1
|
ನಾವು ಬಾಬಿಲೋನ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು ಚೀಯೋನನ್ನು ನೆನಸಿಕೊಳ್ಳುತ್ತಾ ಅತ್ತೆವು. |
2
|
ಸಮೀಪದಲ್ಲಿದ್ದ ನೀರವಂಜಿ ಮರಗಳಿಗೆ ನಾವು ನಮ್ಮ ಹಾರ್ಪ್ವಾದ್ಯಗಳನ್ನು ತೂಗುಹಾಕಿದೆವು. |
3
|
ನಮ್ಮನ್ನು ಸೆರೆಹಿಡಿದಿದ್ದ ಜನರು ಬಾಬಿಲೋನಿನಲ್ಲಿ ನಮಗೆ ಚೀಯೋನಿನ ಕುರಿತು ಹರ್ಷಗೀತೆಗಳನ್ನು ಹಾಡಲು ಹೇಳಿದರು. |
4
|
ಆದರೆ ಪರದೇಶದಲ್ಲಿ ಯೆಹೋವನ ಹಾಡುಗಳನ್ನು ನಾವು ಹಾಡುವಂತಿಲ್ಲ! |
5
|
ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡನ್ನು ಬಾರಿಸದಂತಾಗಲಿ. |
6
|
ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡಲು ಶಕ್ತನಾಗದಂತಾಗಲಿ. ಜೆರುಸಲೇಮೇ, ನಿನ್ನ ವಿಷಯದಲ್ಲೇ ನಾನು ಅತ್ಯಾನಂದ ಪಡುವೆನೆಂದು ಪ್ರಮಾಣ ಮಾಡುವೆ. |
7
|
ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು. |
8
|
ಬಾಬಿಲೋನೇ, ನೀನು ನಾಶವಾಗುವೆ! ನಿನಗೆ ತಕ್ಕ ದಂಡೆನೆಯನ್ನು ಕೊಡುವವನು ಧನ್ಯನು. ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನೇ ಧನ್ಯನು. |
9
|
ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನೇ ಧನ್ಯನು. |
Psalms 137:1 Kannada Language Bible Words basic statistical display
COMING SOON ...