Bible Languages

Indian Language Bible Word Collections

Bible Versions

Books

Psalms Chapters

Psalms 17 Verses

Bible Versions

Books

Psalms Chapters

Psalms 17 Verses

1 ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮೊರೆಯನ್ನು ಆಲೈಸು. ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.
2 ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನಿನ್ನಿಂದಲೇ ಬರಲಿ. ನೀನು ಸತ್ಯವನ್ನು ನೋಡಬಲ್ಲಾತನಾಗಿರುವೆ.
3 ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪ್ರಶ್ನಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.
4 ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ.
5 ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ. ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ.
6 ದೇವರೇ, ನಾನು ನಿನ್ನನ್ನು ಕರೆದಾಗಲ್ಲೆಲ್ಲಾ, ನೀನು ನನಗೆ ಉತ್ತರಿಸಿದೆ. ಆದ್ದರಿಂದ ಈಗಲೂ ನನಗೆ ಕಿವಿಗೊಡು.
7 ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ ನೀನು ಸಹಾಯಮಾಡುವೆ; ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು. ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು.
8 ನಿನ್ನ ಕಣ್ಣಿನ ಗುಡ್ಡೆಯಂತೆ ನನ್ನನ್ನು ಸಂರಕ್ಷಿಸು. ನಿನ್ನ ರೆಕ್ಕೆಗಳ ಮರೆಯಲ್ಲಿ ನನ್ನನ್ನು ಆಡಗಿಸಿಕೊ.
9 ಯೆಹೋವನೇ, ನನ್ನನ್ನು ನಾಶಮಾಡಬೇಕೆಂದಿರುವ ದುಷ್ಟರಿಂದ ನನ್ನನ್ನು ತಪ್ಪಿಸಿ ಕಾಪಾಡು. ನನಗೆ ಕೇಡು ಮಾಡಬೇಕೆಂದು ಸುತ್ತುಗಟ್ಟಿರುವ ಜನರಿಂದ ನನ್ನನ್ನು ಸಂರಕ್ಷಿಸು.
10 ಆ ದುಷ್ಟರು ಗರ್ವಿಷ್ಠರಾಗಿದ್ದಾರೆ. ಅವರು ಜಂಬ ಕೊಚ್ಚಿಕೊಳ್ಳುತ್ತಾರೆ.
11 ಅವರು ನನ್ನನ್ನು ಬೆನ್ನಟ್ಟಿ ಬಂದು ಸುತ್ತುಗಟ್ಟಿದ್ದಾರೆ; ಆಕ್ರಮಣಮಾಡಲು ಸಿದ್ಧರಾಗಿದ್ದಾರೆ.
12 ಅವರು ಬೇಟೆಗಾಗಿ ಕಾಯುತ್ತಿರುವ ಸಿಂಹಗಳಂತಿದ್ದಾರೆ; ಅಡಗಿಕೊಂಡು ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಂತಿದ್ದಾರೆ.
13 ಯೆಹೋವನೇ, ಎದ್ದೇಳು; ವೈರಿಗಳ ಬಳಿಗೆ ಹೋಗು. ಅವರನ್ನು ಶರಣಾಗತರನ್ನಾಗಿ ಮಾಡು. ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು.
14 ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.
15 ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.

Psalms 17:12 Kannada Language Bible Words basic statistical display

COMING SOON ...

×

Alert

×