Bible Languages

Indian Language Bible Word Collections

Bible Versions

Books

Psalms Chapters

Psalms 146 Verses

Bible Versions

Books

Psalms Chapters

Psalms 146 Verses

1 ಯೆಹೋವನಿಗೆ ಸ್ತೋತ್ರವಾಗಲಿ! ನನ್ನ ಮನವೇ, ಯೆಹೋವನನ್ನು ಸ್ತುತಿಸು!
2 ನನ್ನ ಜೀವಮಾನವೆಲ್ಲಾ ಯೆಹೋವನನ್ನು ಸ್ತುತಿಸುವೆನು; ಆತನನ್ನು ಸಂಕೀರ್ತಿಸುವೆನು.
3 ಸಹಾಯಕ್ಕಾಗಿ ನಿಮ್ಮ ನಾಯಕರುಗಳನ್ನು ಅವಲಂಬಿಸಿಕೊಳ್ಳಬೇಡಿ. ಮನುಷ್ಯರಲ್ಲಿ ಭರವಸವಿಡಬೇಡಿ, ಅವರು ನಿಮ್ಮನ್ನು ರಕ್ಷಿಸಲಾರರು.
4 ಮನುಷ್ಯರು ಸತ್ತು ಸಮಾಧಿಗೆ ಸೇರುವರು; ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ.
5 ಯಾರಿಗೆ ದೇವರು ಸಹಾಯಕನೋ; ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೊ, ಅವರೇ ಭಾಗ್ಯವಂತರು.
6 ಯೆಹೋವನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು. ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು.
7 ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ; ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡುಸುವನು.
8 ಯೆಹೋವನು ಕುರುಡರಿಗೆ ದೃಷ್ಟಿಕೊಡುವನು. ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು. ಯೆಹೋವನು ನೀತಿವಂತರನ್ನು ಪ್ರೀತಿಸುವನು.
9 ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ. ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ. ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶ ಮಾಡುವನು.
10 ಯೆಹೋವನು ಸದಾಕಾಲ ಆಳುವನು! ಚೀಯೋನೇ, ನಿನ್ನ ದೇವರು ಶಾಶ್ವತವಾಗಿ ಆಳುವನು! ಯೆಹೋವನಿಗೆ ಸ್ತೋತ್ರವಾಗಲಿ!

Psalms 146:6 Kannada Language Bible Words basic statistical display

COMING SOON ...

×

Alert

×