1
|
ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ಸಂಪೂರ್ಣವಾಗಿ ತಿಳಿದುಕೊಂಡಿರುವೆ. |
2
|
ನಾನು ಕುಳಿತುಕೊಳ್ಳುವುದೂ ಎದ್ದೇಳುವುದೂ ನಿನಗೆ ತಿಳಿದಿದೆ. ನೀನು ಬಹುದೂರದಿಂದಲೇ ನನ್ನ ಆಲೋಚನೆಗಳನ್ನು ತಿಳಿದಿರುವೆ. |
3
|
ನಾನು ಎಲ್ಲಿಗೇ ಹೋಗುತ್ತಿದ್ದರೂ ಎಲ್ಲೇ ಮಲಗಿದ್ದರೂ ನಿನಗೆ ತಿಳಿದಿರುತ್ತದೆ. ನನ್ನ ಕಾರ್ಯಗಳೆಲ್ಲಾ ನಿನಗೆ ತಿಳಿದಿದೆ. |
4
|
ಯೆಹೋವನೇ, ನನ್ನ ಬಾಯಿಂದ ಮಾತುಗಳು ಹೊರಡುವುದಕ್ಕಿಂತ ಮೊದಲೇ ನಾನು ಹೇಳಬೇಕೆಂದಿರುವುದು ನಿನಗೆ ತಿಳಿದಿದೆ. |
5
|
ನೀನು ನನ್ನ ಸುತ್ತಲೂ ಆವರಿಸಿರುವೆ; ನಿನ್ನ ಹಸ್ತವನ್ನು ನನ್ನ ಮೇಲೆ ಇಟ್ಟಿರುವೆ. |
6
|
ನನ್ನ ವಿಷಯವಾಗಿ ನನಗಿಂತಲೂ ನಿನಗೆ ಎಷ್ಟೋ ಹೆಚ್ಚಾಗಿ ತಿಳಿದಿರುವುದು ನನ್ನನ್ನು ಆಶ್ಚರ್ಯಗೊಳಿಸಿದೆ, ಅದನ್ನು ಗ್ರಹಿಸಿಕೊಳ್ಳುವುದಕ್ಕೂ ನನ್ನಿಂದಾಗದು. |
7
|
ನಾನು ನಿನ್ನ ಆತ್ಮದಿಂದ ತಪ್ಪಿಸಿಕೊಳ್ಳಲು ಎಲ್ಲಿಗೆ ಓಡಿಹೋಗಲಿ! ನಿನ್ನ ಕಣ್ಣಿಗೆ ಮರೆಯಾಗಲು ಎಲ್ಲಿಗೆ ಹೋಗಲಿ? |
8
|
ನಾನು ಪರಲೋಕಕ್ಕೆ ಏರಿಹೋದರೆ ಅಲ್ಲಿಯೂ ನೀನಿರುವೆ. ಪಾತಾಳಕ್ಕೆ ಇಳಿದುಹೋದರೆ ಅಲ್ಲಿಯೂ ನೀನಿರುವೆ. |
9
|
ಪೂರ್ವದಿಕ್ಕಿನಲ್ಲಿ ಸೂರ್ಯನು ಉದಯಿಸುವ ಸ್ಥಳಕ್ಕೆ ಹೋದರೆ ಅಲ್ಲಿಯೂ ನೀನಿರುವೆ ಪಶ್ಚಿಮದಿಕ್ಕಿನಲ್ಲಿ ಸಮದ್ರದ ಕಟ್ಟಕಡೆಗೆ ಹೋದರೆ ಅಲ್ಲಿಯೂ ನೀನಿರುವೆ. |
10
|
ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು. ನಿನ್ನ ಬಲಗೈ ನನ್ನನ್ನು ಭದ್ರವಾಗಿ ಹಿಡಿದಿರುವುದು. |
11
|
ನಾನು ನನ್ನನ್ನು ನಿನ್ನಿಂದ ಮರೆಮಾಡಿಕೊಳ್ಳಲು ಪ್ರಯತ್ನಿಸಿ, “ಹಗಲು ಹೋಗಿ ಕತ್ತಲಾಯಿತು, ಖಂಡಿತವಾಗಿ ಕಾರ್ಗತ್ತಲೆಯು ನನ್ನನ್ನು ಮರೆಮಾಡುವುದು” ಎಂದೆನ್ನಬಹುದು. |
12
|
ಆದರೆ ಕಾರ್ಗತ್ತಲೆಯೂ ನಿನಗೆ ಕತ್ತಲೆಯಲ್ಲ. ಕಾರ್ಗತ್ತಲೆಯು ನಿನಗೆ ಹಗಲಿನಂತೆ ಪ್ರಕಾಶಮಾನವಾಗಿರುವುದು. |
13
|
ನನ್ನ ಅಂತರಿಂದ್ರಿಯಗಳನ್ನು ಸೃಷ್ಟಿಮಾಡಿದವನೂ ನೀನೇ. ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನೇ. |
