1
|
ನನ್ನ ದೇವರೇ, ನನ್ನ ರಾಜನೇ, ನಿನ್ನನ್ನು ಸ್ತುತಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು. |
2
|
ನಿನ್ನನ್ನು ಪ್ರತಿದಿನವೂ ಸ್ತುತಿಸುವೆನು. ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು. |
3
|
ಯೆಹೋವನು ಮಹೋನ್ನತನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ. ಆತನ ಮಹತ್ಕಾರ್ಯಗಳು ಅಸಂಖ್ಯಾತವಾಗಿವೆ. |
4
|
ಯೆಹೋವನೇ, ನಿನ್ನ ಕಾರ್ಯಗಳನ್ನು ಜನರು ಎಂದೆಂದಿಗೂ ಸ್ತುತಿಸುವರು; ನಿನ್ನ ಮಹತ್ಕಾರ್ಯಗಳ ವಿಷಯವಾಗಿ ಜನರು ಬೇರೆಯವರಿಗೆ ಹೇಳುವರು. |
5
|
ನಿನ್ನ ಪ್ರಭಾವವುಳ್ಳ ಮಹಿಮೆಯ ಕುರಿತು ಜನರು ಹೇಳುವರು. ನಾನು ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವೆನು. |
6
|
ನಿನ್ನ ಅತ್ಯಾಶ್ಚರ್ಯಕರವಾದ ಕಾರ್ಯಗಳನ್ನು ಜನರು ಕೊಂಡಾಡುವರು. ನಿನ್ನ ಮಹತ್ಕಾರ್ಯಗಳನ್ನು ನಾನು ವರ್ಣಿಸುವೆನು. |
7
|
ನಿನ್ನ ಒಳ್ಳೆಯ ಕಾರ್ಯಗಳ ಕುರಿತಾಗಿ ಜನರು ಹೇಳುವರು. ನಿನ್ನ ನೀತಿಯು ಕುರಿತಾಗಿ ಜನರು ಹಾಡುವರು. |
8
|
ಯೆಹೋವನು ದಯೆಯುಳ್ಳವನೂ ಕನಿಕರವುಳ್ಳವನೂ ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ. |
9
|
ಯೆಹೋವನು ಪ್ರತಿಯೊಬ್ಬನಿಗೂ ಒಳ್ಳೆಯವನಾಗಿದ್ದಾನೆ. ಆತನು ತಾನು ನಿರ್ಮಿಸಿದವುಗಳಿಗೆಲ್ಲಾ ಕನಿಕರ ತೋರಿಸುವನು. |
10
|
ಯೆಹೋವನೇ, ನಿನ್ನ ಸೃಷ್ಟಿಯೆಲ್ಲವೂ ನಿನ್ನನ್ನು ಸ್ತುತಿಸುತ್ತವೆ. ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು. |
11
|
ಅವರು ನಿನ್ನ ರಾಜ್ಯದ ಮಹತ್ವವನ್ನು ಕುರಿತು ಹೇಳುವರು. ನಿನ್ನ ಪರಾಕ್ರಮವನ್ನು ವರ್ಣಿಸುವರು. |
12
|
ಹೀಗೆ ನಿನ್ನ ಮಹತ್ಕಾರ್ಯಗಳನ್ನು ಇತರ ಜನರು ತಿಳಿದು ಕೊಳ್ಳುವರು. ನಿನ್ನ ರಾಜ್ಯದ ಮಹತ್ವವನ್ನೂ ವೈಭವವನ್ನೂ ಅವರು ತಿಳಿದುಕೊಳ್ಳುವರು. |
13
|
ಯೆಹೋವನೇ, ನಿನ್ನ ರಾಜ್ಯವು ಶಾಶ್ವತವಾಗಿದೆ. ನೀನು ಎಂದೆಂದಿಗೂ ಆಳುವೆ. |
14
|
ಯೆಹೋವನು ಬಿದ್ದುಹೋಗಿರುವವರನ್ನು ಮೇಲೆತ್ತುವವನೂ; ಕುಗ್ಗಿಹೋದವರನ್ನು ಉದ್ಧರಿಸುವವನೂ ಆಗಿದ್ದಾನೆ. |
15
|
ಎಲ್ಲಾ ಜೀವಿಗಳು ತಮ್ಮ ಆಹಾರಕ್ಕಾಗಿ ನಿನ್ನನ್ನೇ ನೋಡುತ್ತವೆ. ನೀನು ಸಮಯಕ್ಕೆ ಸರಿಯಾಗಿ ಅವುಗಳಿಗೆ ಆಹಾರವನ್ನು ಕೊಡುವೆ. |
16
|
ನೀನು ಕೈಯನ್ನು ತೆರೆದು ಜೀವಿಗಳ ಅವಶ್ಯಕತೆಗಳನ್ನೆಲ್ಲಾ ಪೂರೈಸುವೆ. |
17
|
ಯೆಹೋವನ ಕಾರ್ಯಗಳೆಲ್ಲ ನೀತಿಯುಳ್ಳವುಗಳಾಗಿವೆ. ಆತನ ಪ್ರತಿಯೊಂದು ಕಾರ್ಯದಲ್ಲೂ ಆತನ ಶಾಶ್ವತ ಪ್ರೀತಿ ತೋರಿಬರುವುದು. |
18
|
ಯೆಹೋವನು ತನ್ನ ಭಕ್ತರಿಗೆ ಸಮೀಪವಾಗಿದ್ದಾನೆ. ಆತನು ತನ್ನನ್ನು ಯಥಾರ್ಥವಾಗಿ ಕರೆಯುವ ಪ್ರತಿಯೊಬ್ಬರಿಗೂ ಸಮೀಪವಾಗಿದ್ದಾನೆ. |
19
|
ಆತನು ತನ್ನ ಭಕ್ತರ ಇಷ್ಟವನ್ನು ನೆರವೇರಿಸುವನು. ಆತನು ಅವರ ಮೊರೆಗೆ ಕಿವಿಗೊಟ್ಟು ಅವರನ್ನು ರಕ್ಷಿಸುವನು. |
20
|
ಯೆಹೋವನು ತನ್ನನ್ನು ಪ್ರೀತಿಸುವ ಪ್ರತಿಯೊಬ್ಬರನ್ನೂ ಸಂರಕ್ಷಿಸುವನು, ದುಷ್ಟರನ್ನಾದರೊ ಆತನು ನಾಶ ಮಾಡುವನು. |
21
|
ನಾನು ಯೆಹೋವನನ್ನು ಕೊಂಡಾಡುತ್ತೇನೆ! ಎಲ್ಲಾ ಜೀವಿಗಳು ಆತನ ಪವಿತ್ರ ಹೆಸರನ್ನು ಸದಾಕಾಲ ಕೊಂಡಾಡಲಿ! |
Psalms 145:1 Kannada Language Bible Words basic statistical display
COMING SOON ...