1
|
ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು. ನಮ್ಮ ದೇವರನ್ನು ಸಂಕೀರ್ತಿಸಿರಿ. ಆತನನ್ನು ಸ್ತುತಿಸುವುದು ಒಳ್ಳೆಯದೂ ಸಂತೋಷಕರವೂ ಆಗಿದೆ. |
2
|
ಯೆಹೋವನು ಜೆರುಸಲೇಮನ್ನು ಕಟ್ಟಿದನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದ ಇಸ್ರೇಲರನ್ನು ಆತನು ಹಿಂದಕ್ಕೆ ಕರೆತಂದನು. |
3
|
ಅವರ ಒಡೆದ ಹೃದಯಗಳನ್ನು ಆತನು ವಾಸಿಮಾಡುವನು; ಅವರ ಗಾಯಗಳನ್ನು ಕಟ್ಟುವನು. |
4
|
ಆತನು ನಕ್ಷತ್ರಗಳನ್ನು ಎಣಿಸುವನು. ಆತನಿಗೆ ಪ್ರತಿಯೊಂದು ನಕ್ಷತ್ರದ ಹೆಸರು ತಿಳಿದಿದೆ. |
5
|
ನಮ್ಮ ಒಡೆಯನು ಬಹು ದೊಡ್ಡವನೂ ಪರಾಕ್ರಮಿಯೂ ಆಗಿದ್ದಾನೆ. ಆತನ ಜ್ಞಾನವು ಅಪರಿಮಿತವಾಗಿದೆ. |
6
|
ಯೆಹೋವನು ದೀನರಿಗೆ ಆಧಾರವಾಗಿದ್ದಾನೆ. ದುಷ್ಟರನ್ನಾದರೊ ನಾಚಿಕೆಗೆ ಗುರಿಪಡಿಸುವನು. |
7
|
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ನಮ್ಮ ದೇವರನ್ನು ಹಾರ್ಪ್ವಾದ್ಯಗಳೊಂದಿಗೆ ಸ್ತುತಿಸಿರಿ. |
8
|
ಆತನು ಆಕಾಶವನ್ನು ಮೋಡಗಳಿಂದ ತುಂಬಿಸುವನು; ಭೂಮಿಗಾಗಿ ಮಳೆಯನ್ನು ಸುರಿಸುವನು; ಬೆಟ್ಟಗಳ ಮೇಲೆ ಹುಲ್ಲನ್ನು ಬೆಳೆಯಮಾಡುವನು. |
9
|
ದೇವರು ಪ್ರಾಣಿಗಳಿಗೂ ಪಕ್ಷಿಮರಿಗಳಿಗೂ ಆಹಾರ ಕೊಡುವನು. |
10
|
ಯುದ್ಧದ ಕದುರೆಗಳಾಗಲಿ ಶಕ್ತಿಯುತರಾದ ಸೈನಿಕರಾಗಲಿ ಆತನನ್ನು ಮೆಚ್ಚಿಸಲಾರವು. |
11
|
ಯೆಹೋವನು ತನ್ನನ್ನು ಆರಾಧಿಸುವ ಜನರಲ್ಲೇ ಸಂತೋಷಪಡುವನು. ಆತನು ತನ್ನ ಶಾಶ್ವತ ಪ್ರೀತಿಯಲ್ಲಿ ಭರವಸವಿಟ್ಟಿರುವವರನ್ನು ಮೆಚ್ಚಿಕೊಳ್ಳುವನು. |
12
|
ಜೆರುಸಲೇಮೇ, ಯೆಹೋವನನ್ನು ಸ್ತುತಿಸು! ಚೀಯೋನೇ, ನಿನ್ನ ದೇವರನ್ನು ಸ್ತುತಿಸು! |
13
|
ಜೆರುಸಲೇಮೇ, ದೇವರು ನಿನ್ನ ಬಾಗಿಲುಗಳ ಸರಳುಗಳನ್ನು ಬಲಪಡಿಸುವನು; ನಿನ್ನ ನಗರದಲ್ಲಿರುವ ಜನರನ್ನು ಆಶೀರ್ವದಿಸುವನು. |
14
|
ಆತನು ನಿಮ್ಮ ದೇಶದಲ್ಲಿ ಶಾಂತಿಯನ್ನು ನೆಲೆಗೊಳಿಸಿದನು. ನಿಮ್ಮನ್ನು ಶ್ರೇಷ್ಠವಾದ ಗೋಧಿಯಿಂದ ತೃಪ್ತಿ ಪಡಿಸಿದನು. |
15
|
ಆತನು ಭೂಮಿಗೆ ಆಜ್ಞಾಪಿಸಲು ಅದು ಕೂಡಲೆ ವಿಧೇಯವಾಗುತ್ತದೆ. |
16
|
ನೆಲವು ಉಣ್ಣೆಯಂತೆ ಬಿಳುಪಾಗುವವರೆಗೆ ಆತನು ಮಂಜನ್ನು ಬೀಳಿಸುವನು; ಹಿಮವನ್ನು ಗಾಳಿಯ ಮೂಲಕ ಧೂಳಿನಂತೆ ಹರಡುವನು. |
17
|
ಆತನು ಆಕಾಶದಿಂದ ಕಲ್ಲುಗಳಂತಿರುವ ಆಲಿಕಲ್ಲನ್ನು ಸುರಿಸುವನು; ಯಾವನೂ ಚಳಿಯಲ್ಲಿ ಹೊರಗಡೆ ಇರಲಾರನು. |
18
|
ಆತನು ಮತ್ತೊಂದು ಆಜ್ಞೆಯನ್ನು ಹೊರಡಿಸುವನು; ಆಗ ಬಿಸಿಗಾಳಿಯು ಮತ್ತೆ ಬೀಸುವುದು; ಮಂಜು ಕರಗಿ ಹೋಗುವುದು. ನೀರು ಹರಿಯ ತೊಡಗುವುದು. |
19
|
ಆತನು ಯಾಕೋಬಿಗೆ ತನ್ನ ಆಜ್ಞೆಗಳನ್ನು ಕೊಟ್ಟನು. ಇಸ್ರೇಲಿಗೆ ತನ್ನ ಕಟ್ಟಳೆಗಳನ್ನೂ ನಿಯಮಗಳನ್ನೂ ಕೊಟ್ಟನು. |
20
|
ಆತನು ಬೇರೆ ಯಾವ ಜನಾಂಗದವರಿಗೂ ಹೀಗೆ ಮಾಡಲಿಲ್ಲ. ಆತನು ಅನ್ಯಜನಾಂಗಗಳವರಿಗೆ ತನ್ನ ಕಟ್ಟಳೆಗಳನ್ನು ಉಪದೇಶಿಸಲಿಲ್ಲ. ಯೆಹೋವನಿಗೆ ಸ್ತೋತ್ರವಾಗಲಿ! |
Psalms 147:10 Kannada Language Bible Words basic statistical display
COMING SOON ...