1
|
ಯೆಹೋವನಿಗೆ ಸ್ತೋತ್ರವಾಗಲಿ! ನನ್ನ ಮನವೇ, ಯೆಹೋವನನ್ನು ಸ್ತುತಿಸು! |
2
|
ನನ್ನ ಜೀವಮಾನವೆಲ್ಲಾ ಯೆಹೋವನನ್ನು ಸ್ತುತಿಸುವೆನು; ಆತನನ್ನು ಸಂಕೀರ್ತಿಸುವೆನು. |
3
|
ಸಹಾಯಕ್ಕಾಗಿ ನಿಮ್ಮ ನಾಯಕರುಗಳನ್ನು ಅವಲಂಬಿಸಿಕೊಳ್ಳಬೇಡಿ. ಮನುಷ್ಯರಲ್ಲಿ ಭರವಸವಿಡಬೇಡಿ, ಅವರು ನಿಮ್ಮನ್ನು ರಕ್ಷಿಸಲಾರರು. |
4
|
ಮನುಷ್ಯರು ಸತ್ತು ಸಮಾಧಿಗೆ ಸೇರುವರು; ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ. |
5
|
ಯಾರಿಗೆ ದೇವರು ಸಹಾಯಕನೋ; ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೊ, ಅವರೇ ಭಾಗ್ಯವಂತರು. |
6
|
ಯೆಹೋವನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು. ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು. |
7
|
ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ; ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡುಸುವನು. |
8
|
ಯೆಹೋವನು ಕುರುಡರಿಗೆ ದೃಷ್ಟಿಕೊಡುವನು. ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು. ಯೆಹೋವನು ನೀತಿವಂತರನ್ನು ಪ್ರೀತಿಸುವನು. |
9
|
ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ. ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ. ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶ ಮಾಡುವನು. |
10
|
ಯೆಹೋವನು ಸದಾಕಾಲ ಆಳುವನು! ಚೀಯೋನೇ, ನಿನ್ನ ದೇವರು ಶಾಶ್ವತವಾಗಿ ಆಳುವನು! ಯೆಹೋವನಿಗೆ ಸ್ತೋತ್ರವಾಗಲಿ! |
Psalms 146:10 Kannada Language Bible Words basic statistical display
COMING SOON ...