Bible Languages

Indian Language Bible Word Collections

Bible Versions

Books

Psalms Chapters

Psalms 15 Verses

Bible Versions

Books

Psalms Chapters

Psalms 15 Verses

1 ಯೆಹೋವನೇ, ನಿನ್ನ ಪವಿತ್ರ ಗುಡಾರದಲ್ಲಿ ಎಂಥವನು ವಾಸಿಸಬಲ್ಲನು? ನಿನ್ನ ಪವಿತ್ರ ಪರ್ವತದ ಮೇಲೆ ಎಂಥವನು ನೆಲಸಬಲ್ಲನು?
2 ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಹೃದಯದಿಂದ ಸತ್ಯವನ್ನು ಮಾತಾಡುವವನೂ ಆಗಿರಬೇಕು.
3 ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು.
4 ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.
5 ಅವನು ಕೊಟ್ಟ ಸಾಲಕ್ಕೆ ಬಡ್ಡಿಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.

Psalms 15:1 Kannada Language Bible Words basic statistical display

COMING SOON ...

×

Alert

×