1
|
ಯೆಹೋವನೇ, ಮಹಾ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದೇನೆ; ಸಹಾಯಕ್ಕಾಗಿ ನಿನ್ನನ್ನೇ ಕೂಗಿಕೊಳ್ಳುತ್ತಿದ್ದೇನೆ. |
2
|
ನನ್ನ ಒಡೆಯನೇ, ನನಗೆ ಕಿವಿಗೊಡು. ನನ್ನ ಮೊರೆಯನ್ನು ಆಲಿಸು. |
3
|
ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ ಒಬ್ಬನೂ ಜೀವಂತವಾಗಿ ಉಳಿಯಲಾರ. |
4
|
ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು. |
5
|
ನಾನು ಯೆಹೋವನ ಸಹಾಯಕ್ಕಾಗಿ ಕಾಯುತ್ತಿದ್ದೇನೆ. ನನ್ನ ಪ್ರಾಣವು ಆತನಿಗಾಗಿ ಕಾದುಕೊಂಡಿರುವುದು. ಆತನು ನುಡಿಯನ್ನು ನಂಬಿಕೊಂಡಿದ್ದೇನೆ. |
6
|
ನಾನು ನನ್ನ ಒಡೆಯನಿಗಾಗಿ ಮುಂಜಾನೆಗೋಸ್ಕರ ಎದುರು ನೋಡುತ್ತಿರುವ ಕಾವಲುಗಾರರಂತೆ ನಿರೀಕ್ಷಿಸುತ್ತಿದ್ದೇನೆ. |
7
|
ಇಸ್ರೇಲೇ, ಯೆಹೋವನಲ್ಲಿ ಭರವಿಸವಿಡು. ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು. |
8
|
ಆತನೇ ಇಸ್ರೇಲರ ಎಲ್ಲಾ ಪಾಪಗಳನ್ನು ಕ್ಷಮಿಸುವನು. |
Psalms 130:7 Kannada Language Bible Words basic statistical display
COMING SOON ...