1
|
ರಚನೆಗಾರ : ಸೊಲೋಮೋನ. ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ. ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ. |
2
|
ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು. |
3
|
ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ. |
4
|
ಯೌವನಸ್ಥನ ಗಂಡುಮಕ್ಕಳು ಸೈನಿಕನ ಬತ್ತಳಿಕೆಯಲ್ಲಿರುವ ಬಾಣಗಳಂತಿದ್ದಾರೆ. |
5
|
ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು. |
Psalms 127:1 Kannada Language Bible Words basic statistical display
COMING SOON ...