14
|
ನಿನ್ನ ಎಲ್ಲಾ ಅದ್ಭುತಕಾರ್ಯಗಳಿಗಾಗಿ ನಿನಗೆ ಕೃತಜ್ಞತಾಸ್ತುತಿ ಮಾಡುವೆನು. ನಿನ್ನ ಕಾರ್ಯಗಳು ಅದ್ಭುತಕರವಾಗಿವೆಯೆಂದು ನಾನು ಗ್ರಹಿಸಿಕೊಂಡಿರುವೆ. |
15
|
ನನ್ನ ವಿಷಯವೆಲ್ಲಾ ನಿನಗೆ ಗೊತ್ತಿದೆ. ತಾಯಿಗರ್ಭದಲ್ಲಿ ನನ್ನ ದೇಹ ರೂಪಗೊಳ್ಳುತ್ತಿದ್ದಾಗ ನನ್ನ ಎಲುಬುಗಳು ಬೆಳೆಯುವುದನ್ನೂ ನೀನು ನೋಡಿದೆ. |
16
|
ನನ್ನ ದೇಹದ ಅಂಗಾಂಗಗಳು ಬೆಳೆಯುವುದನ್ನೂ ನೀನು ಗಮನಿಸಿದೆ. ನನ್ನ ಆಯುಷ್ಕಾಲದ ಮೊದಲನೆ ದಿನ ಆರಂಭವಾಗುವುದಕ್ಕಿಂತ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು. |
17
|
ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಮುಖ್ಯವಾಗಿವೆ. ಅವು ಅಸಂಖ್ಯಾತವಾಗಿವೆ. |
18
|
ಅವುಗಳನ್ನು ಎಣಿಸುವುದಾದರೆ, ಸಮುದ್ರದ ಮರಳಿಗಿಂತಲೂ ಹೆಚ್ಚಾಗಿವೆ. ನಾನು ಎಚ್ಚರಗೊಂಡಾಗ ಮುಂಚಿನಂತೆ ನಿನ್ನೊಂದಿಗೇ ಇರುವೆನು. |
19
|
ಯೆಹೋವನೇ, ದುಷ್ಟರನ್ನು ಸಂಹರಿಸು. ಆ ಕೊಲೆಗಾರರನ್ನು ನನ್ನಿಂದ ದೂರಮಾಡು. |
20
|
ಆ ದುಷ್ಟರು ನಿನ್ನನ್ನು ದೂಷಿಸುತ್ತಾರೆ. ಅಯೋಗ್ಯಕ್ಕಾಗಿ ನಿನ್ನ ಹೆಸರನ್ನು ಹೇಳುತ್ತಾರೆ. |
21
|
ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನೂ ದ್ವೇಷಿಸುವೆನು. ನಿನ್ನನ್ನು ವಿರೋಧಿಸುವವರನ್ನು ನಾನೂ ವಿರೋಧಿಸುವೆನು. |
22
|
ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುವೆನು! ನಿನ್ನ ವೈರಿಗಳನ್ನು ನನ್ನ ವೈರಿಗಳೆಂದೇ ಪರಿಗಣಿಸಿದ್ದೇನೆ. |
23
|
ದೇವರೇ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ. ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗ್ರಹಿಸಿಕೋ. |
24
|
ನನ್ನಲ್ಲಿ ದುರಾಲೋಚನೆಗಳಿದ್ದರೆ ಕಂಡುಕೋ. ನನ್ನನ್ನು ಸನಾತನಮಾರ್ಗದಲ್ಲಿ ನಡೆಸು. |
Psalms 139:1 Kannada Language Bible Words basic statistical display
COMING SOON ...