Bible Languages

Indian Language Bible Word Collections

Bible Versions

Books

Psalms Chapters

Psalms 141 Verses

Bible Versions

Books

Psalms Chapters

Psalms 141 Verses

1 ರಚನೆಗಾರ : ದಾವೀದ. ಯೆಹೋವನೇ, ಸಹಾಯಕ್ಕಾಗಿ ನಿನಗೆ ಮೊರೆಯಿಡುತ್ತಿದ್ದೇನೆ. ನನ್ನ ಪ್ರಾರ್ಥನೆಗೆ ಕಿವಿಗೊಡು. ಬೇಗನೆ ಬಂದು ನನಗೆ ಸಹಾಯಮಾಡು!
2 ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ.
3 ಯೆಹೋವನೇ, ನನ್ನ ಮಾತುಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದಕ್ಕೂ, ವಿವೇಚಿಸಿ ನುಡಿಯುವುದಕ್ಕೂ ನನಗೆ ಸಹಾಯ ಮಾಡು.
4 ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ.
5 ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.
6 ಅವರ ಅಧಿಪತಿಗಳು ದಬ್ಬಲ್ಪಡಲಿ. ನಾನು ಹೇಳಿದ್ದು ಸತ್ಯವೆಂದು ಆಗ ಜನರು ತಿಳಿದುಕೊಳ್ಳುವರು.
7 ಜನರು ಹೊಲವನ್ನು ಉತ್ತು ಹೆಂಟೆಗಳನ್ನು ಪುಡಿಮಾಡಿ ಚದರಿಸುವಂತೆಯೇ ಕೆಟ್ಟವರ ಎಲುಬುಗಳು ಅವರ ಸಮಾಧಿಗಳಲ್ಲಿ ಹರಡಿಕೊಂಡಿರುತ್ತವೆ.
8 ನನ್ನ ಒಡೆಯನಾದ ಯೆಹೋವನೇ, ಸಹಾಯಕ್ಕಾಗಿ ನಿನ್ನನ್ನೇ ಎದುರುನೋಡುವೆನು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ದಯವಿಟ್ಟು ನನ್ನನ್ನು ಮರಣಕ್ಕೀಡು ಮಾಡಬೇಡ.
9 ಕೆಟ್ಟವರು ನನಗೆ ಬಲೆಗಳನ್ನು ಒಡ್ಡಿದ್ದಾರೆ. ಅವರ ಬೋನುಗಳಿಂದ ನನ್ನನ್ನು ತಪ್ಪಿಸು.
10 ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಬೀಳಲಿ. ಆಗ ನಾನು ತಪ್ಪಿಸಿಕೊಳ್ಳುವೆನು.

Psalms 141:1 Kannada Language Bible Words basic statistical display

COMING SOON ...

×

Alert

×