವದಿಂದಿದ್ದು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು. |
18
|
ನನ್ನ ಕಣ್ಣುಗಳನ್ನು ತೆರೆ, ಆಗ ನಾನು ನಿನ್ನ ಉಪದೇಶಗಳನ್ನು ಕಾಣುವೆ; ನೀನು ಮಾಡಿದ ಅದ್ಭುತಕಾರ್ಯಗಳ ಕುರಿತು ಓದುವೆ. |
19
|
ನಾನು ಈ ದೇಶದಲ್ಲಿ ಅಪರಿಚಿತನಾಗಿದ್ದೇನೆ. ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ. |
20
|
ನಿನ್ನ ನಿರ್ಧಾರಗಳನ್ನು ತಿಳಿದುಕೊಳ್ಳಲು ಯಾವಾಗಲೂ ನಾನು ಹಂಬಲಿಸುತ್ತಿದ್ದೇನೆ. |
21
|
ನೀನು ಗರ್ವಿಷ್ಠರನ್ನು ಖಂಡಿಸುವೆ. ನಿನ್ನ ಆಜ್ಞೆಗಳಿಗೆ ವಿಧೇಯರಾಗದ ಅವರು ಶಾಪಗ್ರಸ್ತರಾಗಿದ್ದಾರೆ. |
22
|
ನನ್ನನ್ನು ಅವಮಾನಕ್ಕೂ ನಾಚಿಕೆಗೂ ಗುರಿಮಾಡಬೇಡ. ನಾನು ನಿನ್ನ ಒಡಂಬಡಿಕೆಗೆ ವಿಧೇಯನಾಗಿದ್ದೇನೆ. |
23
|
ನಾಯಕರುಗಳು ಸಹ ನನ್ನನ್ನು ದೂಷಿಸಿದರು. ನಾನು ನಿನ್ನ ಸೇವಕ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನಿಸುವೆ. |
24
|
ನಿನ್ನ ಒಡಂಬಡಿಕೆಯು ನನಗೆ ಉತ್ತಮ ಸ್ನೇಹಿತನಂತಿದೆ. ಅದು ನನಗೆ ಬುದ್ಧಿಮಾತನ್ನು ಹೇಳಿಕೊಡುವುದು. |
25
|
ನನಗೆ ಸಾವು ಸಮೀಪಿಸಿದೆ. ಯೆಹೋವನೇ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. |
26
|
ನನ್ನ ಜೀವಿತದ ಬಗ್ಗೆ ನಿನ್ನೊಂದಿಗೆ ಹೇಳಿಕೊಂಡೆ. ಆಗ ನೀನು ನನಗೆ ಉತ್ತರಿಸಿದೆ. ಈಗ ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. |
27
|
ನಿನ್ನ ಕಟ್ಟಳೆಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ನೀನು ಮಾಡಿದ ಅದ್ಭುತಕಾರ್ಯಗಳನ್ನು ನನಗೆ ತಿಳಿಯಪಡಿಸು. |
28
|
ನಾನು ದುಃಖಗೊಂಡಿರುವೆ ಮತ್ತು ಆಯಾಸಗೊಂಡಿರುವೆ. ನೀನು ನನ್ನನ್ನು ಜ್ಞಾಪಿಸಿಕೊಂಡು ಮತ್ತೆ ಬಲಗೊಳಿಸು. |
29
|
ಮೋಸಮಾರ್ಗದಲ್ಲಿ ಜೀವಿಸಲು ನನ್ನನ್ನು ಬಿಡಬೇಡ. ನಿನ್ನ ಉಪದೇಶಗಳಿಂದ ಮಾರ್ಗದರ್ಶನ ಮಾಡು. |
30
|
ನಾನು ಸತ್ಯಮಾರ್ಗವನ್ನು ಆರಿಸಿಕೊಂಡಿದ್ದೇನೆ. ನಿನ್ನ ಜ್ಞಾನದ ನಿರ್ಧಾರಗಳನ್ನು ಎಚ್ಚರಿಕೆಯಿಂದ ತಿಳಿದುಕೊಳ್ಳುವೆನು. |
31
|
ನಿನ್ನ ಒಡಂಬಡಿಕೆಗೆ ಅಂಟಿಕೊಂಡಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. |
32
|
ನಿನ್ನ ಆಜ್ಞೆಗಳಿಗೆ ಹರ್ಷದಿಂದ ವಿಧೇಯನಾಗುವೆನು. ನಿನ್ನ ಆಜ್ಞೆಗಳು ನನ್ನನ್ನು ಉಲ್ಲಾಸಗೊಳಿಸುತ್ತವೆ. |
33
|
ಯೆಹೋವನೇ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು, ಆಗ ಅವುಗಳನ್ನು ಅನುಸರಿಸುವೆನು. |
34
|
ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ಆಗ ನಿನ್ನ ಉಪದೇಶಗಳಿಗೆ ಸಂಪೂರ್ಣವಾಗಿ ವಿಧೇಯನಾಗುವೆನು. |
35
|
ನಿನ್ನ ಆಜ್ಞೆಗಳ ಮಾರ್ಗದಲ್ಲಿ ನನ್ನನ್ನು ನಡೆಸು. ಆ ಮಾರ್ಗವೇ ನನಗೆ ಬಹು ಇಷ್ಟ. |
36
|
ಐಶ್ವರ್ಯದ ಮೇಲೆ ಮನಸ್ಸಿಡದೆ ನಿನ್ನ ಒಡಂಬಡಿಕೆಯ ಬಗ್ಗೆ ಧ್ಯಾನಿಸಲು ನನಗೆ ಸಹಾಯಮಾಡು. |
37
|
