English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Psalms Chapters

Psalms 13 Verses

1 ಯೆಹೋವನೇ, ಇನ್ನೆಷ್ಟುಕಾಲ ಮರೆತಿರುವೆ? ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ? ಇನ್ನೆಷ್ಟುಕಾಲ ನನಗೆ ಮರೆಯಾಗಿರುವೆ?
2 ನಾನು ದುಃಖಕ್ರಾಂತನಾಗಿ ಇನ್ನೆಷ್ಟುಕಾಲ ಆಲೋಚಿಸುತ್ತಿರಬೇಕು? ನನ್ನ ವೈರಿಗಳು ಇನ್ನೆಷ್ಟುಕಾಲ ನನ್ನ ಮೇಲೆ ಜಯಗಳಿಸಬೇಕು?
3 ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು. ಇಲ್ಲವಾದರೆ, ನಾನು ಸಾಯಲೇಬೇಕಾಗುವುದು!
4 ಆಗ ವೈರಿಯು, “ನಾನು ಅವನನ್ನು ಸೋಲಿಸಿದೆ!” ಎಂದು ಹೇಳುತ್ತಾ ನನ್ನ ಬೀಳುವಿಕೆಯನ್ನು ಕಂಡು ಸಂತೋಷಪಡುವನು.
5 ನಾನಂತೂ ನಿನ್ನ ಶಾಶ್ವತವಾದ ಪ್ರೀತಿಯಲ್ಲಿ ಭರವಸೆಯಿಟ್ಟಿದ್ದೇನೆ. ನಿನ್ನ ರಕ್ಷಣೆಯ ನಿಮಿತ್ತ ನನ್ನ ಹೃದಯವು ಹರ್ಷಿಸುವುದು.
6 ಯೆಹೋವನು ಮಹೋಪಕಾರಗಳನ್ನು ಮಾಡಿರುವುದರಿಂದ ಆತನಿಗೆ ಹರ್ಷಗೀತೆಗಳನ್ನು ಹಾಡುವೆನು.
×

Alert

×