1
|
ಯೆಹೋವನಿಗೆ ಸ್ತೋತ್ರವಾಗಲಿ! ಯೆಹೋವನ ಸೇವಕರೇ, ಆತನ ಹೆಸರನ್ನು ಸ್ತುತಿಸಿರಿ! |
2
|
ಯೆಹೋವನ ಆಲಯದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ! ದೇವಾಲಯದ ಅಂಗಳದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ! |
3
|
ಯೆಹೋವನಿಗೆ ಸ್ತೋತ್ರ ಮಾಡಿರಿ, ಯಾಕಂದರೆ ಆತನು ಒಳ್ಳೆಯವನು. ಆತನ ಹೆಸರನ್ನು ಸ್ತುತಿಸಿರಿ, ಆದು ಮನೋಹರವಾಗಿದೆ. |
4
|
ಯೆಹೋವನು ಯಾಕೋಬನನ್ನು ಆರಿಸಿಕೊಂಡನು. ಇಸ್ರೇಲ್, ಆತನಿಗೆ ಸೇರಿದ್ದು. |
5
|
ಯೆಹೋವನು ಮಹೋನ್ನತನೆಂದೂ ನಮ್ಮ ಒಡೆಯನು ಬೇರೆಲ್ಲಾ ದೇವರುಗಳಿಗಿಂತ ಮಹೋನ್ನತನೆಂದೂ ನಮಗೆ ಗೊತ್ತಿದೆ. |
6
|
ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು. |
7
|
ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏರ ಮಾಡುವನು; ಮಿಂಚನ್ನೂ ಮಳೆಯನ್ನೂ ಬರಮಾಡುವನು; ಗಾಳಿಯನ್ನು ಬೀಸಮಾಡುವನು. |
8
|
ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ನಾಶಮಾಡಿದನು. |
9
|
ಆತನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ಫರೋಹನಿಗೂ ಅವನ ಸೇವಕರುಗಳಿಗೂ ವಿರೋಧವಾಗಿ ಮಾಡಿದನು. |
10
|
ಆತನು ಅನೇಕ ಜನಾಂಗಗಳನ್ನು ಸೋಲಿಸಿದನು. ಬಲಿಷ್ಠ ರಾಜರುಗಳನ್ನು ಕೊಂದುಹಾಕಿದನು. |
11
|
ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು; ಬಾಷಾನಿನ ರಾಜನಾದ ಓಗನನ್ನೂ ಕಾನಾನ್ ದೇಶದ ಎಲ್ಲಾ ಜನಾಂಗಗಳನ್ನೂ ಸೋಲಿಸಿದನು. |
12
|
ಆತನು ಅವರ ದೇಶವನ್ನು ತನ್ನ ಜನರಾದ ಇಸ್ರೇಲರಿಗೆ ಕೊಟ್ಟನು. |
13
|
ಯೆಹೋವನೇ, ನೀನು ಸದಾಕಾಲ ಪ್ರಸಿದ್ಧನಾಗಿರುವೆ! ಯೆಹೋವನೇ, ಜನರು ನಿನ್ನನ್ನು ಸದಾಕಾಲ ನೆನಸಿಕೊಳ್ಳುವರು. |
14
|
ಯೆಹೋವನು ಜನಾಂಗಗಳನ್ನು ದಂಡಿಸಿದನು. ತನ್ನ ಜನರಿಗಾದರೋ ಕರುಣೆಯುಳ್ಳವನಾಗಿದ್ದನು. |
15
|
ಅನ್ಯಜನರ ದೇವರುಗಳು ಮನುಷ್ಯರಿಂದಲೇ ಮಾಡಲ್ಪಟ್ಟ ಬೆಳ್ಳಿಬಂಗಾರಗಳ ಪ್ರತಿಮೆಗಳಾಗಿದ್ದವು. |
16
|
ಆ ಪ್ರತಿಮೆಗಳಿಗೆ ಬಾಯಿಗಳಿದ್ದರೂ ಮಾತಾಡಲಾಗಲಿಲ್ಲ; ಕಣ್ಣುಗಳಿದ್ದರೂ ನೋಡಲಾಗಲಿಲ್ಲ; |
17
|
ಆ ಪ್ರತಿಮೆಗಳಿಗೆ ಕಿವಿಗಳಿದ್ದರೂ ಕೇಳಲಾಗಲಿಲ್ಲ; ಮೂಗುಗಳಿದ್ದರೂ ಮೂಸಿನೋಡಲಾಗಲಿಲ್ಲ; |
18
|
ಆ ಪ್ರತಿಮೆಗಳನ್ನು ಮಾಡಿದವರೂ ಅವುಗಳಂತೆಯೇ ಆಗುವರು! ಯಾಕಂದರೆ, ಅವರು ಸಹಾಯಕ್ಕಾಗಿ ಆಪ್ರತಿಮೆಗಳನ್ನೇ ನಂಬಿಕೊಂಡಿದ್ದಾರೆ. |
19
|
ಇಸ್ರೇಲಿನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ. ಆರೋನನ ಮನೆತನದವರೇ, ಯೆಹೋವನನ್ನು ಸ್ತುತಿಸಿರಿ. |
20
|
ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ! ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ. |
21
|
ಯೆಹೋವನಿಗೆ ಚೀಯೋನಿನಿಂದಲೂ ಆತನ ವಾಸಸ್ಥಾನವಾದ ಜೆರುಸಲೇಮಿನಿಂದಲೂ ಸ್ತೋತ್ರವಾಗಲಿ! ಯೆಹೋವನಿಗೆ ಸ್ತೋತ್ರವಾಗಲಿ! |
Psalms 135:1 Kannada Language Bible Words basic statistical display
COMING SOON ...