ನಿಷ್ಪ್ರಯೋಜಕವಾದವುಗಳ ಮೇಲೆ ದೃಷ್ಟಿಸದಂತೆ ನನ್ನನ್ನು ಕಾಪಾಡು. ನಿನ್ನ ಮಾರ್ಗದಲ್ಲಿ ಜೀವಿಸಲು ನನಗೆ ಸಹಾಯಮಾಡು. |
38
|
ನಿನ್ನ ಸೇವಕನಾದ ನನಗೆ ನೀನು ಮಾಡಿದ ವಾಗ್ದಾನಗಳನ್ನು ನೆರವೇರಿಸು. ಆಗ ಜನರು ನಿನ್ನನ್ನು ಗೌರವಿಸುವರು. |
39
|
ಅವಮಾನವನ್ನು ನನ್ನಿಂದ ತೊಲಗಿಸು. ನಾನು ಅದಕ್ಕೆ ಹೆದರಿಕೊಂಡಿದ್ದೇನೆ. ನಿನ್ನ ಜ್ಞಾನದ ನಿರ್ಧಾರಗಳು ಒಳ್ಳೆಯವುಗಳಾಗಿವೆ. |
40
|
ಇಗೋ, ನಿನ್ನ ಆಜ್ಞೆಗಳನ್ನು ಪ್ರೀತಿಸುವೆನು. ನನಗೆ ಒಳ್ಳೆಯವನಾಗಿದ್ದು ನನ್ನನ್ನು ಉಜ್ಜೀವನಗೊಳಿಸು. |
41
|
ಯೆಹೋವನೇ, ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನಿನ್ನ ವಾಗ್ದಾನದಂತೆ ನನ್ನನ್ನು ರಕ್ಷಿಸು. |
42
|
ನನ್ನನ್ನು ಗೇಲಿಮಾಡುವ ಜನರಿಗೆ ಆಗ ನಾನು ಉತ್ತರ ಕೊಡುವೆನು. ಯೆಹೋವನೇ, ನಿನ್ನ ಮಾತುಗಳಲ್ಲೇ ನಾನು ಭರವಸವಿಟ್ಟಿದ್ದೇನೆ. |
43
|
ನಿನ್ನ ಸತ್ಯೋಪದೇಶಗಳನ್ನು ನಾನು ಯಾವಾಗಲೂ ಮಾತಾಡುವಂತಾಗಲಿ. ನಿನ್ನ ಜ್ಞಾನದ ನಿರ್ಧಾರಗಳನ್ನೇ ನಾನು ಆಶ್ರಯಿಸಿಕೊಂಡಿದ್ದೇನೆ. |
44
|
ನಿನ್ನ ಉಪದೇಶಗಳನ್ನು ಎಂದೆಂದಿಗೂ ಅನುಸರಿಸುವೆನು. |
45
|
ಯಾಕೆಂದರೆ, ನಿನ್ನ ನಿಯಮಗಳಿಗೆ ವಿಧೇಯನಾಗಲು ನಾನು ಬಹಳವಾಗಿ ಪ್ರಯತ್ನಿಸುತ್ತಿರುವುದರಿಂದ ಯಾರ ಹಂಗಿಲ್ಲದೆ ನಡೆಯುವೆನು. |
46
|
ರಾಜರುಗಳ ಮುಂದೆಯೂ ಯೆಹೋವನ ಒಡಂಬಡಿಕೆಯ ಕುರಿತು ಚರ್ಚಿಸುವೆನು, ನಾಚಿಕೆಪಡುವುದಿಲ್ಲ. |
47
|
ನಿನ್ನ ಆಜ್ಞೆಗಳಲ್ಲಿ ಆನಂದಿಸುವೆನು; ಅವು ನನಗೆ ಇಷ್ಟವಾಗಿವೆ. |
48
|
ನಿನ್ನ ಆಜ್ಞೆಗಳನ್ನು ಕೊಂಡಾಡುವೆನು, ಅವುಗಳನ್ನು ಧ್ಯಾನಿಸುವೆನು. ಅವು ನನಗೆ ಇಷ್ಟವಾಗಿವೆ. |
49
|
ನಿನ್ನ ವಾಗ್ದಾನವನ್ನು ನನಗೋಸ್ಕರ ನೆನಪು ಮಾಡಿಕೊ. ಆ ವಾಗ್ದಾನವೇ ನನ್ನ ನಿರೀಕ್ಷೆಯಾಗಿದೆ. |
50
|
ಸಂಕಟಪಡುತ್ತಿರುವಾಗ ನೀನು ನನ್ನನ್ನು ಸಂತೈಸಿದೆ. ನಿನ್ನ ನುಡಿಗಳು ನನ್ನನ್ನು ಉಜ್ಜೀವನಗೊಳಿಸಲಿ. |
51
|
ಗರ್ವಿಷ್ಠರು ನನ್ನನ್ನು ಗೇಲಿಮಾಡುತ್ತಲೇ ಇದ್ದರು. ನಾನಾದರೋ ನಿನ್ನ ಉಪದೇಶಗಳನ್ನು ಅನುಸರಿಸುತ್ತಲೇ ಇದ್ದೆನು. |
52
|
ನಿನ್ನ ಜ್ಞಾನದ ನಿರ್ಧಾರಗಳನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವೆ. ಅವು ನನ್ನನ್ನು ಸಂತೈಸುತ್ತವೆ. |
53
|
ನಿನ್ನ ಉಪದೇಶಗಳನ್ನು ಅನುಸರಿಸದ ದುಷ್ಟರನ್ನು ನಾನು ಕಾಣುವಾಗ ಬಹುಕೋಪಗೊಳ್ಳುವೆ. |
54
|
ನನಗಂತೂ, ನಿನ್ನ ಕಟ್ಟಳೆಗಳು ನನ್ನ ಮನೆಯಲ್ಲಿ [*ನನ್ನ ಮನೆಯಲ್ಲಿ ಅಥವಾ “ದೇವಾಲಯದಲ್ಲಿ.”] ಹಾಡುಗಳಾಗಿವೆ. |
55
|
ರಾತ್ರಿಯಲ್ಲಿ ನಾನು ನಿನ್ನ ಹೆಸರನ್ನೂ ನಿನ್ನ ಉಪದೇಶಗಳನ್ನೂ ಜ್ಞಾಪಿಸಿಕೊಳ್ಳುವೆ. |
56
|
ಯಾಕೆಂದರೆ, ನಾನು ನಿನ್ನ ನಿಯಮಗಳಿಗೆ ಎಚ್ಚರಿಕೆಯಿಂದ ವಿಧೇಯನಾಗುವೆನು. |
57
|
ಯೆಹೋವನೇ, ನನ್ನ ಪಾಲು ನೀನೇ; ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದೇ ನನ್ನ ಕರ್ತವ್ಯವೆಂದು ನಿರ್ಧರಿಸಿರುವೆ. |
58
|
ನಿನ್ನನ್ನೇ ಸಂಪೂರ್ಣವಾಗಿ ಆಶ್ರಯಿಸಿಕೊಂಡಿದ್ದೇನೆ. ನಿನ್ನ ವಾಗ್ದಾನದಂತೆ ನನಗೆ ಕರುಣೆತೋರು. |
