1
|
ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು. ಆತನ ಪ್ರೀತಿ ಶಾಶ್ವತವಾದದ್ದು. |
2
|
ದೇವಾಧಿದೇವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನ ಪ್ರೀತಿ ಶಾಶ್ವತವಾದದ್ದು. |
3
|
ಪ್ರಭುಗಳ ಪ್ರಭವಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಪ್ರೀತಿ ಶಾಶ್ವತವಾದದ್ದು. |
4
|
ಮಹತ್ಕಾರ್ಯಗಳನ್ನು ಮಾಡಬಲ್ಲ ಆತನಿಗೆ ಸ್ತೋತ್ರಮಾಡಿರಿ. ಆತನ ಪ್ರೀತಿ ಶಾಶ್ವತವಾದದ್ದು. |
5
|
ಜ್ಞಾನದಿಂದ ಆಕಾಶವನ್ನು ನಿರ್ಮಿಸಿದ ಆತನೊಬ್ಬನನ್ನೇ ಸ್ತುತಿಸಿರಿ! ಆತನ ಪ್ರೀತಿ ಶಾಶ್ವತವಾದದ್ದು. |
6
|
ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ. ಆತನ ಪ್ರೀತಿ ಶಾಶ್ವತವಾದದ್ದು. |
7
|
ಆತನು ಮಹಾಬೆಳಕುಗಳನ್ನು ಸೃಷ್ಟಿಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು. |
8
|
ಹಗಲನ್ನು ಆಳುವುದಕ್ಕಾಗಿ ಆತನು ಸೂರ್ಯನನ್ನು ಸೃಷ್ಟಿಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು. |
9
|
ರಾತ್ರಿಯನ್ನು ಆಳುವುದಕ್ಕಾಗಿ ಆತನು ಚಂದ್ರನನ್ನೂ ನಕ್ಷತ್ರಗಳನ್ನೂ ಸೃಷ್ಟಿಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು. |
10
|
ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ಸಂಹರಿಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
11
|
ಆತನು ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದನು. ಆತನ ಪ್ರೀತಿ ಶಾಶ್ವತವಾದದ್ದು. |
12
|
ಆತನು ತನ್ನ ಮಹಾಶಕ್ತಿಯನ್ನೂ ಬಲವನ್ನೂ ತೋರಿದನು. ಆತನ ಪ್ರೀತಿ ಶಾಶ್ವತವಾದದ್ದು. |
13
|
ಆತನು ಕೆಂಪು ಸಮುದ್ರವನ್ನು ಎರಡು ಭಾಗವನ್ನಾಗಿ ಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು. |
14
|
ಆತನು ಇಸ್ರೇಲರನ್ನು ಸಮುದ್ರದ ಮಧ್ಯದಲ್ಲಿ ನಡೆಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
15
|
ಆತನು ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಮುಳುಗಿಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
16
|
ಆತನು ತನ್ನ ಜನರನ್ನು ಅರಣ್ಯದೊಳಗೆ ನಡೆಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
17
|
ಆತನು ಶಕ್ತಿಯುತರಾದ ರಾಜರುಗಳನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
18
|
ಆತನು ಬಲಿಷ್ಟರಾದ ರಾಜರುಗಳನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
19
|
ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
20
|
ಆತನು ಬಾಷಾನಿನ ರಾಜನಾದ ಓಗನನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
21
|
ಆತನು ಅವರ ದೇಶಗಳನ್ನು ಇಸ್ರೇಲರಿಗೆ ಕೊಟ್ಟನು. ಆತನ ಪ್ರೀತಿ ಶಾಶ್ವತವಾದದ್ದು. |
22
|
ಆತನು ಆ ದೇಶಗಳನ್ನು ಇಸ್ರೇಲರಿಗೆ ಉಡುಗೊರೆಯಾಗಿ ಕೊಟ್ಟನು. ಆತನ ಪ್ರೀತಿ ಶಾಶ್ವತವಾದದ್ದು. |
23
|
ನಾವು ಸೋತುಹೋಗಿದ್ದಾಗ ಆತನು ನಮ್ಮನ್ನು ಜ್ಞಾಪಿಸಿಕೊಂಡನು. ಆತನ ಪ್ರೀತಿ ಶಾಶ್ವತವಾದದ್ದು. |
24
|
ಆತನು ನಮ್ಮನ್ನು ನಮ್ಮ ಶತ್ರುಗಳಿಂದ ರಕ್ಷಿಸಿದನು. ಆತನ ಪ್ರೀತಿ ಶಾಶ್ವತವಾದದ್ದು. |
25
|
ಆತನು ಪ್ರತಿಯೊಬ್ಬರಿಗೂ ಆಹಾರವನ್ನು ಕೊಡುವನು. ಆತನ ಪ್ರೀತಿ ಶಾಶ್ವತವಾದದ್ದು. |
26
|
ಪರಲೋಕದ ದೇವರನ್ನು ಸ್ತುತಿಸಿರಿ! ಆತನ ಪ್ರೀತಿ ಶಾಶ್ವತವಾದದ್ದು. |
Psalms 136:17 Kannada Language Bible Words basic statistical display
COMING SOON ...