Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Books

Psalms Chapters

Psalms 128 Verses

1 ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನ ಚಿತ್ತಾನುಸಾರವಾಗಿ ಜೀವಿಸುವವರೆಲ್ಲರು ಧನ್ಯರಾಗಿದ್ದಾರೆ.
2 ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು.
3 ಮನೆಯಲ್ಲಿರುವ ನಿನ್ನ ಹೆಂಡತಿ ಫಲಭರಿತವಾದ ದ್ರಾಕ್ಷಾ ಬಳ್ಳಿಯಂತಿರುವಳು. ಊಟದ ಮೇಜಿನ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ನೀನು ನೆಟ್ಟ ಆಲಿವ್ ಮರಗಳಂತಿರುವರು.
4 ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಹೀಗೆಯೇ ಆಶೀರ್ವದಿಸುವನು.
5 ಯೆಹೋವನು ನಿನ್ನನ್ನು ಚೀಯೋನಿನಿಂದ ಆಶೀರ್ವದಿಸಲಿ. ನಿನ್ನ ಜೀವಮಾನವೆಲ್ಲಾ ನೀನು ಜೆರುಸಲೇಮಿನಲ್ಲಿ ಆಶೀರ್ವಾದಗಳನ್ನು ಅನುಭವಿಸುವಂತಾಗಲಿ.
6 ನೀನು ಜೀವದಿಂದಿದ್ದು ನಿನ್ನ ಮೊಮ್ಮಕ್ಕಳನ್ನು ಕಾಣುವಂತಾಗಲಿ. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.
×

Alert

×