59
|
ನನ್ನ ಜೀವಿತದ ಕುರಿತು ಎಚ್ಚರಿಕೆಯಿಂದ ಆಲೋಚಿಸಿ ನಿನ್ನ ಕಟ್ಟಳೆಗಳನ್ನು ಅನುಸರಿಸಲು ನಿರ್ಧರಿಸಿದ್ದೇನೆ. |
60
|
ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ತಡಮಾಡದೆ ಬೇಗನೆ ಹಿಂತಿರುಗಿದೆನು. |
61
|
ಗುಂಪಾಗಿ ಸೇರಿದ್ದ ದುಷ್ಟರು ನನ್ನನ್ನು ದೂಷಿಸಿದರೂ ನಿನ್ನ ಉಪದೇಶಗಳನ್ನು ನಾನು ಮರೆಯಲಿಲ್ಲ. |
62
|
ನಿನ್ನ ಒಳ್ಳೆಯ ನಿರ್ಧಾರಗಳಿಗಾಗಿ ಕೃತಜ್ಞತೆ ಸಲ್ಲಿಸಲು ನಾನು ಮಧ್ಯರಾತ್ರಿಯಲ್ಲಿ ಎದ್ದೇಳುವೆನು. |
63
|
ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸ್ನೇಹಿತನಾಗಿದ್ದೇನೆ. ನಿನ್ನ ನಿಯಮಗಳಿಗೆ ವಿಧೇಯರಾಗುವ ಪ್ರತಿಯೊಬ್ಬರಿಗೂ ನಾನು ಸ್ನೇಹಿತನಾಗಿದ್ದೇನೆ. |
64
|
ನಿನ್ನ ಶಾಶ್ವತ ಪ್ರೀತಿಯು ಭೂಮಿಯನ್ನು ತುಂಬಿಕೊಂಡಿದೆ. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. |
65
|
ಯೆಹೋವನೇ, ನಿನ್ನ ವಾಗ್ದಾನಕ್ಕೆ ತಕ್ಕಂತೆ ನಿನ್ನ ಸೇವಕನಿಗೆ ಒಳ್ಳೆಯದನ್ನೇ ಮಾಡಿರುವೆ. |
66
|
ಜ್ಞಾನದ ನಿರ್ಧಾರಗಳನ್ನು ಮಾಡಲು ನನಗೆ ಜ್ಞಾನವನ್ನು ಕೊಡು. ನಾನು ನಿನ್ನ ಆಜ್ಞೆಗಳಲ್ಲಿ ಭರವಸವಿಟ್ಟಿರುವೆ. |
67
|
ನಾನು ಸಂಕಟಪಡುವುದಕ್ಕಿಂತ ಮೊದಲು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದೆ; ಈಗಲಾದರೋ ನಾನು ನಿನ್ನ ಆಜ್ಞೆಗಳಿಗೆ ಎಚ್ಚರಿಕೆಯಿಂದ ವಿಧೇಯನಾಗುವೆನು. |
68
|
ನೀನು ಒಳ್ಳೆಯವನೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಆಗಿರುವೆ. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. |
69
|
ಗರ್ವಿಷ್ಠರು ನನಗೆ ವಿರೋಧವಾಗಿ ಸುಳ್ಳು ಹೇಳಿದರು. ನಾನಾದರೋ ನಿನ್ನ ಆಜ್ಞೆಗಳಿಗೆ ಪೂರ್ಣಹೃದಯದಿಂದ ವಿಧೇಯನಾಗಿರುವೆ. |
70
|
ಅವರು ಬಹು ಮೂಢರು. ನಾನಾದರೋ ನಿನ್ನ ಉಪದೇಶಗಳನ್ನು ಕಲಿಯುವುದರಲ್ಲಿ ಆನಂದಿಸುವೆ. |
71
|
ನಿನ್ನ ಕಟ್ಟಳೆಗಳನ್ನು ಕಲಿಯಲು ನಾನು ಪಟ್ಟ ಪ್ರಯಾಸವು ಒಳ್ಳೆಯದಾಯಿತು. |
72
|
ನಿನ್ನ ಉಪದೇಶಗಳು ನನಗೆ ಒಳ್ಳೆಯದಾಗಿವೆ. ಅವು ಹತ್ತುಸಾವಿರ ಬೆಳ್ಳಿಬಂಗಾರಗಳ ನಾಣ್ಯಗಳಿಗಿಂತಲೂ ಅಮೂಲ್ಯವಾಗಿವೆ. |
73
|
ನಿನ್ನ ಕೈಗಳು ನನ್ನನ್ನು ರೂಪಿಸಿದವು. ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಸಹಾಯಿಸು. |
74
|
ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿರುವುದರಿಂದ ನಿನ್ನ ಭಕ್ತರು ನನ್ನನ್ನು ಕಂಡಾಗ ಸಂತೋಷಿಸಲಿ. |
75
|
ಯೆಹೋವನೇ, ನಿನ್ನ ತೀರ್ಪುಗಳು ನ್ಯಾಯವಾದವುಗಳೆಂದು ನನಗೆ ತಿಳಿದಿದೆ. ನೀನು ನನ್ನನ್ನು ಶಿಕ್ಷಿಸಿದ್ದು ನನ್ನ ದೃಷ್ಟಿಯಲ್ಲಿ ನ್ಯಾಯವಾಗಿತ್ತು. |
76
|
ಈಗ, ನಿನ್ನ ಶಾಶ್ವತ ಪ್ರೀತಿಯಿಂದ ನನ್ನನ್ನು ಸಂತೈಸು. ನಿನ್ನ ವಾಗ್ದಾನದಂತೆ ನನ್ನನ್ನು ಸಂತೈಸು. |
77
|
ನನ್ನನ್ನು ಸಂತೈಸಿ ಉಜ್ಜೀವನಗೊಳಿಸು; ನಾನು ನಿನ್ನ ಉಪದೇಶಗಳಲ್ಲಿಯೇ ಆನಂದಿಸುತ್ತಿರುವೆ. |
