1
|
ಯೆಹೋವನೇ, ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು. ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು. |
2
|
ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ. |
3
|
ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ. |
4
|
ಯೆಹೋವನೇ, ಭೂರಾಜರುಗಳೆಲ್ಲಾ ನಿನ್ನ ನುಡಿಗಳನ್ನು ಕೇಳಿ ನಿನ್ನನ್ನು ಕೊಂಡಾಡಬೇಕೆಂಬುದು ನನ್ನ ಅಪೇಕ್ಷೆ. |
5
|
ಅವರೆಲ್ಲರೂ ಯೆಹೋವನ ಮಾರ್ಗವನ್ನು ಹಾಡಿ ಕೊಂಡಾಡುವರು; ಯಾಕಂದರೆ ಯೆಹೋವನ ಮಹಿಮೆಯು ಮಹತ್ವವಾದದ್ದು. |
6
|
ಯೆಹೋವನೇ ಮಹೋನ್ನತನು. ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ. ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ. |
7
|
ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು. |
8
|
ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು. ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ! |
Psalms 138:4 Kannada Language Bible Words basic statistical display
COMING SOON ...