1
|
ಯೆಹೋವನೇ, ನನ್ನನ್ನು ರಕ್ಷಿಸು! ಒಳ್ಳೆಯವರೆಲ್ಲಾ ಕೊನೆಗೊಂಡರು. ಭೂನಿವಾಸಿಗಳಲ್ಲಿ ನಿಜವಾದ ವಿಶ್ವಾಸಿಗಳು ಉಳಿದೇ ಇಲ್ಲ. |
2
|
ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು. |
3
|
ಸುಳ್ಳಾಡುವ ಆ ತುಟಿಗಳನ್ನೂ ಕಟ್ಟುಕಥೆಗಳನ್ನು ಹೇಳುವ ಆ ನಾಲಿಗೆಗಳನ್ನೂ ಯೆಹೋವನು ಕತ್ತರಿಸಿಹಾಕಲಿ. |
4
|
“ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ. |
5
|
ಆದರೆ ಯೆಹೋವನು ಹೇಳುವುದೇನಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.” |
6
|
ಯೆಹೋವನ ಮಾತುಗಳು ಬೆಂಕಿಯಲ್ಲಿ ಏಳು ಸಲ ಶುದ್ಧೀಕರಿಸಿದ ಬೆಳ್ಳಿಯಂತೆ ಸತ್ಯವಾಗಿವೆ. |
7
|
ಯೆಹೋವನೇ, ಅಸಹಾಯಕರನ್ನು ಪರಿಪಾಲಿಸು. ಅವರನ್ನು ಶಾಶ್ವತವಾಗಿ ಸಂರಕ್ಷಿಸು. |
8
|
ಆ ದುಷ್ಟರು ಪ್ರಮುಖರಂತೆ ವರ್ತಿಸಿದರೂ ಅವರು ಕೇವಲ ನಕಲಿ ಆಭರಣಗಳಂತಿದ್ದಾರೆ. |
Psalms 12:2 Kannada Language Bible Words basic statistical display
COMING SOON ...