78
|
ಗರ್ವಿಷ್ಠರಿಗೆ ಅವಮಾನವಾಗಲಿ; ಅವರು ನನ್ನ ಬಗ್ಗೆ ಸುಳ್ಳು ಹೇಳಿದ್ದಾರೆ. ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುವೆನು. |
79
|
ನಿನ್ನ ಭಕ್ತರು ನನ್ನ ಬಳಿಗೆ ಹಿಂತಿರುಗಿಬರಲಿ. ನಿನ್ನ ಒಡಂಬಡಿಕೆಯನ್ನು ಅವರು ಕಲಿತುಕೊಳ್ಳಲಿ. |
80
|
ನಾನು ನಿನ್ನ ಕಟ್ಟಳೆಗಳಿಗೆ ಪೂರ್ಣವಾಗಿ ವಿಧೇಯನಾಗಿರುವಂತೆ ಮಾಡು. ಆಗ ನನಗೆ ಅವಮಾನವಾಗುವುದಿಲ್ಲ. |
81
|
ನಿನ್ನ ರಕ್ಷಣೆಗಾಗಿ ಕಾಯುತ್ತಾ ಸಾಯುವಂತಾಗಿದ್ದೇನೆ. ನಿನ್ನ ವಾಕ್ಯಗಳಲ್ಲಿಯೇ ಭರವಸವಿಟ್ಟಿದ್ದೇನೆ. |
82
|
ನಿನ್ನ ವಾಗ್ದಾನಗಳಿಗಾಗಿ ಎದುರುನೋಡುತ್ತಾ ನನ್ನ ಕಣ್ಣುಗಳು ಆಯಾಸಗೊಳ್ಳುತ್ತಿವೆ. ನೀನು ಯಾವಾಗ ನನ್ನನ್ನು ಸಂತೈಸುವೆ? |
83
|
ಬಿಸಾಕಲ್ಪಟ್ಟ ದ್ರಾಕ್ಷಾರಸದ ಬುದ್ದಲಿಯಂತಿದ್ದೇನೆ, ಆದರೂ ನಾನು ನಿನ್ನ ಕಟ್ಟಳೆಗಳನ್ನು ಮರೆಯುವುದಿಲ್ಲ. |
84
|
ನಾನು ಇನ್ನೆಷ್ಟುಕಾಲ ಬದುಕಲಿ? ನನ್ನನ್ನು ಹಿಂಸಿಸುವವರನ್ನು ಯಾವಾಗ ದಂಡಿಸುವಿ? |
85
|
ನಿನ್ನ ಕಟ್ಟಳೆಗಳಿಗೆ ವಿರೋಧವಾಗಿ ಗರ್ವಿಷ್ಠರು ನನಗೆ ಗುಂಡಿಗಳನ್ನು ಅಗೆದಿದ್ದಾರೆ. |
86
|
ನಿನ್ನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ. ಅವರಾದರೋ ನನ್ನನ್ನು ನಿಷ್ಕಾರಣವಾಗಿ ಹಿಂಸಿಸುತ್ತಾರೆ; ನನಗೆ ಸಹಾಯಮಾಡು! |
87
|
ಅವರು ನನ್ನನ್ನು ನಾಶಮಾಡಿಯೇ ಬಿಟ್ಟಿದ್ದರು. ನಾನಾದರೋ ನಿನ್ನ ನಿಯಮಗಳನ್ನು ಮರೆತುಬಿಡಲೇ ಇಲ್ಲ. |
88
|
ನಿನ್ನ ಶಾಶ್ವತ ಪ್ರೀತಿಯನ್ನು ತೋರಿ ನನ್ನನ್ನು ಉಜ್ಜೀವಿಸಮಾಡು. ಆಗ, ನಾನು ನಿನ್ನ ಕಟ್ಟಳೆಗಳಿಗೆ ವಿಧೇಯನಾಗುವೆನು. |
89
|
ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ. |
90
|
ನಿನ್ನ ನಂಬಿಗಸ್ತಿಕೆಯು ತಲತಲಾಂತರಕ್ಕೂ ಇರುವುದು. ನೀನು ಭೂಮಿಯನ್ನು ಸೃಷ್ಟಿಸಿದೆ; ಅದು ಇಂದಿಗೂ ಸ್ಥಿರವಾಗಿ ನಿಂತಿದೆ. |
91
|
ನಿನ್ನ ಆಜ್ಞೆಗಳಿಗನುಸಾರವಾಗಿ ಅದು ಸ್ಥಿರವಾಗಿಯೇ ಇದೆ. ಅವುಗಳೆಲ್ಲಾ ಸೇವಕರಂತೆ ನಿನ್ನ ಆಜ್ಞೆಗಳಿಗೆ ವಿಧೇಯವಾಗಿವೆ. |
92
|
ನಿನ್ನ ಉಪದೇಶಗಳು ನನಗೆ ಆನಂದಕರವಾಗಿವೆ; ಇಲ್ಲವಾಗಿದ್ದರೆ ಸಂಕಟವು ನನ್ನನ್ನು ನಾಶಮಾಡಿಬಿಡುತ್ತಿತ್ತು. |
93
|
ನಾನು ನಿನ್ನ ಆಜ್ಞೆಗಳನ್ನು ಮರೆಯುವುದೇ ಇಲ್ಲ. ಯಾಕೆಂದರೆ ನಾನು ಬದುಕಿರುವುದು ಅವುಗಳಿಂದಲೇ. |
94
|
ನಾನು ನಿನ್ನವನು, ನನ್ನನ್ನು ರಕ್ಷಿಸು! ನಿನ್ನ ಆಜ್ಞೆಗಳಿಗೆ ಆಸಕ್ತಿಯಿಂದ ವಿಧೇಯನಾಗಿದ್ದೇನೆ. |
95
|
ದುಷ್ಟರು ನನ್ನನ್ನು ನಾಶಮಾಡಲು ಪ್ರಯತ್ನಿಸಿದರು, ಆದರೆ ನಿನ್ನ ಒಡಂಬಡಿಕೆಯು ನನ್ನನ್ನು ಜ್ಞಾನಿಯನ್ನಾಗಿ ಮಾಡಿತು. |
96
|
ನಿನ್ನ ಧರ್ಮಶಾಸ್ತ್ರದ ಹೊರತು ಬೇರೆಲ್ಲವುಗಳಿಗೂ ಮೇರೆಯಿದೆ. |
97
|
ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ; ದಿನವೆಲ್ಲಾ ಅವುಗಳನ್ನೇ ಧ್ಯಾನಿಸುವೆನು. |
98
|
