1
|
ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನ ಚಿತ್ತಾನುಸಾರವಾಗಿ ಜೀವಿಸುವವರೆಲ್ಲರು ಧನ್ಯರಾಗಿದ್ದಾರೆ. |
2
|
ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು. |
3
|
ಮನೆಯಲ್ಲಿರುವ ನಿನ್ನ ಹೆಂಡತಿ ಫಲಭರಿತವಾದ ದ್ರಾಕ್ಷಾ ಬಳ್ಳಿಯಂತಿರುವಳು. ಊಟದ ಮೇಜಿನ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ನೀನು ನೆಟ್ಟ ಆಲಿವ್ ಮರಗಳಂತಿರುವರು. |
4
|
ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಹೀಗೆಯೇ ಆಶೀರ್ವದಿಸುವನು. |
5
|
ಯೆಹೋವನು ನಿನ್ನನ್ನು ಚೀಯೋನಿನಿಂದ ಆಶೀರ್ವದಿಸಲಿ. ನಿನ್ನ ಜೀವಮಾನವೆಲ್ಲಾ ನೀನು ಜೆರುಸಲೇಮಿನಲ್ಲಿ ಆಶೀರ್ವಾದಗಳನ್ನು ಅನುಭವಿಸುವಂತಾಗಲಿ. |
6
|
ನೀನು ಜೀವದಿಂದಿದ್ದು ನಿನ್ನ ಮೊಮ್ಮಕ್ಕಳನ್ನು ಕಾಣುವಂತಾಗಲಿ. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ. |
Psalms 128:3 Kannada Language Bible Words basic statistical display
COMING SOON ...