1
|
ನಾನು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿದನು. |
2
|
ಯೆಹೋವನೇ, ಸುಳ್ಳಾಡುವರಿಂದಲೂ ವಂಚಕರಿಂದಲೂ ನನ್ನನ್ನು ರಕ್ಷಿಸು. |
3
|
ಸುಳ್ಳುಗಾರರೇ, ನಿಮಗೆ ದೇವರಿಂದ ಬರುವ ದಂಡೆನೆಯನ್ನು ಬಲ್ಲಿರಾ? ನಿಮಗೆ ಯಾವ ಶಿಕ್ಷೆಯನ್ನು ಒದಗಿಸಬೇಕು? |
4
|
ಯುದ್ಧವೀರನ ತೀಕ್ಷ್ಣವಾದ ಬಾಣದಿಂದಲೂ ಉರಿಯುವ ಕೆಂಡಗಳಿಂದಲೂ ದೇವರು ನಿಮ್ಮನ್ನು ದೆಂಡಿಸುವನು. |
5
|
ಸುಳ್ಳುಗಾರರಾದ ನಿಮ್ಮ ಸಮೀಪದಲ್ಲಿ ವಾಸಿಸುವುದು ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ ವಾಸಿಸುವಂತಿರುವುದು. |
6
|
ಶಾಂತಿದ್ವೇಷಕರೊಂದಿಗೆ ನಾನು ಬಹುಕಾಲ ವಾಸಿಸಿದ್ದೇನೆ. |
7
|
ಶಾಂತಿ ನೆಲೆಸಿರಲಿ ಎಂದು ನಾನು ಹೇಳಿದರೂ ಅವರು ಯುದ್ಧವನ್ನೇ ಇಷ್ಟಪಡುತ್ತಾರೆ. |
Psalms 120:1 Kannada Language Bible Words basic statistical display
COMING SOON ...