ನಿನ್ನ ಆಜ್ಞೆಗಳು ನನ್ನನ್ನು ನನ್ನ ಶತ್ರುಗಳಿಗಿಂತಲೂ ಹೆಚ್ಚು ಜ್ಞಾನಿಯನ್ನಾಗಿ ಮಾಡುತ್ತವೆ. ಅವು ಯಾವಾಗಲೂ ನನ್ನೊಂದಿಗಿವೆ. |
99
|
ನಿನ್ನ ಒಡಂಬಡಿಕೆಯನ್ನು ನಾನು ಧ್ಯಾನಿಸುತ್ತಿರುವುದರಿಂದ ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ. |
100
|
ನಾನು ನಿನ್ನ ಆಜ್ಞೆಗಳನ್ನು ಅನುಸರಿಸುವುದರಿಂದ ಹಿರಿಯರಿಗಿಂತ ವಿವೇಕಿಯಾಗಿದ್ದೇನೆ. |
101
|
ನನ್ನ ಪಾದಗಳು ಕೆಟ್ಟದಾರಿಗೆ ಹೋಗದಂತೆ ನನ್ನನ್ನು ಕಾಪಾಡು, ಆಗ, ನಾನು ನಿನ್ನ ವಾಕ್ಯವನ್ನೇ ಅನುಸರಿಸುವೆನು. |
102
|
ನೀನೇ ನನ್ನ ಉಪಾಧ್ಯಾಯ. ಆದ್ದರಿಂದ ನಿನ್ನ ಕಟ್ಟಳೆಗಳಿಗೆ ವಿಧೇಯನಾಗಿಯೇ ಇರುವೆನು. |
103
|
ನಿನ್ನ ನುಡಿಗಳು ನನ್ನ ಬಾಯಲ್ಲಿ ಜೇನಿಗಿಂತಲೂ ಸಿಹಿಯಾಗಿವೆ. |
104
|
ನಿನ್ನ ಉಪದೇಶಗಳು ನನ್ನನ್ನು ಜ್ಞಾನಿಯನ್ನಾಗಿ ಮಾಡುತ್ತವೆ, ಆದ್ದರಿಂದ ನಾನು ದುರುಪದೇಶಗಳನ್ನು ದ್ವೇಷಿಸುವೆನು. |
105
|
ನಿನ್ನ ವಾಕ್ಯವು ನನ್ನ ಪಾಲಿಗೆ ದೀಪವೂ ದಾರಿಗೆ ಬೆಳಕೂ ಆಗಿದೆ. |
106
|
ನಿನ್ನ ವಿಧಿನಿಯಮಗಳು ಒಳ್ಳೆಯವೇ. ಅವುಗಳಿಗೆ ವಿಧೇಯನಾಗಿರುವುದಾಗಿ ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು. |
107
|
ಯೆಹೋವನೇ, ನಾನು ಬಹುಕಾಲ ಸಂಕಟಪಟ್ಟಿದ್ದೇನೆ; ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. |
108
|
ಯೆಹೋವನೇ, ನನ್ನ ಸ್ತೋತ್ರವನ್ನು ಸ್ವೀಕರಿಸು. ನಿನ್ನ ವಿಧಿನಿಯಮಗಳನ್ನು ನನಗೆ ಉಪದೇಶಿಸು. |
109
|
ನನ್ನ ಪ್ರಾಣವು ಯಾವಾಗಲೂ ಅಪಾಯದಲ್ಲಿದೆ. ಆದರೂ ನಾನು ನಿನ್ನ ಉಪದೇಶಗಳನ್ನು ಮರೆತುಬಿಟ್ಟಿಲ್ಲ. |
110
|
ದುಷ್ಟರು ನನಗೆ ಬಲೆಯೊಡ್ಡಿದ್ದಾರೆ. ನಾನಾದರೋ ನಿನ್ನ ವಿಧಿನಿಯಮಗಳಿಗೆ ಅವಿಧೇಯನಾಗಲಿಲ್ಲ. |
111
|
ನಿನ್ನ ಕಟ್ಟಳೆಗಳನ್ನು ಎಂದೆಂದಿಗೂ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ. ಅವು ನನ್ನ ಹೃದಯಕ್ಕೆ ಆನಂದಕರವಾಗಿವೆ. |
112
|
ನಿನ್ನ ಕಟ್ಟಳೆಗಳಿಗೆಲ್ಲಾ ಯಾವಾಗಲೂ ವಿಧೇಯನಾಗಿರಲು ಮನಸ್ಸುಮಾಡಿದ್ದೇನೆ. |
113
|
ನಿನಗೆ ಪೂರ್ಣವಾಗಿ ನಂಬಿಗಸ್ತರಾಗಿಲ್ಲದವರನ್ನು ದ್ವೇಷಿಸುವೆನು. ನಾನಾದರೋ ನಿನ್ನ ಉಪದೇಶಗಳನ್ನು ಪ್ರೀತಿಸುವೆನು. |
114
|
ನನ್ನ ಆಶ್ರಯವೂ ಗುರಾಣಿಯೂ ನೀನೇ. ಯೆಹೋವನೇ, ನಿನ್ನ ವಾಕ್ಯದಲ್ಲಿ ಭರವಸವಿಟ್ಟಿರುವೆ. |
115
|
ಕೆಡುಕರನ್ನು ನನ್ನ ಬಳಿಗೆ ಬರಗೊಡಿಸಬೇಡ. ಆಗ ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು. |
116
|
ನಿನ್ನ ವಾಗ್ದಾನಕ್ಕನುಸಾರವಾಗಿ ನನಗೆ ಸಹಾಯಮಾಡು, ಆಗ ನಾನು ಬದುಕಿಕೊಳ್ಳುವೆ. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ನನ್ನನ್ನು ನಿರಾಶೆಗೊಳಿಸಬೇಡ. |
117
|
ನನಗೆ ಸಹಾಯಮಾಡು, ಆಗ ನಾನು ರಕ್ಷಿಸಲ್ಪಡುವೆನು. ನಾನು ನಿನ್ನ ಕಟ್ಟಳೆಗಳನ್ನು ಯಾವಾಗಲೂ ಕಲಿಯುತ್ತಿರುವೆನು. |
118
|
ನಿನ್ನ ಕಟ್ಟಳೆಗಳನ್ನು ಅನುಸರಿಸದವರನ್ನು ನೀನು ತಳ್ಳಿಬಿಡುವೆ. ಯಾಕೆಂದರೆ, ಅವರು ನಿನಗೆ ದ್ರೋಹ ಮಾಡಿದರು. |
