Bible Languages

Indian Language Bible Word Collections

Bible Versions

Books

Psalms Chapters

Psalms 121 Verses

Bible Versions

Books

Psalms Chapters

Psalms 121 Verses

1 ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ. ನನಗೆ ಸಹಾಯವು ಎಲ್ಲಿಂದ ಬರುವುದು?
2 ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಯೆಹೋವನಿಂದಲೇ ನನಗೆ ಸಹಾಯವು ಬರುವುದು.
3 ಆತನು ನಿನ್ನನ್ನು ಬೀಳಗೊಡಿಸುವುದಿಲ್ಲ; ನಿನ್ನ ಸಂರಕ್ಷಕನು ನಿದ್ರೆ ಹೋಗುವುದಿಲ್ಲ.
4 ಇಸ್ರೇಲಿನ ಸಂರಕ್ಷಕನು ತೂಕಡಿಸುವುದಿಲ್ಲ, ನಿದ್ರಿಸುವುದೂ ಇಲ್ಲ!
5 ನಿನ್ನನ್ನು ಕಾಯುವವನು ಯೆಹೋವನೇ. ನಿನ್ನನ್ನು ರಕ್ಷಿಸಲು ಆತನು ನಿನ್ನ ಬಲಗಡೆಯಲ್ಲಿ ನಿಂತಿದ್ದಾನೆ.
6 ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವುದಿಲ್ಲ.
7 ಯೆಹೋವನು ನಿನ್ನನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವನು; ನಿನ್ನ ಪ್ರಾಣವನ್ನು ಕಾಯುವನು.
8 ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. ಆತನು ನಿನ್ನನ್ನು ಸದಾಕಾಲ ಕಾಪಾಡುವನು.

Psalms 121:2 Kannada Language Bible Words basic statistical display

COMING SOON ...

×

Alert

×