1
|
ಯೆಹೋವನೇ, ಇನ್ನೆಷ್ಟುಕಾಲ ಮರೆತಿರುವೆ? ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ? ಇನ್ನೆಷ್ಟುಕಾಲ ನನಗೆ ಮರೆಯಾಗಿರುವೆ? |
2
|
ನಾನು ದುಃಖಕ್ರಾಂತನಾಗಿ ಇನ್ನೆಷ್ಟುಕಾಲ ಆಲೋಚಿಸುತ್ತಿರಬೇಕು? ನನ್ನ ವೈರಿಗಳು ಇನ್ನೆಷ್ಟುಕಾಲ ನನ್ನ ಮೇಲೆ ಜಯಗಳಿಸಬೇಕು? |
3
|
ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು. ಇಲ್ಲವಾದರೆ, ನಾನು ಸಾಯಲೇಬೇಕಾಗುವುದು! |
4
|
ಆಗ ವೈರಿಯು, “ನಾನು ಅವನನ್ನು ಸೋಲಿಸಿದೆ!” ಎಂದು ಹೇಳುತ್ತಾ ನನ್ನ ಬೀಳುವಿಕೆಯನ್ನು ಕಂಡು ಸಂತೋಷಪಡುವನು. |
5
|
ನಾನಂತೂ ನಿನ್ನ ಶಾಶ್ವತವಾದ ಪ್ರೀತಿಯಲ್ಲಿ ಭರವಸೆಯಿಟ್ಟಿದ್ದೇನೆ. ನಿನ್ನ ರಕ್ಷಣೆಯ ನಿಮಿತ್ತ ನನ್ನ ಹೃದಯವು ಹರ್ಷಿಸುವುದು. |
6
|
ಯೆಹೋವನು ಮಹೋಪಕಾರಗಳನ್ನು ಮಾಡಿರುವುದರಿಂದ ಆತನಿಗೆ ಹರ್ಷಗೀತೆಗಳನ್ನು ಹಾಡುವೆನು. |
Psalms 13:1 Kannada Language Bible Words basic statistical display
COMING SOON ...