119
|
ಭೂಮಿಯ ಮೇಲಿರುವ ದುಷ್ಟರನ್ನು ನೀನು ಕಸದಂತೆ ಕಾಣುವೆ. ಆದ್ದರಿಂದ ನಾನು ನಿನ್ನ ಒಡಂಬಡಿಕೆಯನ್ನು ಸದಾಕಾಲ ಪ್ರೀತಿಸುವೆನು. |
120
|
ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. ನಾನು ನಿನ್ನ ತೀರ್ಪುಗಳಿಗೆ ಅಂಜಿಕೊಂಡಿದ್ದೇನೆ. |
121
|
ನ್ಯಾಯನೀತಿಗಳುಳ್ಳ ಕಾರ್ಯಗಳನ್ನೇ ನಾನು ಮಾಡಿರುವೆ, ಕೆಡುಕರಿಗೆ ನನ್ನನ್ನು ಒಪ್ಪಿಸಿಕೊಡಬೇಡ. |
122
|
ನಿನ್ನ ಸೇವಕನಾದ ನನಗೆ ಸಹಾಯಮಾಡುವುದಾಗಿ ವಾಗ್ದಾನಮಾಡು. ನನಗೆ ಕೇಡುಮಾಡಲು ಆ ಗರ್ವಿಷ್ಠರಿಗೆ ಅವಕಾಶ ಕೊಡಬೇಡ. |
123
|
ನಿನ್ನ ರಕ್ಷಣೆಗಾಗಿಯೂ ನಿನ್ನ ಒಳ್ಳೆಯ ಮಾತಿಗಾಗಿಯೂ ಎದುರುನೋಡುತ್ತಾ ನನ್ನ ಕಣ್ಣುಗಳು ಆಯಾಸಗೊಂಡಿವೆ. |
124
|
ನಿನ್ನ ಸೇವಕನಾದ ನನಗೆ ನಿನ್ನ ಶಾಶ್ವತ ಪ್ರೀತಿಯನ್ನು ತೋರಿಸು. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. |
125
|
ನಾನು ನಿನ್ನ ಸೇವಕ, ನಿನ್ನ ಒಡಂಬಡಿಕೆಯನ್ನು ಗ್ರಹಿಸಿಕೊಳ್ಳಲು ನನಗೆ ಬೇಕಾದ ವಿವೇಕವನ್ನು ದಯಪಾಲಿಸು. |
126
|
ಯೆಹೋವನೇ, ನಿನ್ನ ಕಾರ್ಯಾಚರಣೆಗೆ ಇದು ತಕ್ಕ ಸಮಯವಾಗಿದೆ. ಜನರು ನಿನ್ನ ಧರ್ಮಶಾಸ್ತ್ರವನ್ನು ಮೀರಿದ್ದಾರೆ. |
127
|
ನಾನು ನಿನ್ನ ಆಜ್ಞೆಗಳನ್ನು ಬಂಗಾರಕ್ಕಿಂತಲೂ ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಸುವೆನು. |
128
|
ನಾನು ನಿನ್ನ ಆಜ್ಞೆಗಳಿಗೆಲ್ಲಾ ಎಚ್ಚರಿಕೆಯಿಂದ ವಿಧೇಯನಾಗುವೆನು. ನಾನು ಸುಳ್ಳು ಉಪದೇಶಗಳನ್ನು ದ್ವೇಷಿಸುವೆನು. |
129
|
ನಿನ್ನ ಕಟ್ಟಳೆಗಳು ಆಶ್ಚರ್ಯಕರವಾಗಿವೆ. ಪೂರ್ಣಹೃದಯದಿಂದ ಅವುಗಳನ್ನು ಅನುಸರಿಸುವೆನು. |
130
|
ಜನರು ನಿನ್ನ ವಾಕ್ಯವನ್ನು ಅರ್ಥಮಾಡಿಕೊಂಡಾಗ ಅದು ಅವರಿಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿರುವುದು. ನಿನ್ನ ವಾಕ್ಯವು ಸಾಮಾನ್ಯರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ. |
131
|
ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ನಿಜವಾಗಿಯೂ ಇಷ್ಟ. ನಾನು ಏದುಸಿರುಬಿಡುತ್ತಾ ಲವಲವಿಕೆಯಿಂದ ನಿನ್ನ ಆಜ್ಞೆಗಳಿಗಾಗಿ ಕಾಯುತ್ತಿದ್ದೇನೆ. |
132
|
ನನ್ನನ್ನು ನೋಡಿ ಕರುಣಿಸು. ನಿನ್ನ ಹೆಸರನ್ನು ಪ್ರೀತಿಸುವವರಿಗೆ ಯೋಗ್ಯವಾದುವುಗಳನ್ನು ಮಾಡು. |
133
|
ನಿನ್ನ ವಾಗ್ದಾನಕ್ಕನುಸಾರವಾಗಿ ನನಗೆ ಮಾರ್ಗದರ್ಶನ ನೀಡು. ಯಾವ ಕೇಡೂ ನನಗೆ ಸಂಭವಿಸದಿರಲಿ. |
134
|
ಕೆಡುಕರಿಂದ ನನ್ನನ್ನು ರಕ್ಷಿಸು. ಆಗ ನಾನು ನಿನ್ನ ನಿಯಮಗಳಿಗೆ ವಿಧೇಯನಾಗುವೆನು. |
135
|
ನಿನ್ನ ಸೇವಕನ ಮೇಲೆ ಕರುಣೆಯಿರಲಿ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. |
136
|
ಜನರು ನಿನ್ನ ಉಪದೇಶಗಳಿಗೆ ವಿಧೇಯರಾಗದಿರುವುದರಿಂದ ನನ್ನ ಕಣ್ಣೀರು ಗೋಳಾಟದಿಂದ ನದಿಯಾಗಿ ಹರಿಯುತ್ತಿದೆ. |
137
|
ಯೆಹೋವನೇ, ನೀನು ನೀತಿಸ್ವರೂಪನಾಗಿರುವೆ. ನಿನ್ನ ತೀರ್ಪುಗಳು ನ್ಯಾಯವಾಗಿವೆ. |
