Bible Languages

Indian Language Bible Word Collections

Bible Versions

Books

Psalms Chapters

Psalms 142 Verses

Bible Versions

Books

Psalms Chapters

Psalms 142 Verses

1 ರಚನೆಗಾರ : ದಾವೀದ. ನಾನು ಯೆಹೋವನಿಗೆ ಮೊರೆಯಿಡುವೆನು; ಯೆಹೋವನನ್ನು ಕೂಗಿಕೊಳ್ಳುವೆನು.
2 ನನ್ನ ಕಷ್ಟಗಳನ್ನೂ ಚಿಂತೆಗಳನ್ನೂ ಆತನಿಗೆ ಅರಿಕೆಮಾಡಿಕೊಳ್ಳುವೆನು.
3 ನನ್ನ ವೈರಿಗಳು ನನಗೆ ಉರುಲನ್ನು ಒಡ್ಡಿದ್ದಾರೆ. ನನ್ನ ಆತ್ಮವು ಕುಂದಿಹೋಗಿದೆ. ನನ್ನ ಮಾರ್ಗವನ್ನು ತಿಳಿದಿರುವಾತನು ನೀನೇ.
4 ನಾನು ಸುತ್ತಮುತ್ತ ನೋಡಿದರೂ ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ. ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. ನನ್ನನ್ನು ರಕ್ಷಿಸಲು ಪ್ರಯತ್ನಿಸುತ್ತಿಲ್ಲ.
5 ಆದ್ದರಿಂದ ಯೆಹೋವನನ್ನು ಕೂಗಿಕೊಳ್ಳುವೆನು. ನನ್ನ ಆಶ್ರಯಸ್ಥಾನವೂ ನೀನೇ, ನನ್ನನ್ನು ಬದುಕಿಸಬಲ್ಲಾತನೂ ನೀನೇ ಎಂದು ಆತನಿಗೆ ಮೊರೆಯಿಡುವೆನು.
6 ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನೀನು ನನಗೆ ಬೇಕೇಬೇಕು. ನನ್ನನ್ನು ಬೆನ್ನಟ್ಟುತ್ತಿರುವ ಜನರಿಂದ ನನ್ನನ್ನು ರಕ್ಷಿಸು. ಅವರು ನನಗಿಂತ ಬಹು ಬಲಿಷ್ಠರಾಗಿದ್ದಾರೆ.
7 ಈ ಉರುಲಿನಿಂದ ಪಾರಾಗಲು ನನಗೆ ಸಹಾಯಮಾಡು. ಯೆಹೋವನೇ, ಆಗ ನಾನು ಹೆಸರನ್ನು ಕೊಂಡಾಡುವೆನು. ನೀನು ನನ್ನನ್ನು ಕಾಪಾಡಿದ್ದರಿಂದ ನೀತಿವಂತರು ನನ್ನೊಂದಿಗೆ ಕೊಂಡಾಡುವರು.

Psalms 142:7 Kannada Language Bible Words basic statistical display

COMING SOON ...

×

Alert

×