Bible Languages

Indian Language Bible Word Collections

Bible Versions

Books

Psalms Chapters

Psalms 140 Verses

Bible Versions

Books

Psalms Chapters

Psalms 140 Verses

1 ಯೆಹೋವನೇ, ಕೆಡುಕರಿಂದ ನನ್ನನ್ನು ರಕ್ಷಿಸು. ಕ್ರೂರಿಗಳಿಂದ ನನ್ನನ್ನು ಕಾಪಾಡು.
2 ಅವರು ಕೇಡು ಮಾಡಬೇಕೆಂದಿದ್ದಾರೆ. ಅವರು ಯಾವಾಗಲೂ ಜಗಳವೆಬ್ಬಿಸುತ್ತಾರೆ.
3 ಅವರ ನಾಲಿಗೆಗಳು ಸರ್ಪಗಳಂತಿವೆ. ಅವರ ನಾಲಿಗೆಯ ಕೆಳಗೆ ಹಾವಿನ ವಿಷವಿದೆ.
4 ಯೆಹೋವನೇ, ದುಷ್ಟರಿಂದ ನನ್ನನ್ನು ರಕ್ಷಿಸು. ಕ್ರೂರಿಗಳಿಂದ ನನ್ನನ್ನು ಕಾಪಾಡು. ಅವರು ನನ್ನನ್ನು ಹಿಂದಟ್ಟಿ ನನಗೆ ಕೇಡು ಮಾಡಬೇಕೆಂದಿದ್ದಾರೆ.
5 ಆ ಗರ್ವಿಷ್ಠರು ನನಗೆ ಉರುಲನ್ನು ಒಡ್ಡಿದ್ದಾರೆ; ನನ್ನನ್ನು ಹಿಡಿಯಲು ಬಲೆಯನ್ನು ಹಾಸಿದ್ದಾರೆ; ನನ್ನ ದಾರಿಯಲ್ಲಿ ಬೋನನ್ನು ಇಟ್ಟಿದ್ದಾರೆ.
6 ಯೆಹೋವನೇ, ನನ್ನ ದೇವರು ನೀನೇ. ನನ್ನ ಪ್ರಾರ್ಥನೆಗೆ ಕಿವಿಗೊಡು.
7 ಯೆಹೋವನೇ, ನನ್ನ ಬಲಿಷ್ಠನಾದ ಒಡೆಯನು ನೀನೇ. ನನ್ನ ರಕ್ಷಕನೂ ನೀನೇ, ನನ್ನ ಶಿರಸ್ತ್ರಾಣವೂ ನೀನೇ.
8 ಯೆಹೋವನೇ, ಆ ದುಷ್ಟರ ದುರಾಶೆಯೂ ದುರಾಲೋಚನೆಯೂ ನೆರವೇರಲು ಬಿಡಬೇಡ.
9 ನನ್ನ ವೈರಿಗಳಿಗೆ ಜಯವಾಗಲು ಬಿಡಬೇಡ. ಅವರು ಕುಯುಕ್ತಿಗಳನ್ನು ಮಾಡುತ್ತಿದ್ದಾರೆ; ಅವುಗಳನ್ನು ವಿಫಲಗೊಳಿಸು.
10 ಅವರ ತಲೆಗಳ ಮೇಲೆ ಉರಿಯುವ ಕೆಂಡಗಳನ್ನು ಸುರಿದು ಬೆಂಕಿಯೊಳಗೆ ಎಸೆದುಬಿಡು; ಎಂದಿಗೂ ಹತ್ತಿ ಬರಲಾಗದ ಗುಂಡಿಯೊಳಗೆ ಅವರನ್ನು ಎಸೆದುಬಿಡು.
11 ಆ ಸುಳ್ಳುಗಾರರನ್ನು ಜೀವಂತವಾಗಿ ಉಳಿಸಬೇಡ. ಆ ಕೆಡುಕರಿಗೆ ಕೇಡುಗಳಾಗುವಂತೆ ಮಾಡು.
12 ಯೆಹೋವನು ದೀನರಿಗೆ ನ್ಯಾಯವಾದ ತೀರ್ಪನ್ನು ಪಾಲಿಸುತ್ತಾನೆಂದು ನನಗೆ ಗೊತ್ತಿದೆ. ದೇವರು ಅಸಹಾಯಕರಿಗೆ ಸಹಾಯಮಾಡುವನು.
13 ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು; ಯಥಾರ್ಥವಂತರು ನಿನ್ನ ಸನ್ನಿಧಿಯಲ್ಲಿ ಜೀವಿಸುವರು.

Psalms 140 Verses

Psalms 140 Chapter Verses Kannada Language Bible Words display

COMING SOON ...

×

Alert

×