138
|
ನೀನು ನೀತಿಯ ಕಟ್ಟಳೆಗಳನ್ನೇ ಕೊಟ್ಟಿರುವೆ. ಅವು ನಂಬಿಕೆಗೆ ಯೋಗ್ಯವಾಗಿವೆ. |
139
|
ನನ್ನ ಅಭಿಮಾನವು ನನ್ನನ್ನು ದಹಿಸುತ್ತಿದೆ. ಯಾಕೆಂದರೆ ನನ್ನ ವೈರಿಗಳು ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿದ್ದರಿಂದ ನನಗೆ ಬೇಸರವಾಗಿದೆ. |
140
|
ನಿನ್ನ ವಾಗ್ದಾನಗಳು ಪರೀಕ್ಷಿಸಲ್ಪಟ್ಟಿವೆ. ಅವು ನನಗೆ ಪ್ರಿಯವಾಗಿವೆ. |
141
|
ನಾನು ಅಲ್ಪನೂ ತಿರಸ್ಕೃತನೂ ಆಗಿದ್ದೇನೆ. ಆದರೂ ನಾನು ನಿನ್ನ ನಿಯಮಗಳನ್ನು ಮರೆಯುವುದಿಲ್ಲ. |
142
|
ನಿನ್ನ ನೀತಿಯು ಶಾಶ್ವತವಾದದ್ದು. ನಿನ್ನ ಉಪದೇಶಗಳು ನಂಬಿಕೆಗೆ ಯೋಗ್ಯವಾಗಿವೆ. |
143
|
ಕಷ್ಟಸಂಕಟಗಳು ನನಗೆ ಬಂದಿದ್ದವು. ನಿನ್ನ ಆಜ್ಞೆಗಳು ನನಗೆ ಆನಂದಕರವಾಗಿವೆ. |
144
|
ನಿನ್ನ ಕಟ್ಟಳೆಗಳು ಸದಾಕಾಲ ನೀತಿಯ ಕಟ್ಟಳೆಗಳಾಗಿವೆ. ಅವುಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು, ಆಗ ಬದುಕಿಕೊಳ್ಳುವೆನು. |
145
|
ಯೆಹೋವನೇ, ಪೂರ್ಣಹೃದಯದಿಂದ ನಿನಗೆ ಮೊರೆಯಿಟ್ಟಿದ್ದೇನೆ; ಸದುತ್ತರವನ್ನು ದಯಪಾಲಿಸು. ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು. |
146
|
ನಾನು ನಿನಗೇ ಮೊರೆಯಿಟ್ಟಿದ್ದೇನೆ. ನನ್ನನ್ನು ರಕ್ಷಿಸು! ನಿನ್ನ ಕಟ್ಟಳೆಗಳಿಗೆ ವಿಧೇಯನಾಗುತ್ತೇನೆ. |
147
|
ಸೂರ್ಯೋದಯದಲ್ಲಿ ಎದ್ದು ನಿನಗೆ ಮೊರೆಯಿಟ್ಟೆನು. ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನೆ. |
148
|
ನಿನ್ನ ವಾಕ್ಯವನ್ನು ಧ್ಯಾನಿಸುವುದಕ್ಕಾಗಿ ರಾತ್ರಿಯಲ್ಲಿ ಬಹು ಹೊತ್ತಿನವರೆಗೆ ಎಚ್ಚರವಾಗಿದ್ದೆನು. |
149
|
ಯೆಹೋವನೇ, ನಿನ್ನ ಪೂರ್ಣ ಪ್ರೀತಿಯಿಂದ ನನಗೆ ಕಿವಿಗೊಡು. ನಿನ್ನ ನಿಯಮಗಳಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. |
150
|
ಜನರು ನನಗೆ ವಿರೋಧವಾಗಿ ಸಂಚುಗಳನ್ನು ಮಾಡುತ್ತಿದ್ದಾರೆ. ಅವರು ನಿನ್ನ ಉಪದೇಶಗಳನ್ನು ಅನುಸರಿಸುವುದಿಲ್ಲ. |
151
|
ಯೆಹೋವನೇ, ನೀನು ನನಗೆ ಸಮೀಪವಾಗಿರುವೆ. ನಿನ್ನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ. |
152
|
ನಿನ್ನ ಉಪದೇಶಗಳು ಶಾಶ್ವತವಾಗಿವೆ. ಅದನ್ನು ನಾನು ಬಹುಕಾಲದ ಹಿಂದೆಯೇ ನಿನ್ನ ಒಡಂಬಡಿಕೆಯ ಮೂಲಕ ಕಲಿತುಕೊಂಡೆ. |
153
|
ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸು. ನಾನು ನಿನ್ನ ಉಪದೇಶಗಳನ್ನು ಮರೆತಿಲ್ಲ. |
154
|
ವ್ಯಾಜ್ಯದಲ್ಲಿ ನನ್ನ ಪರವಾಗಿ ಹೋರಾಡಿ ನನ್ನನ್ನು ರಕ್ಷಿಸು. ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. |
155
|
ದುಷ್ಟರು ನಿನ್ನ ಕಟ್ಟಳೆಗಳನ್ನು ಅನುಸರಿಸದ ಕಾರಣ ಅವರಿಗೆ ಜಯವಾಗುವುದಿಲ್ಲ. |
156
|
ಯೆಹೋವನೇ, ನೀನು ಎಷ್ಟೋ ಕರುಣೆಯುಳ್ಳವನು. ನಿನ್ನ ಚಿತ್ತಾನುಸಾರವಾಗಿ ನನ್ನನ್ನು ಉಜ್ಜೀವನಗೊಳಿಸು. |
157
|
