1
|
ಯೆಹೋವನೇ, ದಾವೀದನು ಅನುಭವಿಸಿದ ಕಷ್ಟವನ್ನು ಜ್ಞಾಪಿಸಿಕೊ. |
2
|
ದಾವೀದನು ಯೆಹೋವನಿಗೆ ವಿಶೇಷವಾದ ವಾಗ್ದಾನವನ್ನು ಮಾಡಿದನು; ಇಸ್ರೇಲರ ಶೂರನಾದ ದೇವರಿಗೆ ಆತನು ವಿಶೇಷವಾದ ಹರಕೆಯೊಂದನ್ನು ಮಾಡಿಕೊಂಡನು. |
3
|
“ನಾನು ಯೆಹೋವನಿಗೋಸ್ಕರ ಒಂದು ಆಲಯವನ್ನು ಕಟ್ಟುವವರೆಗೆ ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ; ನನ್ನ ಹಾಸಿಗೆಯ ಮೇಲೆ ಮಲಗಿ ಕೊಳ್ಳುವುದಿಲ್ಲ; |
4
|
ನಾನು ನಿದ್ರಿಸುವುದೂ ಇಲ್ಲ; ನನ್ನ ಕಣ್ಣುಗಳಿಗೆ ವಿಶ್ರಾಂತಿಯನ್ನು ಕೊಡುವುದೂ ಇಲ್ಲ. |
5
|
ಇಸ್ರೇಲರ ಶೂರನಾದ ದೇವರಿಗೆ ಒಂದು ಆಲಯವನ್ನು ಕಟ್ಟುವೆನು” ಎಂದು ದಾವೀದನು ಹೇಳಿದನು. |
6
|
ನಾವು ಅದರ ಬಗ್ಗೆ ಎಫ್ರಾತದಲ್ಲಿ ಕೇಳಿದೆವು. ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಲ್ಲಿ ಕಂಡುಕೊಂಡೆವು. |
7
|
ಬನ್ನಿರಿ, ಆತನ ಪವಿತ್ರ ಮಂದಿರಕ್ಕೆ ಹೋಗೋಣ; ಆತನ ಪಾದಪೀಠದ ಮುಂದೆ ಆರಾಧಿಸೋಣ. |
8
|
ಯೆಹೋವನೇ, ನಿನ್ನ ವಿಶ್ರಾಂತಿಯ ಸ್ಥಳದಿಂದ ಎದ್ದೇಳು ನಿನ್ನ ಶಕ್ತಿಪೂರ್ಣವಾದ ಪೆಟ್ಟಿಗೆಯೊಂದಿಗೆ ಎದ್ದೇಳು. |
9
|
ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಧರಿಸಿಕೊಂಡಿದ್ದಾರೆ. ನಿನ್ನ ಭಕ್ತರು ಉಲ್ಲಾಸಿಸಲಿ. |
10
|
ನಿನ್ನ ಸೇವಕನಾದ ದಾವೀದನಿಗೆ ನೀನು ವಾಗ್ದಾನ ಮಾಡಿರುವೆ. ನೀನು ಅಭಿಷೇಕಿಸಿರುವ ರಾಜನನ್ನು ತಿರಸ್ಕರಿಸಬೇಡ. |
11
|
ಯೆಹೋವನು ದಾವೀದನಿಗೆ ಸ್ಥಿರವಾದ ವಾಗ್ದಾನವನ್ನು ಮಾಡಿದನು. ಆತನು ಅದನ್ನು ಬದಲಾಯಿಸುವುದೇ ಇಲ್ಲ. ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು. |
12
|
“ನಿನ್ನ ಮಕ್ಕಳು ನನ್ನ ಒಡಂಬಡಿಕೆಗೂ ನಾನು ಆಜ್ಞಾಪಿಸಿದ ಕಟ್ಟಳೆಗಳಿಗೂ ವಿಧೇಯರಾದರೆ, ನಿನ್ನ ಸಂತಾನದ ಒಬ್ಬನು ಯಾವಾಗಲೂ ರಾಜನಾಗಿರುವನು.” |
13
|
ಯೆಹೋವನು ತನ್ನ ಆಲಯಕ್ಕಾಗಿ ಚೀಯೋನನ್ನೇ ಆರಿಸಿಕೊಂಡನು. |
14
|
“ಇದು ನನ್ನ ಶಾಶ್ವತ ನಿವಾಸಸ್ಥಾನ. ನಾನು ಇಲ್ಲೇ ಆಸನಾರೂಢನಾಗಿರುವೆನು. ಇದೇ ನನಗೆ ಇಷ್ಟವಾದ ಸ್ಥಳ. |
15
|
ನಾನು ಚೀಯೋನಿಗೆ ಬೇಕಾದದ್ದನ್ನೆಲ್ಲಾ ಒದಗಿಸುವೆನು; ಇಲ್ಲಿಯ ಬಡವರಿಗೂ ಆಹಾರವನ್ನು ಸಮೃದ್ಧಿಯಾಗಿ ದಯಪಾಲಿಸುವೆನು; |
16
|
ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು. ನನ್ನ ಭಕ್ತರು ಉಲ್ಲಾಸಿಸುವರು. |
17
|
ಇಲ್ಲಿಯೇ ನಾನು ದಾವೀದನನ್ನು ಬಲಗೊಳಿಸುವೆನು. ನಾನು ಅಭಿಷೇಕಿಸಿದ ಅವನಿಗೆ ದೀಪವನ್ನು ಒದಗಿಸುವೆನು. |
18
|
ನಾನು ಅವನ ಶತ್ರುಗಳಿಗೆ ನಾಚಿಕೆಯೆಂಬ ವಸ್ತ್ರವನ್ನು ಹೊದಿಸುವೆನು. ಅವನ ರಾಜ್ಯವನ್ನಾದರೋ ಅಭಿವೃದ್ಧಿಗೊಳಿಸುವೆನು.” |
Psalms 132:11 Kannada Language Bible Words basic statistical display
COMING SOON ...