1
|
ಯೆಹೋವನು ನನಗೆ ಬಂಡೆಯಾಗಿದ್ದಾನೆ. ಆತನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಯುದ್ಧಕ್ಕೂ ಕದನಕ್ಕೂ ತರಬೇತು ಮಾಡುವನು. |
2
|
ಆತನು ನನ್ನನ್ನು ಪ್ರೀತಿಸುವ ದೇವರೂ ನನ್ನ ಕೋಟೆಯೂ ನನ್ನ ದುರ್ಗವೂ ನನ್ನ ರಕ್ಷಕನೂ ನನ್ನ ಗುರಾಣಿಯೂ ನನ್ನ ಆಶ್ರಯವೂ ಆಗಿದ್ದಾನೆ. |
3
|
ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ನೀನು ಅವನನ್ನು ಯಾಕೆ ನೆನಸಬೇಕು? ಮನುಷ್ಯನು ಎಷ್ಟರವನು? ನೀನು ಅವನನ್ನು ಯಾಕೆ ಗಮನಿಸಬೇಕು? |
4
|
ಮನುಷ್ಯನು ಕೇವಲ ಉಸಿರೇ. ಅವನ ಜೀವಮಾನವು ಬೇಗನೆ ಗತಿಸಿಹೋಗುವ ನೆರಳಿನಂತಿದೆ. |
5
|
ಯೆಹೋವನೇ, ಆಕಾಶವನ್ನು ಹರಿದು ಇಳಿದು ಬಾ. ಪರ್ವತಗಳನ್ನು ಮುಟ್ಟು. ಆಗ ಅವುಗಳಿಂದ ಹೊಗೆಯು ಮೇಲೇರುವುದು. |
6
|
ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು. ನಿನ್ನ ಬಾಣಗಳಿಂದ ಅವರನ್ನು ಓಡಿಸಿಬಿಡು. |
7
|
ಮೇಲಣ ಲೋಕದಿಂದ ಕೈಚಾಚಿ ಮಹಾ ಜಲರಾಶಿಯಂತಿರುವ ನನ್ನ ಶತ್ರುಗಳಿಂದ ನನ್ನನ್ನು ಎಳೆದುಕೋ. ಅನ್ಯಜನರ ಕೈಯಿಂದ ನನ್ನನ್ನು ಬಿಡಿಸು. |
8
|
ಅವರ ಬಾಯಿ ಸುಳ್ಳುಗಳಿಂದ ತುಂಬಿವೆ. ಅವರ ಬಲಗೈ ಮೋಸದಿಂದ ತುಂಬಿವೆ. |
9
|
ಯೆಹೋವನೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು. ನಾನು ಹತ್ತುತಂತಿಗಳ ಹಾರ್ಪ್ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಸ್ತುತಿಸುವೆನು. |
10
|
ರಾಜರುಗಳಿಗೆ ಸಹಾಯಮಾಡಿ ಯುದ್ಧಗಳಲ್ಲಿ ಗೆಲ್ಲಿಸುವವನೂ ನೀನೇ. ನಿನ್ನ ಸೇವಕನಾದ ದಾವೀದನನ್ನು ಅವನ ಶತ್ರುಗಳ ಖಡ್ಗಗಳಿಂದ ರಕ್ಷಿಸಿದವನೂ ನೀನೇ. |
11
|
ಈ ಅನ್ಯಜನರಿಂದ ನನ್ನನ್ನು ರಕ್ಷಿಸು. ಅವರ ಬಾಯಿಗಳು ಸುಳ್ಳುಗಳಿಂದ ತುಂಬಿವೆ. ಅವರ ಬಲಗೈಗಳು ಮೋಸದಿಂದ ತುಂಬಿವೆ. |
12
|
ನಮ್ಮ ಯುವಕರು ಮಹಾವೃಕ್ಷಗಳಂತಿದ್ದಾರೆ. ನಮ್ಮ ಯುವತಿಯರು ಅರಮನೆಯಲ್ಲಿ ಸುಂದರವಾಗಿ ಕೆತ್ತಲ್ಪಟ್ಟ ಕಂಬಗಳಂತಿರುವರು. |
13
|
ನಮ್ಮ ಕಣಜಗಳು ಸಕಲ ಬಗೆಯ ದವಸಧಾನ್ಯಗಳಿಂದ ತುಂಬಿರುತ್ತವೆ. ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುತ್ತವೆ. |
14
|
ನಮ್ಮ ಸೈನಿಕರು ಸುರಕ್ಷಿತವಾಗಿದ್ದಾರೆ. ಯಾವ ಶತ್ರುಗಳೂ ನುಗ್ಗಿ ಬರಲು ಪ್ರಯತ್ನಿಸುತ್ತಿಲ್ಲ. ನಾವು ಯುದ್ಧಕ್ಕೆ ಹೋಗುವುದೂ ಇಲ್ಲ; ನಮ್ಮ ಬೀದಿಗಳಲ್ಲಿ ಗೋಳಾಟವೂ ಇರುವುದಿಲ್ಲ. |
15
|
ಇಂಥ ಸುಸ್ಥಿತಿಯಲ್ಲಿರುವ ಜನರೇ ಧನ್ಯರು. ಯಾರಿಗೆ ಯೆಹೋವನು ದೇವಾರಾಗಿರುತ್ತಾನೊ ಅವರೇ ಭಾಗ್ಯವಂತರು. |
Psalms 144:1 Kannada Language Bible Words basic statistical display
COMING SOON ...