English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Psalms Chapters

Psalms 135 Verses

1 ಯೆಹೋವನಿಗೆ ಸ್ತೋತ್ರವಾಗಲಿ! ಯೆಹೋವನ ಸೇವಕರೇ, ಆತನ ಹೆಸರನ್ನು ಸ್ತುತಿಸಿರಿ!
2 ಯೆಹೋವನ ಆಲಯದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ! ದೇವಾಲಯದ ಅಂಗಳದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ!
3 ಯೆಹೋವನಿಗೆ ಸ್ತೋತ್ರ ಮಾಡಿರಿ, ಯಾಕೆಂದರೆ ಆತನು ಒಳ್ಳೆಯವನು. ಆತನ ಹೆಸರನ್ನು ಸ್ತುತಿಸಿರಿ, ಅದು ಮನೋಹರವಾಗಿದೆ.
4 ಯೆಹೋವನು ಯಾಕೋಬನನ್ನು ಆರಿಸಿಕೊಂಡನು. ಇಸ್ರೇಲ್, ಆತನಿಗೆ ಸೇರಿದ್ದು.
5 ಯೆಹೋವನು ಮಹೋನ್ನತನೆಂದೂ ನಮ್ಮ ಒಡೆಯನು ಬೇರೆಲ್ಲಾ ದೇವರುಗಳಿಗಿಂತ ಮಹೋನ್ನತನೆಂದೂ ನಮಗೆ ಗೊತ್ತಿದೆ.
6 ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು.
7 ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏಳಮಾಡುವನು; ಮಿಂಚನ್ನೂ ಮಳೆಯನ್ನೂ ಬರಮಾಡುವನು; ಗಾಳಿಯನ್ನು ಬೀಸಮಾಡುವನು.
8 ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ನಾಶಮಾಡಿದನು.
9 ಆತನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ಫರೋಹನಿಗೂ ಅವನ ಸೇವಕರುಗಳಿಗೂ ವಿರೋಧವಾಗಿ ಮಾಡಿದನು.
10 ಆತನು ಅನೇಕ ಜನಾಂಗಗಳನ್ನು ಸೋಲಿಸಿದನು. ಬಲಿಷ್ಠ ರಾಜರುಗಳನ್ನು ಕೊಂದುಹಾಕಿದನು.
11 ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು; ಬಾಷಾನಿನ ರಾಜನಾದ ಓಗನನ್ನೂ ಕಾನಾನ್ ದೇಶದ ಎಲ್ಲಾ ಜನಾಂಗಗಳನ್ನೂ ಸೋಲಿಸಿದನು.
12 ಆತನು ಅವರ ದೇಶವನ್ನು ತನ್ನ ಜನರಾದ ಇಸ್ರೇಲರಿಗೆ ಕೊಟ್ಟನು.
13 ಯೆಹೋವನೇ, ನೀನು ಸದಾಕಾಲ ಪ್ರಸಿದ್ಧನಾಗಿರುವೆ! ಯೆಹೋವನೇ, ಜನರು ನಿನ್ನನ್ನು ಸದಾಕಾಲ ನೆನಸಿಕೊಳ್ಳುವರು.
14 ಯೆಹೋವನು ಜನಾಂಗಗಳನ್ನು ದಂಡಿಸಿದನು. ತನ್ನ ಜನರಿಗಾದರೋ ಕರುಣೆಯುಳ್ಳವನಾಗಿದ್ದನು.
15 ಅನ್ಯಜನರ ದೇವರುಗಳು ಮನುಷ್ಯರಿಂದಲೇ ಮಾಡಲ್ಪಟ್ಟ ಬೆಳ್ಳಿಬಂಗಾರಗಳ ಪ್ರತಿಮೆಗಳಾಗಿದ್ದವು.
16 ಆ ಪ್ರತಿಮೆಗಳಿಗೆ ಬಾಯಿಗಳಿದ್ದರೂ ಮಾತಾಡಲಾಗಲಿಲ್ಲ; ಕಣ್ಣುಗಳಿದ್ದರೂ ನೋಡಲಾಗಲಿಲ್ಲ;
17 ಆ ಪ್ರತಿಮೆಗಳಿಗೆ ಕಿವಿಗಳಿದ್ದರೂ ಕೇಳಲಾಗಲಿಲ್ಲ; ಮೂಗುಗಳಿದ್ದರೂ ಮೂಸಿನೋಡಲಾಗಲಿಲ್ಲ;
18 ಆ ಪ್ರತಿಮೆಗಳನ್ನು ಮಾಡಿದವರೂ ಅವುಗಳಂತೆಯೇ ಆಗುವರು! ಯಾಕೆಂದರೆ, ಅವರು ಸಹಾಯಕ್ಕಾಗಿ ಆ ಪ್ರತಿಮೆಗಳನ್ನೇ ನಂಬಿಕೊಂಡಿದ್ದಾರೆ.
19 ಇಸ್ರೇಲಿನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ. ಆರೋನನ ಮನೆತನದವರೇ, ಯೆಹೋವನನ್ನು ಸ್ತುತಿಸಿರಿ.
20 ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ! ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ.
21 ಯೆಹೋವನಿಗೆ ಚೀಯೋನಿನಿಂದಲೂ ಆತನ ವಾಸಸ್ಥಾನವಾದ ಜೆರುಸಲೇಮಿನಿಂದಲೂ ಸ್ತೋತ್ರವಾಗಲಿ! ಯೆಹೋವನಿಗೆ ಸ್ತೋತ್ರವಾಗಲಿ!
×

Alert

×