1
|
ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ. ನನಗೆ ಸಹಾಯವು ಎಲ್ಲಿಂದ ಬರುವುದು? |
2
|
ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಯೆಹೋವನಿಂದಲೇ ನನಗೆ ಸಹಾಯವು ಬರುವುದು. |
3
|
ಆತನು ನಿನ್ನನ್ನು ಬೀಳಗೊಡಿಸುವುದಿಲ್ಲ; ನಿನ್ನ ಸಂರಕ್ಷಕನು ನಿದ್ರೆ ಹೋಗುವುದಿಲ್ಲ. |
4
|
ಇಸ್ರೇಲಿನ ಸಂರಕ್ಷಕನು ತೂಕಡಿಸುವುದಿಲ್ಲ, ನಿದ್ರಿಸುವುದೂ ಇಲ್ಲ! |
5
|
ನಿನ್ನನ್ನು ಕಾಯುವವನು ಯೆಹೋವನೇ. ನಿನ್ನನ್ನು ರಕ್ಷಿಸಲು ಆತನು ನಿನ್ನ ಬಲಗಡೆಯಲ್ಲಿ ನಿಂತಿದ್ದಾನೆ. |
6
|
ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವುದಿಲ್ಲ. |
7
|
ಯೆಹೋವನು ನಿನ್ನನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವನು; ನಿನ್ನ ಪ್ರಾಣವನ್ನು ಕಾಯುವನು. |
8
|
ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. ಆತನು ನಿನ್ನನ್ನು ಸದಾಕಾಲ ಕಾಪಾಡುವನು. |
Psalms 121:1 Kannada Language Bible Words basic statistical display
COMING SOON ...