1
|
ರಚನೆಗಾರ : ದಾವೀದ. “ಯೆಹೋವನ ಆಲಯಕ್ಕೆ ಹೋಗೋಣ” ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು. |
2
|
ನಾವು ಜೆರುಸಲೇಮಿನ ಬಾಗಿಲುಗಳ ಬಳಿಯಲ್ಲಿ ನಿಂತಿದ್ದೇವೆ. |
3
|
ಇದು ಹೊಸ ಜೆರುಸಲೇಮ್! ಈ ಪಟ್ಟಣವು ಏಕೀಕರಣಗೊಂಡ ನಗರದಂತೆ ಮತ್ತೆ ಕಟ್ಟಲ್ಪಟ್ಟಿದೆ. |
4
|
ಇಸ್ರೇಲಿನ ಕುಲಗಳವರು ಅಂದರೆ ಯೆಹೋವನ ಕುಲಗಳವರು ಯೆಹೋವನ ಹೆಸರನ್ನು ಕೊಂಡಾಡಲು ಅಲ್ಲಿಗೆ ಹೋಗುವರು. |
5
|
ದಾವೀದನ ಕುಟುಂಬದ ರಾಜರುಗಳು ಜನರಿಗೆ ನ್ಯಾಯತೀರ್ಪು ನೀಡಲು ತಮ್ಮ ಸಿಂಹಾಸನಗಳನ್ನು ಅಲ್ಲಿ ಸ್ಥಾಪಿಸಿದರು. |
6
|
ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ, “ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ. |
7
|
ನಿನ್ನ ಕೋಟೆಗಳೊಳಗೆ ಶಾಂತಿ ನೆಲಸಿರಲಿ. ನಿನ್ನ ಮಹಾ ಕಟ್ಟಡಗಳಲ್ಲಿ ಸುರಕ್ಷತೆಯಿರಲಿ.” |
8
|
ನನ್ನ ಸಹೋದರರ ಮತ್ತು ನೆರೆಯವರ ಒಳ್ಳೆಯದಕ್ಕಾಗಿ ಅಲ್ಲಿ ಶಾಂತಿ ನೆಲೆಸಿರಲೆಂದು ಪ್ರಾರ್ಥಿಸುವೆನು. |
9
|
ನಮ್ಮ ದೇವರಾದ ಯೆಹೋವನ ಆಲಯಕ್ಕೋಸ್ಕರ ಈ ಪಟ್ಟಣಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸುವೆನು. |
Psalms 122:4 Kannada Language Bible Words basic statistical display
COMING SOON ...