ಅನೇಕ ವೈರಿಗಳು ನನಗೆ ಕೇಡುಮಾಡಬೇಕೆಂದಿದ್ದಾರೆ. ನಾನಾದರೋ ನಿನ್ನ ಕಟ್ಟಳೆಗಳನ್ನು ಅನುಸರಿಸುತ್ತಲೇ ಇದ್ದೇನೆ. |
158
|
ನಿನ್ನ ವಾಕ್ಯಕ್ಕೆ ವಿಧೇಯರಾಗದ ಆ ದ್ರೋಹಿಗಳನ್ನು ನೋಡಿದರೆ ನನಗೆ ಅಸಹ್ಯವಾಗುತ್ತದೆ. |
159
|
ಯೆಹೋವನೇ, ನಿನ್ನ ನಿಯಮಗಳಿಗೆ ಆಸಕ್ತಿಯಿಂದ ವಿಧೇಯನಾಗಿದ್ದೇನೆ. ನಿನ್ನ ಶಾಶ್ವತ ಪ್ರೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. |
160
|
ನಿನ್ನ ವಾಕ್ಯಗಳೆಲ್ಲಾ ಸತ್ಯವಾಗಿವೆ. ನಿನ್ನ ನೀತಿಯ ಕಟ್ಟಳೆಗಳು ಶಾಶ್ವತವಾಗಿವೆ. |
161
|
ಅಧಿಪತಿಗಳು ನಿಷ್ಕಾರಣವಾಗಿ ನನ್ನ ಮೇಲೆ ಆಕ್ರಮಣ ಮಾಡಿದರು. ನಾನಾದರೋ ನಿನ್ನ ಧರ್ಮಶಾಸ್ತ್ರವೊಂದಕ್ಕೇ ಭಯಪಡುವೆನು, ಅದೊಂದನ್ನೇ ಗೌರವಿಸುವೆನು. |
162
|
ಮಹಾಭಂಡಾರವನ್ನು ಕಂಡುಕೊಂಡವನಂತೆ ನಾನು ನಿನ್ನ ವಾಕ್ಯದಲ್ಲಿ ಸಂತೋಷಿಸುವೆನು. |
163
|
ನಾನು ಸುಳ್ಳುಗಳನ್ನು ದ್ವೇಷಿಸುವೆನು! ಅವು ನನಗೆ ಅಸಹ್ಯವಾಗಿವೆ. ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ. |
164
|
ನಿನ್ನ ನೀತಿಯ ವಿಧಿನಿಯಮಗಳಿಗಾಗಿ ನಾನು ದಿನಕ್ಕೆ ಏಳು ಸಲ ನಿನ್ನನ್ನು ಕೊಂಡಾಡುವೆನು. |
165
|
ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುವುದು. ಅವರನ್ನು ಯಾವುದೂ ಬೀಳಿಸಲಾರದು. |
166
|
ಯೆಹೋವನೇ, ನಿನ್ನ ರಕ್ಷಣೆಗಾಗಿ ಕಾಯ್ದುಕೊಂಡಿದ್ದೇನೆ. ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗಿದ್ದೇನೆ. |
167
|
ನಾನು ನಿನ್ನ ಕಟ್ಟಳೆಗಳನ್ನು ಅನುಸರಿಸಿದೆನು. ಅವು ನನಗೆ ಬಹು ಪ್ರಿಯವಾಗಿವೆ. |
168
|
ನಾನು ನಿನ್ನ ಒಡಂಬಡಿಕೆಗೂ ನಿನ್ನ ನಿಯಮಗಳಿಗೂ ವಿಧೇಯನಾಗಿದ್ದೇನೆ. ನನ್ನ ನಡತೆಯೆಲ್ಲಾ ನಿನಗೆ ಗೊತ್ತಿದೆ. |
169
|
ಯೆಹೋವನೇ, ನನ್ನ ಕೂಗಿಗೆ ಕಿವಿಗೊಡು. ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಜ್ಞಾನಿಯನ್ನಾಗಿ ಮಾಡು. |
170
|
ನನ್ನ ಪ್ರಾರ್ಥನೆಗೆ ಕಿವಿಗೊಡು. ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ರಕ್ಷಿಸು. |
171
|
ನೀನು ನಿನ್ನ ಕಟ್ಟಳೆಗಳನ್ನು ನನಗೆ ಕಲಿಸಿಕೊಟ್ಟದ್ದರಿಂದ ಸ್ತುತಿಗೀತೆಗಳು ನನ್ನಿಂದ ಹೊರಡುತ್ತವೆ. |
172
|
ನನ್ನ ನಾಲಿಗೆಯು ನಿನ್ನ ವಾಕ್ಯವನ್ನು ಗಾಯನ ಮಾಡಲಿ. ನಿನ್ನ ಆಜ್ಞೆಗಳೆಲ್ಲಾ ನೀತಿಯ ಆಜ್ಞೆಗಳಾಗಿವೆ. |
173
|
ನಾನು ನಿನ್ನ ನಿಯಮಗಳನ್ನು ಅನುಸರಿಸಲು ನಿರ್ಧರಿಸಿರುವುದರಿಂದ ಕೈಚಾಚಿ ಸಹಾಯಮಾಡು. |
174
|
ನಿನ್ನಲ್ಲಿ ರಕ್ಷಣೆಗಾಗಿ ಪ್ರಾರ್ಥಿಸುವೆ. ನಿನ್ನ ಉಪದೇಶಗಳು ನನ್ನನ್ನು ಸಂತೋಷಗೊಳಿಸುತ್ತವೆ. |
175
|
ನಾನು ಜೀವದಿಂದಿದ್ದು ನಿನ್ನನ್ನು ಕೊಂಡಾಡುವಂತೆ ಮಾಡು. ನಿನ್ನ ನಿಯಮಗಳು ನನಗೆ ಸಹಾಯಮಾಡಲಿ. |
176
|
ನಾನು ಕಳೆದುಹೋದ ಕುರಿಯಂತೆ ಅಲೆದಾಡುತ್ತಿದ್ದೇನೆ. ನನಗೋಸ್ಕರ ಹುಡುಕುತ್ತಾ ಬಾ. ನಿನ್ನ ಸೇವಕನಾದ ನಾನು ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿಲ್ಲ. |