Bible Languages

Indian Language Bible Word Collections

Bible Versions

Books

Psalms Chapters

Psalms 148 Verses

Bible Versions

Books

Psalms Chapters

Psalms 148 Verses

1 ಯೆಹೋವನಿಗೆ ಸ್ತೋತ್ರವಾಗಲಿ! ಮೇಲೋಕದಲ್ಲಿರುವ ದೇವದೂತರೇ, ಆಕಾಶಮಂಡಲದಿಂದ ಯೆಹೋವನನ್ನು ಸ್ತುತಿಸಿರಿ!
2 ಎಲ್ಲಾ ದೂತರುಗಳೇ, ಆತನಿಗೆ ಸ್ತೋತ್ರಮಾಡಿರಿ! ಆತನ ಎಲ್ಲಾಸೈನ್ಯಗಳೇ, ಆತನನ್ನು ಸ್ತುತಿಸಿರಿ!
3 ಸೂರ್ಯಚಂದ್ರರುಗಳೇ, ಆತನನ್ನು ಸ್ತುತಿಸಿರಿ! ಆಕಾಶದಲ್ಲಿರುವ ನಕ್ಷತ್ರಗಳೇ, ಬೆಳಕುಗಳೇ, ಆತನನ್ನು ಸ್ತುತಿಸಿರಿ! ಆತನಿಗೆ ಸ್ತೋತ್ರಮಾಡಿರಿ! ಆತನ ಸರ್ವಸೈನ್ಯಗಳೇ ಆತನನ್ನು ಸ್ತುತಿಸಿರಿ!
4 ಉನ್ನತೋನ್ನತವಾದ ಆಕಾಶವೇ, ಆತನನ್ನು ಸ್ತುತಿಸು! ಆಕಾಶದ ಮೇಲಿರುವ ನೀರುಗಳೇ ಆತನನ್ನು ಸ್ತುತಿಸಿರಿ!
5 ಅವು ಯೆಹೋವನ ಹೆಸರನ್ನು ಸ್ತುತಿಸಲಿ. ಆತನು ಆಜ್ಞಾಪಿಸಲು ಅವುಗಳೆಲ್ಲಾ ಸೃಷ್ಟಿಯಾದವು!
6 ಇವುಗಳೆಲ್ಲಾ ಶಾಶ್ವತವಾಗಿರುವಂತೆ ಆತನು ಮಾಡಿದನು. ಎಂದಿಗೂ ಕೊನೆಗೊಳ್ಳದ ನಿಯಮಗಳನ್ನು ಆತನು ಮಾಡಿದನು.
7 ಭೂಮಿಯ ಮೇಲಿರುವ ಸಮಸ್ತವೇ, ಯೆಹೋವನಿಗೆ ಸ್ತೋತ್ರಮಾಡಿರಿ! ಮಹಾಸಮುದ್ರ ಪ್ರಾಣಿಗಳೇ, ಆತನನ್ನು ಸ್ತುತಿಸಿರಿ!
8 ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.
9 ಆತನು ಬೆಟ್ಟಗಳನ್ನೂ ಗುಡ್ಡಗಳನ್ನೂ ಹಣ್ಣಿನ ಮರಗಳನ್ನೂ ದೇವದಾರು ಮರಗಳನ್ನೂ ಸೃಷ್ಟಿಮಾಡಿದನು.
10 ಆತನು ಎಲ್ಲಾ ಕಾಡುಪ್ರಾಣಿಗಳನ್ನೂ ಪಶುಗಳನ್ನೂ ಕ್ರಿಮಿಕೀಟಗಳನ್ನೂ ಪಕ್ಷಿಗಳನ್ನೂ ಸೃಷ್ಟಿಮಾಡಿದನು.
11 ಆತನು ಭೂಮಿಯ ಮೇಲೆ ರಾಜರುಗಳನ್ನೂ ಜನಾಂಗಗಳನ್ನೂ ನಾಯಕರುಗಳನ್ನೂ ನ್ಯಾಯಾಧಿಪತಿಗಳನ್ನೂ ಸೃಷ್ಟಿಮಾಡಿದನು.
12 ಆತನು ಪ್ರಾಯಸ್ಥರಾದ ಸ್ತ್ರೀ ಪುರುಷರನ್ನೂ ವೃದ್ಧರನ್ನೂ ಯೌವನಸ್ಥರನ್ನೂ ಸೃಷ್ಟಿಸಿದನು.
13 ಯೆಹೋವನ ಹೆಸರನ್ನು ಕೊಂಡಾಡಿರಿ! ಆತನ ಹೆಸರನ್ನು ಶಾಶ್ವತವಾಗಿ ಸನ್ಮಾನಿಸಿರಿ! ಭೂಮ್ಯಾಕಾಶಗಳಲ್ಲಿರುವ ಸಮಸ್ತವೇ, ಆತನನ್ನು ಸ್ತುತಿಸು!
14 ಆತನು ತನ್ನ ಜನರನ್ನು ಬಲಿಷ್ಠರನ್ನಾಗಿ ಮಾಡುತ್ತಾನೆ. ಆತನ ಭಕ್ತರನ್ನು ಜನರು ಹೊಗಳುವರು. ಜನರು ಇಸ್ರೇಲರನ್ನು ಹೊಗಳುವರು. ಆತನು ಹೋರಾಡುತ್ತಿರುವುದು ಅವರಿಗಾಗಿಯೇ. ಯೆಹೋವನಿಗೆ ಸ್ತೋತ್ರವಾಗಲಿ!

Psalms 148:1 Kannada Language Bible Words basic statistical display

COMING SOON ...

×

Alert

×